ಬ್ರೇಕಿಂಗ್ ನ್ಯೂಸ್
01-10-26 12:53 pm HK News Staffer ಕರಾವಳಿ
ಮಂಗಳೂರು, ಅ.1 : 2012ರಲ್ಲಿ ನಡೆದ ಧರ್ಮಸ್ಥಳದ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ರಚಿಸಲಾಗಿರುವ ವಿಶೇಷ ತನಿಖಾ ತಂಡದ ಸದಸ್ಯರು ಮಂಗಳೂರಿಗೆ ಆಗಮಿಸಿದ್ದು ಅಧಿಕೃತವಾಗಿ ತನಿಖಾ ಪ್ರಕ್ರಿಯೆ ಆರಂಭಿಸಿದ್ದಾರೆ. ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 21ರಂದು ಪ್ರಕರಣದಲ್ಲಿ ತನಿಖೆಗೆ ಆದೇಶಿಸಿದ್ದು, ಹೊಸ ಎಸ್‌ಐಟಿ ಮೂರು ತಿಂಗಳೊಳಗೆ ತನಿಖೆ ಪೂರ್ಣಗೊಳಿಸಿ ಸಂಬಂಧಪಟ್ಟ ನ್ಯಾಯಾಲಯಕ್ಕೆ ವರದಿ ಸಲ್ಲಿಸುವಂತೆ ಸೂಚಿಸಿದೆ.
ಎಸ್‌ಐಟಿ ಸದಸ್ಯರಾದ ಗುಪ್ತಚರ ವಿಭಾಗದ ಎಸ್‌ಪಿ ನಿಶಾ ಜೇಮ್ಸ್ ಹಾಗೂ ಸಿಐಡಿ ಎಸ್ಪಿ ಲೋಕೇಶ್ ಜಗಲ್ಸಾರ್ ಮಂಗಳೂರಿಗೆ ಆಗಮಿಸಿದ್ದಾರೆ. ಇಬ್ಬರೂ ಮಂಗಳೂರು ನಗರ ಪೊಲೀಸ್ ಆಯುಕ್ತ ಸಿಎಚ್ ಸುಧೀರ್ ಕುಮಾರ್ ರೆಡ್ಡಿ ಅವರನ್ನು ಭೇಟಿ ಮಾಡಿ ತನಿಖೆಯ ಮುಂದಿನ ಕಾರ್ಯತಂತ್ರದ ಕುರಿತು ಚರ್ಚಿಸಲಿದ್ದಾರೆ. ಅಲ್ಲದೆ, ಮಂಗಳೂರಿನಲ್ಲಿ ಹೊಸ ಕಚೇರಿ ಆರಂಭಿಸುವ ಬಗ್ಗೆಯೂ ಪರಿಶೀಲನೆ ನಡೆಸಲಿದ್ದಾರೆ.
ಮಂಗಳೂರು ಮತ್ತು ಬೆಳ್ತಂಗಡಿಯಲ್ಲಿ ಎರಡು ಕಡೆ ಎಸ್ಐಟಿ ಕಚೇರಿ ಸ್ಥಾಪಿಸುವ ಸಾಧ್ಯತೆಯಿದೆ. ಮಂಗಳೂರಿನಲ್ಲಿ ಹಳೆಯ ಜಿಲ್ಲಾಧಿಕಾರಿ ಕಚೇರಿಯನ್ನು ತನಿಖಾ ತಂಡ ಬಳಸಿಕೊಳ್ಳಲಿದೆ ಎನ್ನುವ ಮಾಹಿತಿ ಇದೆ. ಈಗಾಗಲೇ ಈ ಕಚೇರಿ ಖಾಲಿಯಿದ್ದು ಪೊಲೀಸ್ ಡಿಎಆರ್ ಅಥವಾ ಇನ್ನಿತರ ಕಚೇರಿಯಾಗಿ ಬಳಸಿಕೊಳ್ಳುವ ಯೋಚನೆಗಳಿದ್ದವು. ಇದಲ್ಲದೆ, ಸಿಐಡಿ ಎಸ್ಪಿ ಲೋಕೇಶ್ ಜಗಲ್ಸಾರ್ ಅವರನ್ನು ತನಿಖಾಧಿಕಾರಿಯಾಗಿ ಮಾಡುವ ಬಗ್ಗೆಯೂ ಮಾತು ಕೇಳಿಬರುತ್ತಿದೆ. ಶಶಿಕುಮಾರ್ ಮತ್ತು ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಐಜಿಪಿ ದರ್ಜೆಯ ಅಧಿಕಾರಿಗಳಾಗಿದ್ದು ಎಸ್ಪಿಗಳಾಗಿ ಇಬ್ಬರಿದ್ದಾರೆ. ಇವರಲ್ಲಿ ಒಬ್ಬರನ್ನು ತನಿಖಾಧಿಕಾರಿಯಾಗಿ ಮಾಡಲಿದ್ದಾರೆ.
ಸುಪ್ರೀಂ ಕೋರ್ಟ್ ಆದೇಶ ಹಿನ್ನೆಲೆಯಲ್ಲಿ ಸೆ.24ರಂದು ಕರ್ನಾಟಕ ಸರ್ಕಾರ ಐಜಿಪಿ ಎನ್. ಶಶಿಕುಮಾರ್ ತಂಡದ ನೇತೃತ್ವದಲ್ಲಿ ಐವರು ಸದಸ್ಯರ ಎಸ್‌ಐಟಿ ರಚಿಸಿತ್ತು. ಮಂಗಳೂರು ನಗರ ಪೊಲೀಸ್ ಆಯುಕ್ತ ಸಿಎಚ್ ಸುಧೀರ್ ಕುಮಾರ್ ರೆಡ್ಡಿ, ಗುಪ್ತಚರ ವಿಭಾಗದ ಎಸ್‌ಪಿ ನಿಶಾ ಜೇಮ್ಸ್, ಸಿಐಡಿ ಎಸ್ಪಿ ಲೋಕೇಶ್ ಜಗಲ್ಸರ್ ಹಾಗೂ ಬೆಂಗಳೂರು ಗ್ರಾಮಾಂತರ ಎಎಸ್‌ಪಿ ವೆಂಕಟೇಶ್ ಪ್ರಸನ್ನ ತಂಡದಲ್ಲಿದ್ದಾರೆ. ಆದರೆ ಶಶಿಕುಮಾರ್ ಮತ್ತು ವೆಂಕಟೇಶ ಪ್ರಸನ್ನ ಬಗ್ಗೆ ಆರೋಪಗಳಿರುವುದರಿಂದ ಇವರನ್ನು ಎಸ್ಐಟಿಗೆ ಹಾಕಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ವಿರೋಧ ವ್ಯಕ್ತವಾಗಿತ್ತು.


ವೆಂಕಟೇಶ್ ಪ್ರಸನ್ನ ಸೇರ್ಪಡೆಗೆ ಆಕ್ಷೇಪ
ಎಸ್‌ಐಟಿಯಲ್ಲಿ ಬೆಂಗಳೂರು ಗ್ರಾಮಾಂತರ ಎಎಸ್‌ಪಿ ವೆಂಕಟೇಶ್ ಪ್ರಸನ್ನ ಅವರ ಸೇರ್ಪಡೆಗೆ ಸೌಜನ್ಯ ಕುಟುಂಬದ ಸದಸ್ಯರು ಹಾಗೂ ಕೆಲವು ಸಾಮಾಜಿಕ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಎಸ್‌ಐಟಿಯಿಂದ ತಮ್ಮನ್ನು ಬಿಡುಗಡೆ ಮಾಡುವಂತೆ ವೆಂಕಟೇಶ್ ಪ್ರಸನ್ನ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಕುರಿತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿ, ಪ್ರಕರಣದಲ್ಲಿ ನ್ಯಾಯ ದೊರಕಿಸುವುದು ಸರ್ಕಾರದ ಪ್ರಮುಖ ಉದ್ದೇಶ ಎಂದು ಹೇಳಿದ್ದಾರೆ. ಅಧಿಕಾರಿಗಳ ನೇಮಕದ ಕುರಿತು ಕುಟುಂಬಸ್ಥರು ಮತ್ತು ಸಾರ್ವಜನಿಕರು ವ್ಯಕ್ತಪಡಿಸಿರುವ ಆಕ್ಷೇಪಗಳನ್ನು ಸರ್ಕಾರ ಪರಿಗಣಿಸಲಿದೆ ಎಂದು ತಿಳಿಸಿದ್ದಾರೆ.
ಸಿಐಡಿ, ಸಿಬಿಐ ತನಿಖೆಯ ಬಳಿಕ ಮತ್ತೆ ಮರುತನಿಖೆ
ಸೌಜನ್ಯಾ ಪ್ರಕರಣದ ತನಿಖೆಯನ್ನು ಈ ಹಿಂದೆ ರಾಜ್ಯದ ಸಿಐಡಿ ಹಾಗೂ ಸಿಬಿಐ ನಡೆಸಿದ್ದವು. ಸಿಬಿಐ ತನಿಖೆಯಲ್ಲಿ ಪ್ರಮುಖ ಆರೋಪಿಯೆಂದು ಹೇಳಿದ್ದ ಸಂತೋಷ್ ರಾವ್ ಬಗ್ಗೆ ಸೂಕ್ತ ಸಾಕ್ಷ್ಯಾಧಾರ ನೀಡಲಾಗದ ಕಾರಣ ಆತನನ್ನು ಸಿಬಿಐ ನ್ಯಾಯಾಲಯ ಖುಲಾಸೆಗೊಳಿಸಿತ್ತು. ಹೀಗಾಗಿ ಪ್ರಕರಣದ ತನಿಖೆಯ ಕುರಿತಾಗಿಯೇ ಹಲವು ಪ್ರಶ್ನೆಗಳು ಹಾಗೂ ಮರು ತನಿಖೆಗೆ ಒತ್ತಾಯಗಳು ಕೇಳಿಬಂದಿದ್ದವು.
27-09-26 03:21 pm
HK News Desk
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
01-10-26 11:46 am
HK News Staffer
ಯುಪಿಐ ನೆಪದಲ್ಲಿ ವ್ಯಾಪಾರಸ್ಥರಿಗೆ ಶುಲ್ಕ ; ಸಚಿವೆ ನ...
01-10-26 11:20 am
Smith Machar, Indian pilot: ದುಬೈನಲ್ಲಿ ವಿಮಾನ ಪ...
01-10-26 11:05 am
ಅರಬ್ಬೀ ಸಮುದ್ರದಲ್ಲಿ ಅಂತಾರಾಷ್ಟ್ರೀಯ ಡ್ರಗ್ಸ್ ರಾಕೆ...
30-09-26 10:49 am
ಡ್ರಗ್ಸ್ ಕಳ್ಳಸಾಗಣೆ ಆರೋಪ, ಸೌದಿಯಲ್ಲಿ ಕೇರಳದ ಯುವಕನ...
29-09-26 08:11 pm
01-10-26 08:10 pm
HK News Staffer
Manish Karkada, MRPL: ಎಂಆರ್ ಪಿಎಲ್ ಅಗ್ನಿ ಅವಘಡ...
01-10-26 06:19 pm
MRPL ಸ್ಫೋಟದ ಬೆನ್ನಲ್ಲೇ ನೆಲ್ಲಿದಡಿ ಗುತ್ತು ಚರ್ಚೆ...
01-10-26 03:04 pm
Sowjanya case, STI: ಸೌಜನ್ಯಾ ಪ್ರಕರಣ ಮರುತನಿಖೆ ;...
01-10-26 12:53 pm
Mrpl Fire, Mangalore, ut khadar: MRPL ಸ್ಫೋಟ ಪ...
01-10-26 10:25 am
01-10-26 02:31 pm
HK News Staffer
Mangalore Police News: ಪೊಲೀಸ್ ಕಾನ್ಸ್ ಟೇಬಲ್ ನೇ...
01-10-26 11:10 am
Mrpl Fire, Mangalore: ಎಂಆರ್ ಪಿಎಲ್ ಘಟಕದಲ್ಲಿ ದು...
30-09-26 08:59 pm
ಮಣಿಪಾಲ KMC ಆಸ್ಪತ್ರೆಯಲ್ಲಿ ತೀರ್ಥಹಳ್ಳಿಯ ರೋಗಿ ಆತ್...
30-09-26 08:17 pm
ಉಡುಪಿಯಲ್ಲಿ ಹೆಲ್ಮೆಟ್ ಧರಿಸಿ ದುರ್ಗಾಂಬ ಬಸ್ ಕಳವು ;...
30-09-26 10:33 am