ಸೆ.18ರಂದು ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಕರಾವಳಿಯ ಆದ್ಯತೆ ಸಿದ್ಧಪಡಿಸಲು ಎಲ್ಲ ಇಲಾಖೆಗಳಿಗೆ ಸೂಚನಾ ಪತ್ರ

31-08-26 07:12 pm       HK News Staffer   ಕರಾವಳಿ

ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಮಂಗಳೂರಿನಲ್ಲಿ ಇದೇ ಸೆ.18ರಂದು ಸಚಿವ ಸಂಪುಟ ಸಭೆ ನಡೆಯಲಿದೆ. ಈ ಬಗ್ಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಎಲ್ಲ ಇಲಾಖೆಗಳ ಕಾರ್ಯದರ್ಶಿಗಳಿಗೆ ಸೂಚನಾ ಪತ್ರ ರವಾನಿಸಿದ್ದಾರೆ.

ಮಂಗಳೂರು, ಆ.31: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಮಂಗಳೂರಿನಲ್ಲಿ ಇದೇ ಸೆ.18ರಂದು ಸಚಿವ ಸಂಪುಟ ಸಭೆ ನಡೆಯಲಿದೆ. ಈ ಬಗ್ಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಎಲ್ಲ ಇಲಾಖೆಗಳ ಕಾರ್ಯದರ್ಶಿಗಳಿಗೆ ಸೂಚನಾ ಪತ್ರ ರವಾನಿಸಿದ್ದಾರೆ. 

ರಾಜ್ಯ ಸಚಿವ ಸಂಪುಟದ ಸಭೆಯನ್ನು ಇದೇ ಸೆಪ್ಟೆಂಬರ್ 18ರಂದು ಮಂಗಳೂರಿನಲ್ಲಿ ನಡೆಸಲು ಉದ್ದೇಶಿಸಲಾಗಿದೆ. ಸದರಿ ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಜಿಲ್ಲೆಗಳ ಪ್ರಸ್ತಾವನೆಗಳಿಗೆ ಆದ್ಯತೆ ನೀಡಲಾಗುತ್ತದೆ. ಆದ್ದರಿಂದ ಕರಾವಳಿ ಜಿಲ್ಲೆಗಳ ಪ್ರಸ್ತಾವನೆಯನ್ನು ಸಿದ್ಧಪಡಿಸಿ ಸಚಿವ ಸಂಪುಟದ ಟಿಪ್ಪಣಿಯನ್ನು ಮಂಡಿಸಲು ಕೂಡಲೇ ಕ್ರಮ ಕೈಗೊಳ್ಳಲು ಈ ಮೂಲಕ ತಿಳಿಸಿದೆ ಎಂದು ಶಾಲಿನಿ ರಜನೀಶ್ ಅವರು ಸೂಚನಾ ಪತ್ರದಲ್ಲಿ ತಿಳಿಸಿದ್ದಾರೆ. 

ಇತ್ತೀಚೆಗೆ ನಡೆದ ಅಧಿವೇಶನದಲ್ಲಿ ಸಿಎಂ ಡಿಕೆ ಶಿವಕುಮಾರ್ ಅವರು ಸದ್ಯದಲ್ಲೇ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸಲಿದ್ದು ಅದರಲ್ಲಿ ಕರಾವಳಿಯ ಆದ್ಯತೆಗಳನ್ನು ಪರಿಗಣಿಸುವುದಾಗಿ ಹೇಳಿಕೆ ನೀಡಿದ್ದರು.