ಬ್ರೇಕಿಂಗ್ ನ್ಯೂಸ್
17-09-26 05:12 pm HK News Staffer ಕರಾವಳಿ
ಮಂಗಳೂರು, ಸೆ.17: ನಗರದ ಪಡೀಲಿನಲ್ಲಿರುವ ನೂತನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇದೇ ಮೊದಲ ಬಾರಿಗೆ ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದ್ದು, ಇದಕ್ಕಾಗಿ ಸರ್ವಸಿದ್ಧತೆ ಕೈಗೊಳ್ಳಲಾಗಿದೆ. ಬೃಹತ್ ಜಿಲ್ಲಾಧಿಕಾರಿ ಸಂಕೀರ್ಣದ ಎರಡನೇ ಮಹಡಿಯಲ್ಲಿ ಸಚಿವ ಸಂಪುಟ ಸಭೆಗಾಗಿ ಪ್ರತ್ಯೇಕ ಮಿನಿ ಹಾಲ್ ಸಿದ್ಧಪಡಿಸಲಾಗುತ್ತಿದೆ.
ಮುಖ್ಯಮಂತ್ರಿ ಮತ್ತು ಸಂಪುಟ ಸಚಿವರು ಕುಳಿತುಕೊಳ್ಳಲು ಅನುವಾಗುವಂತೆ ಆಸನಗಳು, ಟೇಬಲ್ ಮತ್ತು ಸಂಪೂರ್ಣ ಹವಾನಿಯಂತ್ರಿತ ಹಾಲ್ ಸಿದ್ಧಗೊಳಿಸಲಾಗುತ್ತಿದೆ. ಎರಡು ಗಂಟೆ ಅವಧಿಯಲ್ಲಿ ಸಂಪುಟ ದರ್ಜೆಯ ಸಚಿವರು ಮತ್ತು ಮುಖ್ಯಮಂತ್ರಿ ಕರಾವಳಿ ಜಿಲ್ಲೆಗಳ ಅಭಿವೃದ್ಧಿ ಮತ್ತು ಪ್ರವಾಸೋದ್ಯಮ ಬೆಳವಣಿಗೆ ವಿಚಾರದಲ್ಲಿ ಚರ್ಚೆ ನಡೆಸಲಿದ್ದಾರೆ. ಮಿನಿ ಹಾಲ್ ಸಿದ್ಧಪಡಿಸಲು ಬೆಂಗಳೂರಿನಿಂದ ಬಂದಿರುವ ಕೆಲಸಗಾರರು ಅಂತಿಮ ಹಂತದ ಸಿದ್ಧತೆಯಲ್ಲಿದ್ದಾರೆ.
ಬೆಂಗಳೂರು ಹೊರತುಪಡಿಸಿ ಈ ಹಿಂದೆ ಬೆಳಗಾವಿ, ಮೈಸೂರಿನಲ್ಲಿ ಸಂಪುಟ ಸಭೆ ಆಗಿದ್ದರೂ ಮೊದಲ ಬಾರಿಗೆ ಮಂಗಳೂರು ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಂಪುಟ ಸಭೆ ನಡೆಯುತ್ತಿದೆ. ಹೀಗಾಗಿ ಬಹುತೇಕ ರಾಜ್ಯ ಸರ್ಕಾರವೇ ಮಂಗಳೂರಿಗೆ ಆಗಮಿಸುತ್ತಿದ್ದು, ಬಹುತೇಕ ಹೆಚ್ಚಿನ ಸಚಿವರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸತೀಶ್ ಜಾರಕಿಹೊಳಿ, ಎಂಬಿ ಪಾಟೀಲ್ ಬೇರೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಹಿನ್ನೆಲೆಯಲ್ಲಿ ಭಾಗವಹಿಸುತ್ತಿಲ್ಲ ಎನ್ನಲಾಗಿದೆ. ಸಚಿವ ಸಂಪುಟ ಸಭೆ ನಡೆಯುವ ಮಿನಿ ಹಾಲ್ ಜಾಗಕ್ಕೆ ಉಸ್ತುವಾರಿ ಸಚಿವ ಯುಟಿ ಖಾದರ್ ಗುರುವಾರ ಬೆಳಗ್ಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಸಂಪುಟ ಸಭೆಗಾಗಿ ಹೆಚ್ಚಿನ ಸಚಿವರು ಇಂದೇ ಮಂಗಳೂರಿಗೆ ಆಗಮಿಸಿದ್ದು, ಅವರಿಗಾಗಿ ನಗರದ ತಣ್ಣೀರುಬಾವಿಯಲ್ಲಿ ಇಂದು ರಾತ್ರಿ ಪಾರ್ಟಿ ಆಯೋಜಿಸಲಾಗಿದೆ ಎಂಬ ಮಾಹಿತಿಯೂ ಇದೆ. ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಇದರ ನೆಪದಲ್ಲಿ ಮಂಗಳೂರು ಪಾಲಿಕೆಯಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆಸಿದ್ದಾರೆ. ಸಚಿವ ಮುನಿಯಪ್ಪ ಕೂಡ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.








ಇದೇ ವೇಳೆ, ಸಚಿವ ಸಂಪುಟ ಸಭೆ ನಡೆಯುವ ಜಿಲ್ಲಾಧಿಕಾರಿ ಸಂಕೀರ್ಣಕ್ಕೆ ಬಿಗಿ ಭದ್ರತೆ ಕಲ್ಪಿಸಲಾಗಿದೆ. ವಿವಿಧ ಹೊಟೇಲ್ ಗಳಲ್ಲಿ ಇರುವ ಸಚಿವರನ್ನು ಕರೆತರಲು ಡಬಲ್ ಡೆಕ್ಕರ್ ಬಸ್ ಒಂದನ್ನು ತರಿಸಲಾಗಿದ್ದು, ಜಿಲ್ಲಾಧಿಕಾರಿ ಕಚೇರಿ ಎದುರು ನಿಲ್ಲಿಸಲಾಗಿದೆ. ದೊಡ್ಡ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಮುಖ್ಯಮಂತ್ರಿ ಮತ್ತು ಸಚಿವರನ್ನು ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಸ್ವಾಗತಿಸುವುದಕ್ಕೆ ಸಿದ್ಧತೆ ನಡೆಸಲಾಗಿದೆ. ಹೊರ ಜಿಲ್ಲೆಗಳಿಂದ ಬರುವ ಅಧಿಕಾರಿಗಳು ಮತ್ತು ಸಚಿವರನ್ನು ಸ್ವಾಗತಿಸಲು ಜಿಲ್ಲಾಧಿಕಾರಿ ಸಂಕೀರ್ಣದ ಒಳಭಾಗದಲ್ಲಿರುವ ವೆರಾಂಡಾದಲ್ಲಿ ಬೃಹತ್ ಕಂಬಳದ ಕೋಣಗಳ ಪೈಂಟಿಂಗ್ ಮಾಡಲಾಗಿದೆ. ರಂಗೋಲಿ ಹುಡಿಯಲ್ಲಿ ಕಲಾಕಾರರು ಕಂಬಳ ಕೋಣಗಳ ಚಿತ್ರವನ್ನು ಬಿಡಿಸಿಟ್ಟಿದ್ದು ಆಕರ್ಷಕವಾಗಿದೆ.
ಇದಲ್ಲದೆ, ಮಂಗಳೂರು ನಗರದ ಬೀದಿಯಲ್ಲಿ ಮುಖ್ಯಮಂತ್ರಿ ಮತ್ತು ಸಚಿವರನ್ನು ಸ್ವಾಗತಿಸಿ ಎಲ್ಲ ಕಡೆ ಪೋಸ್ಟರ್ ಹಾಕಲಾಗಿದೆ. ಒಟ್ಟಿನಲ್ಲಿ ಸಚಿವ ಸಂಪುಟ ಸಭೆ ನೆಪದಲ್ಲಿ ಇಡೀ ರಾಜ್ಯ ಸರ್ಕಾರವೇ ಮಂಗಳೂರಿಗೆ ಆಗಮಿಸುತ್ತಿರುವುದರಿಂದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿ ಹಬ್ಬದ ಕಳೆ ಏರ್ಪಟ್ಟಿದೆ.
Extensive preparations are underway for the Karnataka government’s Cabinet meeting, which will be held for the first time at the newly constructed Deputy Commissioner’s Office in Padil, Mangaluru. A separate mini hall is being readied on the second floor of the massive Deputy Commissioner’s Office complex for the meeting.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am