ಬ್ರೇಕಿಂಗ್ ನ್ಯೂಸ್
11-09-26 10:58 pm HK News Staffer ಕರಾವಳಿ
ಮಂಗಳೂರು, ಸೆ.11 : ಮಂಗಳೂರು ರೈಲ್ವೆ ವ್ಯಾಪ್ತಿಯನ್ನು ದಕ್ಷಿಣ ರೈಲ್ವೆಯ ಪಾಲಕ್ಕಾಡ್ ವಿಭಾಗದಿಂದ ನೈಋತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ವರ್ಗಾಯಿಸುವ ಹಿನ್ನೆಲೆಯಲ್ಲಿ ಎರಡೂ ವಿಭಾಗಗಳ ವಿಭಾಗೀಯ ರೈಲ್ವೆ ವ್ಯವಸ್ಥಾಪಕರು (ಡಿಆರ್‌ಎಂ) ಹಾಗೂ ಹಿರಿಯ ಅಧಿಕಾರಿಗಳ ಸಮನ್ವಯ ಸಭೆ ಶುಕ್ರವಾರ ಮಂಗಳೂರಿನಲ್ಲಿ ನಡೆಯಿತು.
ಮಂಗಳೂರು ವ್ಯಾಪ್ತಿಯ ಆಡಳಿತಾತ್ಮಕ ಬದಲಾವಣೆಗೆ ಅಗತ್ಯವಿರುವ ಸಿದ್ಧತೆಗಳು ಹಾಗೂ ಸುಗಮ ವರ್ಗಾವಣೆಯ ಕುರಿತು ಸಭೆಯಲ್ಲಿ ಸಮಗ್ರ ಚರ್ಚೆ ನಡೆಯಿತು. ಸಭೆ ಸೌಹಾರ್ದಯುತ ಹಾಗೂ ರಚನಾತ್ಮಕ ವಾತಾವರಣದಲ್ಲಿ ನಡೆದಿದ್ದು, ವ್ಯಾಪ್ತಿ ಬದಲಾವಣೆಯಿಂದ ರೈಲು ಸಂಚಾರ ಮತ್ತು ಪ್ರಯಾಣಿಕರ ಸೇವೆಗಳಿಗೆ ಯಾವುದೇ ರೀತಿಯ ಅಡಚಣೆಯಾಗದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಎರಡೂ ವಿಭಾಗಗಳು ಒಮ್ಮತ ವ್ಯಕ್ತಪಡಿಸಿದವು.
ಅ.1, 2026ರಿಂದ ಹೊಸ ರೈಲ್ವೆ ವ್ಯಾಪ್ತಿ ಜಾರಿಗೆ ಬರಲಿದ್ದು, ರೈಲು ಸೇವೆಗಳು ಸಹಜವಾಗಿ ಮುಂದುವರಿಯುವಂತೆ ಅಗತ್ಯ ಸಿದ್ಧತೆಗಳನ್ನು ಮುಂಚಿತವಾಗಿಯೇ ಪೂರ್ಣಗೊಳಿಸಲು ನಿರ್ಧರಿಸಲಾಯಿತು. ಕಾರ್ಯಾಚರಣೆಯ ಸಮನ್ವಯ, ಆಸ್ತಿಗಳು, ದಾಖಲೆಗಳು, ನಿಯಂತ್ರಣ ವ್ಯವಸ್ಥೆ, ಸಿಬ್ಬಂದಿ ಸೇರಿದಂತೆ ವ್ಯಾಪ್ತಿ ಬದಲಾವಣೆಯಿಂದ ಎದುರಾಗುವ ವಿವಿಧ ಆಡಳಿತಾತ್ಮಕ ಹಾಗೂ ತಾಂತ್ರಿಕ ವಿಚಾರಗಳ ಕುರಿತು ಅಧಿಕಾರಿಗಳು ಚರ್ಚಿಸಿದರು.
ಸಿಬ್ಬಂದಿಗೆ ಆಯ್ಕೆ ಅವಕಾಶ;
ಮಂಗಳೂರು ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ದಕ್ಷಿಣ ರೈಲ್ವೆಯಲ್ಲೇ ಮುಂದುವರಿಯಲು ಅಥವಾ ನೈಋತ್ಯ ರೈಲ್ವೆಗೆ ಸೇರ್ಪಡೆಯಾಗಲು ನಿಯಮಾನುಸಾರ ಆಯ್ಕೆ ನೀಡಲಾಗುವುದು ಎಂದು ಸಭೆಯಲ್ಲಿ ಸ್ಪಷ್ಟಪಡಿಸಲಾಯಿತು. ರೈಲ್ವೆ ಮಂಡಳಿ ನಿರ್ದೇಶನದಂತೆ ಗಜೆಟೆಡ್ ಅಲ್ಲದ ಸಿಬ್ಬಂದಿಯನ್ನು ‘ಯಾವ ಸ್ಥಿತಿಯಲ್ಲಿದೆಯೋ ಅದೇ ಸ್ಥಿತಿಯಲ್ಲಿ’ (as is where is) ವರ್ಗಾಯಿಸುವ ವ್ಯವಸ್ಥೆ ಇದ್ದರೂ, ದಕ್ಷಿಣ ರೈಲ್ವೆಯಲ್ಲಿ ಮುಂದುವರಿಯುವ ಅಥವಾ ನೈಋತ್ಯ ರೈಲ್ವೆಗೆ ಸೇರುವ ಆಯ್ಕೆಯನ್ನು ಸಿಬ್ಬಂದಿಗೆ ನೀಡಲಾಗುತ್ತದೆ. ಇತರ ವರ್ಗಗಳ ಸಿಬ್ಬಂದಿಗೆ ಅನ್ವಯವಾಗುವ ನಿಯಮಾನುಸಾರ ಪ್ರಕ್ರಿಯೆ ಮುಂದುವರಿಯಲಿದೆ.
ಪಾಲಕ್ಕಾಡ್ ಹಾಗೂ ಮೈಸೂರು ವಿಭಾಗಗಳ ನಡುವಿನ ನಿರಂತರ ಸಮನ್ವಯದ ಮೂಲಕ ವ್ಯಾಪ್ತಿ ಬದಲಾವಣೆಯನ್ನು ಸುಗಮವಾಗಿ ಪೂರ್ಣಗೊಳಿಸುವ ವಿಶ್ವಾಸವನ್ನು ಎರಡೂ ವಿಭಾಗಗಳ ಅಧಿಕಾರಿಗಳು ವ್ಯಕ್ತಪಡಿಸಿದರು. ಪ್ರಯಾಣಿಕರ ಸೇವೆ ಹಾಗೂ ರೈಲು ಕಾರ್ಯಾಚರಣೆಯ ನಿರಂತರತೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ತಿಳಿಸಲಾಯಿತು.
11-09-26 05:50 pm
HK News Staffer
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
10-09-26 01:23 pm
HK News Staffer
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
11-09-26 10:58 pm
HK News Staffer
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
ದೈವದ ಚಿನ್ನ ಕಳ್ಳರ ಬಂಧನ ; ಕಲ್ಲಾಪು ಮಹಾಲಕ್ಷ್ಮಿ ಕ್...
11-09-26 03:51 pm
DC A B Ibrahim, SIR Notice: ಹೆಸರಿನಲ್ಲಿ ತಪ್ಪಿದ...
11-09-26 01:56 pm
11-09-26 06:38 pm
HK News Staffer
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm