ಬ್ರೇಕಿಂಗ್ ನ್ಯೂಸ್
21-09-26 09:46 pm HK News Staffer ಕರಾವಳಿ
ಮಂಗಳೂರು, ಸೆ.21: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರ್ನಾಟಕದಾದ್ಯಂತ ಮುಂದಿನ ನಾಲ್ಕು ದಿನಗಳ ಕಾಲ ಗಾಳಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಳೆಯ ತೀವ್ರತೆ ಹೆಚ್ಚಾಗಲಿರುವ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಿಗೆ ಕ್ರಮವಾಗಿ ರೆಡ್, ಆರೆಂಜ್ ಹಾಗೂ ಯಲ್ಲೋ ಅಲರ್ಟ್ಗಳನ್ನು ಘೋಷಿಸಲಾಗಿದೆ.
ಸೆಪ್ಟೆಂಬರ್ 21 (ಸೋಮವಾರ – 16 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್): ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ಬಳ್ಳಾರಿ, ಉಡುಪಿ, ದಕ್ಷಿಣ ಕನ್ನಡ, ಮೈಸೂರು, ಮಂಡ್ಯ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಜೋರು ಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ‘ಯಲ್ಲೋ ಅಲರ್ಟ್’ ನೀಡಲಾಗಿದೆ.
ಸೆಪ್ಟೆಂಬರ್ 22 (ಮಂಗಳವಾರ – 5 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್): ಬಾಗಲಕೋಟೆ, ರಾಯಚೂರು, ಕೊಪ್ಪಳ, ಗದಗ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ‘ಯಲ್ಲೋ ಅಲರ್ಟ್’ ಘೋಷಿಸಲಾಗಿದೆ.
ಸೆಪ್ಟೆಂಬರ್ 23 (ಬುಧವಾರ – ಆರೆಂಜ್ & ಯಲ್ಲೋ ಅಲರ್ಟ್): ಕಲಬುರಗಿ, ವಿಜಯಪುರ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿಯಿಂದ ಅತ್ಯಂತ ಭಾರಿ ಮಳೆಯಾಗುವ ಮುನ್ಸೂಚನೆಯಿದ್ದು ‘ಆರೆಂಜ್ ಅಲರ್ಟ್’ ನೀಡಲಾಗಿದೆ. ಇದೇ ದಿನ ಬೀದರ್, ಯಾದಗಿರಿ, ರಾಯಚೂರು, ಬಾಗಲಕೋಟೆ, ವಿಜಯನಗರ, ಉತ್ತರ ಕನ್ನಡ, ಚಿತ್ರದುರ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ‘ಯಲ್ಲೋ ಅಲರ್ಟ್’ ಇರಲಿದೆ.
ಸೆಪ್ಟೆಂಬರ್ 24 (ಗುರುವಾರ – ಕರಾವಳಿಗೆ ರೆಡ್ ಅಲರ್ಟ್): ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು ‘ರೆಡ್ ಅಲರ್ಟ್’ ಘೋಷಿಸಲಾಗಿದೆ. ಅಂದು ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ನೀಡಿದ್ದರೆ; ಧಾರವಾಡ, ಗದಗ, ಕೊಪ್ಪಳ, ರಾಯಚೂರು, ತುಮಕೂರು, ಮಂಡ್ಯ ಹಾಗೂ ಮೈಸೂರು ಜಿಲ್ಲೆಗಳಿಗೆ ‘ಯಲ್ಲೋ ಅಲರ್ಟ್’ ವಿಧಿಸಲಾಗಿದೆ.
ಧಾರಾಕಾರ ಮಳೆ ಹಾಗೂ ಬಿರುಗಾಳಿ ಬೀಸುವ ಸಾಧ್ಯತೆಯಿರುವುದರಿಂದ ಸಾರ್ವಜನಿಕರು ಹಾಗೂ ಕರಾವಳಿ ಭಾಗದ ಮೀನುಗಾರರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
21-09-26 08:21 pm
HK News Staffer
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm