ಬ್ರೇಕಿಂಗ್ ನ್ಯೂಸ್
25-08-26 09:00 pm HK News Staffer ಕರಾವಳಿ
ಪುತ್ತೂರು, ಆ.25 : ಕಡಿಮೆ ಅವಧಿಯಲ್ಲಿ ದುಪ್ಪಟ್ಟು ಲಾಭದ ಆಮಿಷ ತೋರಿಸಿ, ರಿಯಾಯಿತಿ ದರದಲ್ಲಿ ಬೆಲೆಬಾಳುವ ವಸ್ತುಗಳ ಖರೀದಿ ಹಾಗೂ ಹೊಸ ಸದಸ್ಯರನ್ನು ಸೇರ್ಪಡೆ ಮಾಡಿದರೆ ಭಾರೀ ಕಮಿಷನ್ ನೀಡುವುದಾಗಿ ನಂಬಿಸಿ ಸಾರ್ವಜನಿಕರಿಂದ ಹಣ ಸಂಗ್ರಹಿಸುತ್ತಿದ್ದ ಆರೋಪದಲ್ಲಿ ಕಡಬ ಪೊಲೀಸರು ದಾಳಿ ನಡೆಸಿ ಎಂಟು ಮಂದಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಕಡಬ ಪೇಟೆಯ ಅಂಬೇಡ್ಕರ್ ಭವನದಲ್ಲಿ ಆ.23ರಂದು ಸಾರ್ವಜನಿಕರನ್ನು ಸೇರಿಸಿ ಸಭೆ ನಡೆಸುತ್ತಿದ್ದಾಗ ಪೊಲೀಸರು ದಾಳಿ ನಡೆಸಿದ್ದು, ಹಾವೇರಿ ಮೂಲದ ‘ಕಿಂಗ್ಸ್ ಬಜಾರ್’ ಸಂಸ್ಥೆಯ ಹೆಸರಿನಲ್ಲಿ ಸದಸ್ಯರನ್ನು ಸೇರ್ಪಡೆಗೊಳಿಸಿ ಹಣ ಹೂಡಿಕೆ ಮಾಡಿಸುತ್ತಿರುವುದು ಕಂಡುಬಂದಿದೆ. ಗುಪ್ತ ಸಭೆ ನಡೆಸುತ್ತಿರುವ ಬಗ್ಗೆ ಕಡಬ ಪೊಲೀಸರಿಗೆ ಮಾಹಿತಿ ಲಭಿಸಿತ್ತು. ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಸಾರ್ವಜನಿಕರಿಗೆ ಯೋಜನೆಯ ಸ್ವರೂಪ, ಸದಸ್ಯತ್ವ ಹಾಗೂ ಹೂಡಿಕೆಯಿಂದ ಯಾವ ರೀತಿ ಲಾಭ ದೊರೆಯಲಿದೆ ಎನ್ನುವ ಬಗ್ಗೆ ಮಾಹಿತಿ ನೀಡುತ್ತಿದ್ದರು.
ಹಣ ಹೂಡಿಕೆಗೆ ಭಾರಿ ಲಾಭದ ಆಮಿಷ
ಸಂಸ್ಥೆಗೆ ಸದಸ್ಯರಾಗಿ ಹೂಡಿಕೆ ಮಾಡಿದರೆ ಕಡಿಮೆ ಅವಧಿಯಲ್ಲಿ ಹೆಚ್ಚಿನ ಲಾಭ ಪಡೆಯಬಹುದು, ರಿಯಾಯಿತಿ ದರದಲ್ಲಿ ಬೆಲೆಬಾಳುವ ವಸ್ತುಗಳನ್ನು ಖರೀದಿಸಬಹುದು ಹಾಗೂ ಹೊಸ ಸದಸ್ಯರನ್ನು ಸೇರಿಸಿದರೆ ಪ್ರತಿದಿನ ಕಮಿಷನ್ ಪಡೆಯಬಹುದು ಎಂದು ಸಾರ್ವಜನಿಕರನ್ನು ನಂಬಿಸಿ ಹಣ ಸಂಗ್ರಹಿಸುತ್ತಿದ್ದರು. ಸ್ಥಳೀಯವಾಗಿ ಕೆಲವರನ್ನು ಏಜೆಂಟರನ್ನಾಗಿ ಬಳಸಿಕೊಂಡು ಸದಸ್ಯರ ಸೇರ್ಪಡೆ ಮತ್ತು ಹಣ ಸಂಗ್ರಹಿಸುವ ಚಟುವಟಿಕೆ ನಡೆಸಲಾಗುತ್ತಿರುವ ಬಗ್ಗೆ ಮಾಹಿತಿ ಆಧರಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಪೊಲೀಸರು ಅನಧಿಕೃತ ಹಣ ಸಂಗ್ರಹಿಸುತ್ತಿದ್ದಾರೆಂಬ ನೆಲೆಯಲ್ಲಿ ಪ್ರಕರಣ ದಾಖಲಿಸಿದ್ದು ‘ಕಿಂಗ್ಸ್ ಬಜಾರ್’ ಸಂಸ್ಥೆಯನ್ನು ಮೊದಲ ಆರೋಪಿಯನ್ನಾಗಿ ಹೆಸರಿಸಲಾಗಿದೆ. ಸ್ಥಳದಲ್ಲಿ ಸೇರಿದ್ದ ಸಂಸ್ಥೆಯ ಪ್ರಮುಖರು ಎನ್ನಲಾದ ಸುಬ್ರಹ್ಮಣ್ಯ ಶಗ್ರಿತ್ತಾಯ (50), ಗುರುಮೂರ್ತಿ (54), ಸುರೇಶ್ ಆರ್. (55), ಬಾಲಕೃಷ್ಣ ಪಿ.ಹೆಚ್. (42), ಕಿರಣ್ ಕುಮಾರ್ (21), ಶ್ರೀನಾಥ್ (48) ಹಾಗೂ ಸಂದೇಶ್ ಸೇರಿದಂತೆ ಏಳು ಮಂದಿಯನ್ನು ಆರೋಪಿಗಳನ್ನಾಗಿ ಸೇರಿಸಿದ್ದಾರೆ. ಕಡಬ ಪೊಲೀಸ್ ಠಾಣೆಯಲ್ಲಿ ಚಿಟ್ ಫಂಡ್ ಮತ್ತು ಹಣ ಅಕ್ರಮ ವರ್ಗಾವಣೆ ನಿಷೇಧ ಕಾಯ್ದೆ 1978ರ ಕಲಂ 4, 5 ಮತ್ತು 6ರ ಅಡಿಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm