ಬ್ರೇಕಿಂಗ್ ನ್ಯೂಸ್
12-09-26 10:53 am HK News Staffer ಕರಾವಳಿ
ಮಂಗಳೂರು, ಸೆ.11: ಸೆಪ್ಟೆಂಬರ್ 18 ರಂದು ಮಂಗಳೂರಿನಲ್ಲಿ ನಡೆಯುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಜಿಲ್ಲೆಗಳ ರಸ್ತೆ ಸೇರಿದಂತೆ ಮೂಲ ಸೌಲಭ್ಯಗಳ ಅಭಿವೃದ್ಧಿ, ಮೀನುಗಾರಿಕಾ ಕ್ಷೇತ್ರ, ಪ್ರವಾಸೋದ್ಯಮ ಮತ್ತು ಕೈಗಾರಿಕೆಗಳ ಅಭಿವೃದ್ಧಿಗೆ ಹೆಚ್ಚು ಆದ್ಯತೆ ನೀಡಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ತಿಳಿಸಿದರು.
ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆಯ ಹಿನ್ನೆಲೆಯಲ್ಲಿ ವಿವಿಧ ಕೈಗಾರಿಕೆ, ಮೀನುಗಾರಿಕಾ ಸಂಘಟನೆಗಳು, ಪ್ರವಾಸೋದ್ಯಮ ಕ್ಷೇತ್ರದ ಉದ್ಯಮಿಗಳು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು. ಜಿಲ್ಲೆಯಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಜಮೀನುಗಳ ಕೊರತೆ ಇರುವ ಬಗ್ಗೆ ಮನವಿಗಳು ಬಂದಿದ್ದು, ಈ ನಿಟ್ಟಿನಲ್ಲಿ ಹೊಸ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿಗೆ ಸರಕಾರವು ಗಮನಹರಿಸಲಿದೆ. ರಸ್ತೆ ಸೇರಿದಂತೆ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಸರಕಾರ ಒತ್ತು ನೀಡಲಿದೆ. ಈಗಾಗಲೇ ಬೈಕಂಪಾಡಿ ಕೈಗಾರಿಕಾ ಪ್ರದೇಶದ ರಸ್ತೆ ಅಭಿವೃದ್ಧಿಗೆ 28 ಕೋಟಿ ರೂ. ಪ್ರಸ್ತಾವನೆಯನ್ನು ರಾಜ್ಯ ಸರಕಾರಕ್ಕೆ ಸಲ್ಲಿಕೆಯಾಗಿದೆ ಎಂದು ಸಚಿವರು ತಿಳಿಸಿದರು.
ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ತರಬೇತಿಗೆ ಬರುವ ಅಪ್ರೆಂಟಿಸ್‍ಗಳ ವಾಸ್ತವ್ಯಕ್ಕೆ ಅನುಕೂಲವಾಗುವಂತೆ ಸಮೀಪದಲ್ಲಿ ವಸತಿಗೃಹ ಸ್ಥಾಪಿಸುವ ಬಗ್ಗೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸಿದರು. ಈ ಬಗ್ಗೆ ಕೆನರಾ ಸಣ್ಣ ಕೈಗಾರಿಕಾ ಸಂಘದ ಪದಾಧಿಕಾರಿಗಳು ಸಚಿವರ ಗಮನಕ್ಕೆ ತಂದರು.
ಮೀನುಗಾರ ಮುಖಂಡರಾದ ಚೇತನ್ ಮತ್ತು ಮೋಹನ್ ಬೆಂಗ್ರೆ ಮಾತನಾಡಿ, ನಗರದ ಹಳೆ ಬಂದರು ಧಕ್ಕೆಯಲ್ಲಿ ಬೋಟುಗಳು ತಂಗಲು ಸ್ಥಳಾವಕಾಶ ಸಮಸ್ಯೆ ತೀವ್ರವಾಗಿದೆ. ದೊಡ್ಡ ಬೋಟ್‍ಗಳೊಂದಿಗೆ ಸಣ್ಣ ಬೋಟ್‍ಗಳು ಧಕ್ಕೆಗೆ ಆಗಮಿಸಲು ಸಮಸ್ಯೆಯಾಗುತ್ತಿದೆ. ಈ ನಿಟ್ಟಿನಲ್ಲಿ ಕಸಬಾ ಬೆಂಗ್ರೆ, ಹೊಸಬೆಟ್ಟು, ತಣ್ಣೀರು ಬಾವಿ, ಕೋಟೆಪುರದಲ್ಲಿ ಮೀನುಗಾರಿಕಾ ಜೆಟ್ಟಿಯನ್ನು ಸ್ಥಾಪಿಸಬೇಕೆಂದು ಆಗ್ರಹಿಸಿದರು. ನದಿಯ ಹೂಳೆತ್ತುವ ಡ್ರೆಜ್ಜಿಂಗ್ ಕಾಮಗಾರಿಯನ್ನು ಆದ್ಯತೆಯಲ್ಲಿ ನಡೆಸಬೇಕು ಎಂದರು.



ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಮಾತನಾಡಿ, ನವ ಮಂಗಳೂರು ಬಂದರು ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ 150 ಎಕರೆ ಜಾಗವನ್ನು ಬಳಸಿಕೊಂಡು ಪ್ರವಾಸೋದ್ಯಮ ಮೂಲಸೌಕರ್ಯ ಅಭಿವೃದ್ಧಿ ಪಡಿಸಲು ಚಿಂತಿಸಲಾಗಿದ್ದು, ಈ ಬಗ್ಗೆ ಎನ್.ಎಂ.ಪಿ.ಎ ಜೊತೆ ಚರ್ಚೆ ಆಗಿದೆ. ನಗರದ ಹಳೆ ಜಿಲ್ಲಾಧಿಕಾರಿ ಕಚೇರಿ ಅಭಿವೃದ್ಧಿ, ಆನೆ ಶಿಬಿರ, ಸಿ.ಆರ್.ಝೆಡ್ ನಿಯಮ ಪರಿಷ್ಕರಣೆ, ಕರಾವಳಿ ರಸ್ತೆ ಅಭಿವೃದ್ಧಿ ಮತ್ತಿತರ ಯೋಜನೆಗಳ ಬಗ್ಗೆ ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ ಎಂದರು.
ಸಚಿವ ಯು.ಟಿ ಖಾದರ್ ಮಾತನಾಡಿ, ತೊಕ್ಕೊಟ್ಟು- ಮುಡಿಪು- ಮೆಲ್ಕಾರ್ ರಸ್ತೆಯನ್ನು ಶಿಕ್ಷಣ, ಆರೋಗ್ಯ, ಧಾರ್ಮಿಕ, ಐಟಿ ಕಾರಿಡಾರ್ ಆಗಿ ಅಭಿವೃದ್ಧಿಪಡಿಸಿ ಬೆಂಗಳೂರು ಮತ್ತು ಕೇರಳ ರಸ್ತೆಗೆ ಸಂಪರ್ಕ ರಸ್ತೆಯಾಗಿ ಅಭಿವೃದ್ಧಿ ಪಡಿಸಲು ಪ್ರಸ್ತಾವನೆ ಸಿದ್ಧಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ ಕಾರ್ಬಾರಿ, ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ, ಮಹಾನಗರ ಪಾಲಿಕೆ ಆಯುಕ್ತ ರಾಹುಲ್ ರತ್ನಂ ಪಾಂಡೆ ಮತ್ತಿತ್ತರರು ಇದ್ದರು.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm