ಬ್ರೇಕಿಂಗ್ ನ್ಯೂಸ್
15-09-26 09:46 am HK News Staffer ಕರಾವಳಿ
ಬೆಂಗಳೂರು, ಸೆಪ್ಟೆಂಬರ್ 15: ಕರಾವಳಿ ಜಿಲ್ಲೆಗಳ, ವಿಶೇಷವಾಗಿ ತುಳುನಾಡಿನ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವ ಉದ್ದೇಶದಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರ ಸೆಪ್ಟೆಂಬರ್ 18ರಂದು ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ ಸಭೆ ಆಯೋಜಿಸಿದೆ. ಈ ಕುರಿತು ಡಿ.ಕೆ. ಶಿವಕುಮಾರ್ ಎಕ್ಸ್ ತಾಣದಲ್ಲಿ ವಿಡಿಯೋ ಸಂದೇಶದ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.
ಕರಾವಳಿ ಭಾಗದ ಜನರ ಬಹುಕಾಲದ ಆಶೋತ್ತರಗಳನ್ನು ಈಡೇರಿಸುವ ನಿಟ್ಟಿನಲ್ಲಿ ಸೆಪ್ಟೆಂಬರ್ 18ರಂದು ಕಡಲನಗರಿ ಮಂಗಳೂರಿನಲ್ಲಿ ಸರ್ಕಾರದ ವಿಶೇಷ ಸಚಿವ ಸಂಪುಟ ಸಭೆ ನಡೆಯಲಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕರಾವಳಿಯ ಜನರ ಕಷ್ಟ-ಸುಖಗಳನ್ನು ಹತ್ತಿರದಿಂದ ಅರಿತುಕೊಂಡು, ಸ್ಥಳೀಯ ಅಗತ್ಯಗಳಿಗೆ ಅನುಗುಣವಾಗಿ ಸ್ಥಳದಲ್ಲೇ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳುವುದು ವಿಶೇಷ ಸಭೆಯ ಉದ್ದೇಶವಾಗಿದೆ ಎಂದು ಅವರು ಹೇಳಿದ್ದಾರೆ.
ಬಂದರು, ಮೀನುಗಾರಿಕೆ, ಕೈಗಾರಿಕೆಗೆ ನವಚೈತನ್ಯ
ಕರಾವಳಿ ಭಾಗದ ಅಭಿವೃದ್ಧಿಗೆ ಆದ್ಯತೆ ನೀಡುವ ಹಿನ್ನೆಲೆಯಲ್ಲಿ ಬಂದರು, ಮೂಲಸೌಕರ್ಯ, ಮೀನುಗಾರಿಕೆ ಹಾಗೂ ಕೈಗಾರಿಕಾ ಕ್ಷೇತ್ರಗಳಿಗೆ ನವಚೈತನ್ಯ ತುಂಬುವ ಮೂಲಕ ಕರಾವಳಿಯ ಸಮಗ್ರ ಸಮೃದ್ಧಿಗೆ ಹೊಸ ಮುನ್ನುಡಿ ಬರೆಯಲು ‘ಟೀಮ್ ಕರ್ನಾಟಕ’ ಸಜ್ಜಾಗಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಮಂಗಳೂರಿನಲ್ಲಿ ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಂಬಂಧಿಸಿದ ವಿವಿಧ ವಿಚಾರಗಳ ಕುರಿತು ಚರ್ಚೆ ನಡೆದು, ಮಹತ್ವದ ನಿರ್ಧಾರಗಳು ಹೊರಬರುವ ನಿರೀಕ್ಷೆ ಇದೆ. ವಿಡಿಯೋ ಸಂದೇಶದ ಕೊನೆಯಲ್ಲಿ ಡಿ.ಕೆ. ಶಿವಕುಮಾರ್ ತುಳು ಭಾಷೆಯಲ್ಲಿ “ಮಾತೆರೆಗ್‌ಲ ಸೊಲ್ಮೆಲು” (ಎಲ್ಲರಿಗೂ ವಂದನೆಗಳು) ಎಂದು ಹೇಳುವ ಮೂಲಕ ಕರಾವಳಿ ಭಾಗದ ಜನರಿಗೆ ತುಳುವಿನಲ್ಲೇ ಶುಭಾಶಯ ತಿಳಿಸಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
15-09-26 10:31 am
HK News Staffer
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am