ಬ್ರೇಕಿಂಗ್ ನ್ಯೂಸ್
01-10-26 10:25 am HK News Staffer ಕರಾವಳಿ
ಮಂಗಳೂರು, ಅಕ್ಟೋಬರ್ 1: ಎಂಆರ್ಪಿಎಲ್ನಲ್ಲಿ ಸಂಭವಿಸಿದ ಸ್ಫೋಟ ಪ್ರಕರಣದ ಬಗ್ಗೆ ಉನ್ನತ ಮಟ್ಟದ ಅಧಿಕಾರಿಗಳಿಂದ ತನಿಖೆ ನಡೆಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ನಗರದ ವೆನ್ಲಾಕ್ ಆಸ್ಪತ್ರೆ ಬಳಿ ಬುಧವಾರ ರಾತ್ರಿ ಸುದ್ದಿಗಾರರೊಂದಿಗೆ ಮಾತನಾಡಿದ ಖಾದರ್, ಘಟನೆಯ ಬಗ್ಗೆ ಮುಖ್ಯಮಂತ್ರಿ ಈಗಾಗಲೇ ಮಾಹಿತಿ ಪಡೆದುಕೊಂಡಿದ್ದಾರೆ. ಪ್ರಕರಣದ ತನಿಖೆಗೆ ಉನ್ನತ ಮಟ್ಟದ ಅಧಿಕಾರಿಗಳನ್ನು ನೇಮಿಸುವುದಾಗಿ ಸಿಎಂ ಭರವಸೆ ನೀಡಿದ್ದಾರೆ. ಗುರುವಾರ ಅಧಿಕಾರಿಗಳ ಹೆಸರು ಪ್ರಕಟಿಸುವ ಸಾಧ್ಯತೆ ಇದೆ ಎಂದು ತಿಳಿಸಿದರು.
ಸ್ಫೋಟದಿಂದ ಸಂತ್ರಸ್ತರಾದವರನ್ನು ಭೇಟಿ ಮಾಡಿ ಅವರ ಅಹವಾಲು ಆಲಿಸುವುದು ಹಾಗೂ ಕುಟುಂಬಸ್ಥರಿಗೆ ಸಾಂತ್ವನ ಹೇಳುವಂತೆ ಮುಖ್ಯಮಂತ್ರಿ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತಮ್ಮ ಪ್ರವಾಸವನ್ನು ತುರ್ತಾಗಿ ಮೊಟಕುಗೊಳಿಸಿ ಮಂಗಳೂರಿಗೆ ಬಂದಿರುವುದಾಗಿ ಖಾದರ್ ಹೇಳಿದರು.
ಇದೇ ವೇಳೆ, ಎಂಆರ್ಪಿಎಲ್ ಸಂಸ್ಥೆಯ ಹಿರಿಯ ಅಧಿಕಾರಿಗಳು ಸಂತ್ರಸ್ತರನ್ನು ಭೇಟಿ ಮಾಡಿ ಮಾತನಾಡದಿರುವ ವಿಚಾರ ತಮ್ಮ ಗಮನಕ್ಕೆ ಬಂದಿದೆ ಎಂದು ಖಾದರ್ ಹೇಳಿದರು. ಮೃತ ಯುವಕನ ಕುಟುಂಬ ಹಾಗೂ ಗಾಯಗೊಂಡವರೊಂದಿಗೆ ಅಧಿಕಾರಿಗಳು ಮಾತನಾಡಬೇಕಿತ್ತು. ಈ ಬಗ್ಗೆ ಸಂಸ್ಥೆಯೊಂದಿಗೆ ಚರ್ಚಿಸುವುದಾಗಿ ತಿಳಿಸಿದರು.
ಸ್ಫೋಟದ ಪರಿಣಾಮ ಕೆಲವು ಮನೆಗಳು ಹಾಗೂ ಪ್ರಾರ್ಥನಾ ಕೇಂದ್ರಗಳಿಗೆ ಹಾನಿಯಾಗಿರುವ ಮಾಹಿತಿಯೂ ಲಭ್ಯವಾಗಿದೆ. ಹಾನಿಯ ಕುರಿತು ಜಿಲ್ಲಾಧಿಕಾರಿಗಳ ಮೂಲಕ ಪರಿಶೀಲನೆ ನಡೆಸಿ, ನಷ್ಟಕ್ಕೆ ಸೂಕ್ತ ಪರಿಹಾರವನ್ನು ಎಂಆರ್ಪಿಎಲ್ ಸಂಸ್ಥೆಯಿಂದಲೇ ನೀಡುವಂತೆ ಸೂಚಿಸಲಾಗಿದೆ ಎಂದು ಯು.ಟಿ. ಖಾದರ್ ಹೇಳಿದರು.
27-09-26 03:21 pm
HK News Desk
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
01-10-26 11:46 am
HK News Staffer
ಯುಪಿಐ ನೆಪದಲ್ಲಿ ವ್ಯಾಪಾರಸ್ಥರಿಗೆ ಶುಲ್ಕ ; ಸಚಿವೆ ನ...
01-10-26 11:20 am
Smith Machar, Indian pilot: ದುಬೈನಲ್ಲಿ ವಿಮಾನ ಪ...
01-10-26 11:05 am
ಅರಬ್ಬೀ ಸಮುದ್ರದಲ್ಲಿ ಅಂತಾರಾಷ್ಟ್ರೀಯ ಡ್ರಗ್ಸ್ ರಾಕೆ...
30-09-26 10:49 am
ಡ್ರಗ್ಸ್ ಕಳ್ಳಸಾಗಣೆ ಆರೋಪ, ಸೌದಿಯಲ್ಲಿ ಕೇರಳದ ಯುವಕನ...
29-09-26 08:11 pm
01-10-26 10:25 am
HK News Staffer
Mrpl fire accident, Church Damage: ಎಂಆರ್ ಪಿಎಲ...
30-09-26 10:24 pm
ಅನುದಾನ ಮಂಜೂರು ವಿಚಾರದಲ್ಲಿ ಮೊಂಡಾಟ! ಕೋಟೆಕಾರು ಪ....
30-09-26 09:44 pm
suresh kumar, ut khadar, urdhu habba: ವಿಧಾನಸೌ...
30-09-26 09:41 pm
Mrpl fire, One dead: ಎಂಆರ್ ಪಿಎಲ್ ತೈಲ ಸ್ಥಾವರದಲ...
30-09-26 05:33 pm
01-10-26 11:10 am
HK News Staffer
Mrpl Fire, Mangalore: ಎಂಆರ್ ಪಿಎಲ್ ಘಟಕದಲ್ಲಿ ದು...
30-09-26 08:59 pm
ಮಣಿಪಾಲ KMC ಆಸ್ಪತ್ರೆಯಲ್ಲಿ ತೀರ್ಥಹಳ್ಳಿಯ ರೋಗಿ ಆತ್...
30-09-26 08:17 pm
ಉಡುಪಿಯಲ್ಲಿ ಹೆಲ್ಮೆಟ್ ಧರಿಸಿ ದುರ್ಗಾಂಬ ಬಸ್ ಕಳವು ;...
30-09-26 10:33 am
Udupi Body found, Accused: ಕೊಲೆ ಯತ್ನ ಪ್ರಕರಣದ...
30-09-26 10:04 am