ಬ್ರೇಕಿಂಗ್ ನ್ಯೂಸ್
31-08-26 11:04 pm HK News Staffer ಕರಾವಳಿ
ಮಂಗಳೂರು, ಆ.31: ಉಸ್ತುವಾರಿ ಸಚಿವರಿಗೆ ಮತ್ತು ಇಲಾಖೆಯ ಸಚಿವರಿಗೆ ಹಣ ಸಂದಾಯ ಮಾಡಲಿಕ್ಕಿದೆ ಎಂದು ಹೇಳಿ ಮಂಗಳೂರಿನ ಕೆಆರ್ ಐಡಿಎಲ್ ಅಧಿಕಾರಿಗಳು ಗುತ್ತಿಗೆದಾರರಿಗೆ ಹಣಕ್ಕಾಗಿ ಒತ್ತಡ ಹೇರಿ ಬೆದರಿಕೆ ಒಡ್ಡುತ್ತಿದ್ದಾರೆ ಎಂದು ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕ್ ರೈ ಅವರು ಸಿಎಂ ಡಿ.ಕೆ.ಶಿವಕುಮಾರ್ ಗೆ ಪತ್ರ ಬರೆದಿದ್ದು ಕ್ರಮಕ್ಕೆ ಆಗ್ರಹಿಸಿದ್ದಾರೆ.
ಮಂಗಳೂರು ಕೆಆರ್ ಐಡಿಎಲ್ ವಿಭಾಗದ ಕಾರ್ಯ ನಿರ್ವಾಹಕ ಇಂಜಿನಿಯರ್ ವಿಜಯ್ ಹಾಗೂ ಕಿರಿಯ ಇಂಜಿನಿಯರ್ ಪ್ರಜ್ವಲ್ ಎಂಬಿಬ್ಬರು ಹಣಕ್ಕಾಗಿ ಒತ್ತಡ ಹೇರಿ ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಕಾಂಗ್ರೆಸ್ ಶಾಸಕರೇ ಮುಖ್ಯಮಂತ್ರಿಗೆ ದೂರು ಸಲ್ಲಿಸಿದ್ದು ದೂರಿನ ಪ್ರತಿಯನ್ನು ಮಾಧ್ಯಮಕ್ಕೆ ಬಿಡುಗಡೆ ಮಾಡಿದ್ದಾರೆ.
ಇವರ ಕರ್ತವ್ಯ ನಿರ್ವಹಣೆ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಗಂಭೀರ ಆರೋಪಗಳು ಹಾಗೂ ದೂರುಗಳು ಕೇಳಿಬಂದಿವೆ. ಕಾಮಗಾರಿ ನಿರ್ವಹಿಸುತ್ತಿರುವ ಗುತ್ತಿಗೆದಾರರಿಗೆ ವಿವಿಧ ರೀತಿಯಲ್ಲಿ ಕಿರುಕುಳ ನೀಡುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಇಲಾಖೆಯ ಸಚಿವರ ಹೆಸರಲ್ಲಿ ಮಾಸಿಕವಾಗಿ ಹಣ ವಸೂಲಿ ಮಾಡುತ್ತಿದ್ದಾರೆ. ಸಚಿವರಿಗೆ ಹಣ ಸಂದಾಯ ಮಾಡಬೇಕಾಗುತ್ತದೆ ಎಂದು ಹೇಳಿ ಗುತ್ತಿಗೆದಾರರಿಂದ ಅಧಿಕಾರಿಗಳ ಹಣ ವಸೂಲಿ ಮಾಡುತ್ತಿದ್ದಾರೆ. ಕೆ.ಆರ್.ಐ.ಡಿ.ಎಲ್. ಚಾರ್ಜ್ ಹೆಸರಿನಲ್ಲಿ ಶೇ.7ರ ವರೆಗೆ ಹೆಚ್ಚುವರಿ ಹಣವನ್ನು ಪಡೆಯಲಾಗುತ್ತಿದೆ. ಈ ಬಗ್ಗೆ ಪ್ರಶ್ನಿಸಿದ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡಿರುವ ಬಗ್ಗೆ ಗಂಭೀರ ದೂರುಗಳು ಬಂದಿರುತ್ತವೆ.
ಸಾರ್ವಜನಿಕ ಹಣದಿಂದ ಕೈಗೊಳ್ಳಲಾಗುವ ಅಭಿವೃದ್ಧಿ ಕಾಮಗಾರಿಗಳಲ್ಲಿ ಪಾರದರ್ಶಕತೆ, ಗುಣಮಟ್ಟ ಹಾಗೂ ನಿಯಮಾನುಸಾರ ಕಾರ್ಯನಿರ್ವಹಣೆ ಅತ್ಯಂತ ಅಗತ್ಯವಾಗುತ್ತದೆ. ಆದರೆ, ಮೇಲ್ಕಂಡ ಅಧಿಕಾರಿಗಳ ವಿರುದ್ಧ ಕೇಳಿಬರುತ್ತಿರುವ ಆರೋಪಗಳು ಸತ್ಯವೇ ಎಂದು ಪರಿಶೀಲನೆ ಮಾಡಬೇಕು. ಸತ್ಯವಾದರೆ, ಅದು ಸಾರ್ವಜನಿಕ ಹಣದ ದುರುಪಯೋಗಕ್ಕೆ ಕಾರಣವಾಗುತ್ತದೆ. ಇಲಾಖೆಯ ಘನತೆ ಹಾಗೂ ಸಾರ್ವಜನಿಕರ ವಿಶ್ವಾಸಕ್ಕೆ ಧಕ್ಕೆ ಉಂಟುಮಾಡುವ ಗಂಭೀರ ವಿಷಯವಾಗಿದೆ.
ಆದ್ದರಿಂದ, ಮೇಲ್ಕಂಡ ಅಧಿಕಾರಿಗಳ ವಿರುದ್ಧ ಬಂದಿರುವ ದೂರುಗಳ ಹಿನ್ನೆಲೆಯಲ್ಲಿ ನಿಷ್ಪಕ್ಷಪಾತ ಹಾಗೂ ಸಮಗ್ರ ಇಲಾಖಾ ತನಿಖೆ ನಡೆಸಬೇಕು. ತನಿಖೆ ಪೂರ್ಣಗೊಳ್ಳುವವರೆಗೆ ಸದ್ರಿ ಅಧಿಕಾರಿಗಳನ್ನು ಅಮಾನತುಗೊಳಿಸಬೇಕು. ಆಡಳಿತಾತ್ಮಕ ದೃಷ್ಟಿಯಿಂದ ಬೇರೆಡೆಗೆ ವರ್ಗಾವಣೆ ಮಾಡುವ ಕುರಿತು ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ ಎಂದು ಅಧಿಕಾರಿಗಳ ವಿರುದ್ಧ ಶಾಸಕ ಅಶೋಕ ರೈ ಮುಖ್ಯಮಂತ್ರಿಗೆ ದೂರು ನೀಡಿದ್ದಾರೆ.
31-08-26 08:29 pm
HK News Staffer
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
31-08-26 01:28 pm
HK News Staffer
Mohan Bhagwat: ಹಿಂದೂ ರಾಷ್ಟ್ರದ ಪರಿಕಲ್ಪನೆ ಮುಸ್ಲ...
30-08-26 02:41 pm
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
31-08-26 11:04 pm
HK News Staffer
ಸೆ.18ರಂದು ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಕರಾವಳ...
31-08-26 07:12 pm
ಪ್ರಿಯಾಂಕ್ ಖರ್ಗೆ ಮೇಲೆ 9 ಕೇಸ್ ಇದೆ, ಅವರ ಮೇಲೆ ರೌಡ...
31-08-26 06:07 pm
ಮಂಗಳೂರಿನಲ್ಲಿ ಆಟೋ ದರ ಪರಿಷ್ಕರಣೆ ; ಕನಿಷ್ಠ ದರ 40...
31-08-26 05:09 pm
ಮಧ್ಯರಾತ್ರಿ ಅಪಾರ್ಟ್ಮೆಂಟ್ ಲಿಫ್ಟ್ನಲ್ಲಿ ಸಿಲುಕಿದ...
31-08-26 04:19 pm
31-08-26 09:50 pm
HK News Staffer
ಮೃತ ಗಂಡನ ಪಿಂಚಣಿ ನೀಡದೆ ನಿರ್ಲಕ್ಷ್ಯ ; ಮಂಗಳೂರಿನ ಕ...
31-08-26 07:10 pm
ದೆಹಲಿಯಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ; ಡ್ರಾಪ್ ನೀ...
31-08-26 03:48 pm
ಮಂಗಳೂರಿನ ‘ಸುರಕ್ಷಾ’ ಆಂಬುಲೆನ್ಸ್ ಚಾಲಕ ಕುಡಿದು ಫುಲ...
31-08-26 01:49 pm
Mangalore Murder: ಕುಡಿದ ಮತ್ತಿನಲ್ಲಿ ಮೊಬೈಲ್ ವಿಚ...
31-08-26 12:01 pm