ಬ್ರೇಕಿಂಗ್ ನ್ಯೂಸ್
02-09-26 07:09 pm HK News Staffer ಕರಾವಳಿ
ಮಂಗಳೂರು, ಆ 02: ರಾಜ್ಯದ ಜನರಿಗೆ ಗುಣಮಟ್ಟದ, ಶುದ್ಧ ಹಾಗೂ ಆರೋಗ್ಯಪೂರ್ಣ ಆಹಾರ ಒದಗಿಸುವುದು ಸರ್ಕಾರದ ಕರ್ತವ್ಯವಾಗಿದ್ದು, ಆಹಾರ ಸುರಕ್ಷತಾ ಕಾಯ್ದೆಯ ನಿಯಮಗಳನ್ನು ಉಲ್ಲಂಘಿಸುವ ಹೋಟೆಲ್, ಕ್ಯಾಟರಿಂಗ್ ಹಾಗೂ ಪಿ.ಜಿ.ಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು. ಈ ವಿಚಾರದಲ್ಲಿ ನನ್ನ ಆಪ್ತರು ಅಥವಾ ಪರಿಚಯಸ್ಥರೇ ಸಿಕ್ಕಿಬಿದ್ದರೂ ಯಾವುದೇ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು. ಟಿ. ಖಾದರ್ ಸ್ಪಷ್ಟ ಎಚ್ಚರಿಕೆ ನೀಡಿದ್ದಾರೆ.
ಬುಧವಾರ ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ನಡೆದ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಈಗಾಗಲೇ ಸ್ವೀಟ್ ಮಳಿಗೆಗಳು ಸೇರಿದಂತೆ ವಿವಿಧ ಆಹಾರ ಘಟಕಗಳ ಮೇಲೆ ದಾಳಿ ನಡೆಸಿ ಎರಡು ಘಟಕಗಳನ್ನು ಬಂದ್ ಮಾಡಲಾಗಿದೆ. ಇದು ಕೇವಲ ಬೆಂಗಳೂರಿಗೆ ಮಾತ್ರ ಸೀಮಿತವಾಗಿರದೆ ಮಂಗಳೂರು, ಉಡುಪಿ, ಹುಬ್ಬಳ್ಳಿ, ಬೆಳಗಾವಿ, ಮೈಸೂರಿನಂತಹ ನಗರಗಳಲ್ಲೂ ತೀವ್ರಗೊಳ್ಳಲಿದೆ. ಮಂಗಳೂರಿನಲ್ಲೂ ಕೆಲವೆಡೆ ಪರಿಶೀಲನೆ ನಡೆಸಲಾಗಿದೆ ಎಂದರು.
ನನ್ನವರಿದ್ದರೂ ರಿಯಾಯಿತಿ ಇಲ್ಲ:
"ವ್ಯಾಪಾರಿಗಳನ್ನು ಮುಚ್ಚಿಸುವುದು ಅಥವಾ ಬೆದರಿಸುವುದು ನಮ್ಮ ಉದ್ದೇಶವಲ್ಲ. ಆದರೆ ಗ್ರಾಹಕರಿಗೆ ಮೋಸವಾಗಬಾರದು. ಹೋಟೆಲ್ ಮಾಲೀಕರು ನನ್ನ ಪರಿಚಯಸ್ಥರೇ ಇರಬಹುದು. ಆದರೆ ಅಲ್ಲಿ ಬಂದು ಊಟ ಮಾಡುವ ಗ್ರಾಹಕರು ಕೂಡ ನನ್ನ ಪರಿಚಯದವರೇ. ಹೀಗಾಗಿ ಯಾರೇ ಸಿಕ್ಕಿಬಿದ್ದರೂ ನನ್ನ ಪರಿಚಯಸ್ಥರೆಂದು ರಿಯಾಯಿತಿ ಕೊಡುವ ಪ್ರಶ್ನೆಯೇ ಇಲ್ಲ. ಸಾರ್ವಜನಿಕರ ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ" ಎಂದು ಸ್ಪಷ್ಟಪಡಿಸಿದರು.
ಪಿ.ಜಿ. ಹಾಗೂ ಹಾಸ್ಟೆಲ್‌ಗಳನ್ನು ನಡೆಸುವರು ಅಲ್ಲಿಗೆ ಬರುವ ವಿದ್ಯಾರ್ಥಿಗಳನ್ನು ತಮ್ಮದೇ ಸ್ವಂತ ಮಕ್ಕಳಂತೆ ಭಾವಿಸಿ ಅವರಿಗೆ ಶುಚಿ-ರುಚಿಯಾದ ಪೌಷ್ಟಿಕ ಆಹಾರ ನೀಡಬೇಕು.
ಅತ್ಯಾಧುನಿಕ ಎನ್‌ಎಬಿಎಲ್ ಲ್ಯಾಬ್: ಆಹಾರ ಕಲಬೆರಕೆ ಹಾಗೂ ಗುಣಮಟ್ಟ ಪರೀಕ್ಷಾ ವರದಿಗಳು ನ್ಯಾಯಾಲಯದಲ್ಲೂ ಬಲವಾಗಿ ಸಾಬೀತಾಗುವಂತೆ ಮಾಡಲು ಅಂತಾರಾಷ್ಟ್ರೀಯ ಮಟ್ಟದ ಸುಸಜ್ಜಿತ ಎನ್‌ಎಬಿಎಲ್ (NABL) ಲ್ಯಾಬ್‌ಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗಿದೆ. ಕೋಲ್ಡ್ ಸ್ಟೋರೇಜ್‌ನಲ್ಲಿ ದೀರ್ಘಕಾಲ ಮೀನು, ಮಾಂಸ ಇಡುವ ಬಗ್ಗೆ ಎಫ್‌ಎಸ್‌ಎಸ್‌ಎಐ ನಿಯಮಾವಳಿಗಳ ಅನ್ವಯ ಕ್ರಮ ವಹಿಸಲಾಗುವುದು ಎಂದು ಸಚಿವರು ಹೇಳಿದರು.
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಸರ್ಕಾರದ ಮೇಲೆ ಯಾವುದೇ ಕಪ್ಪುಚುಕ್ಕೆ ಬರಬಾರದು ಎಂಬ ಸದುದ್ದೇಶದಿಂದ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. ಇಲಾಖಾ ಸಚಿವ ಈಶ್ವರ್ ಖಂಡ್ರೆ ಅವರ ಜತೆ ಈ ಬಗ್ಗೆ ಮಾತನಾಡಿದ್ದು, ಸತ್ಯಾಸತ್ಯತೆ ತಿಳಿಯಲು ತನಿಖೆಗೆ ಆದೇಶಿಸಿದ್ದಾರೆ. ಅಧಿಕಾರಿಗಳು ಸುಳ್ಳು ಹೇಳಿ ಮಂತ್ರಿಗಳ ಹೆಸರು ಕೆಡಿಸುವ ಯತ್ನ ಮಾಡಿದ್ದರೆ ಅಥವಾ ಮಧ್ಯವರ್ತಿಗಳು ದುರುದ್ದೇಶದಿಂದ ಮಾಡಿದ್ದರೆ ತನಿಖೆಯಿಂದ ಸತ್ಯ ಹೊರಬರಲಿದೆ. ತಪ್ಪಿತಸ್ಥರಿದ್ದರೆ ಡಿಸ್ಮಿಸ್ ಮಾಡಲಾಗುವುದು ಎಂದು ತಿಳಿಸಿದರು.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm