ಬ್ರೇಕಿಂಗ್ ನ್ಯೂಸ್
10-01-21 10:18 pm Mangaluru Correspondent ಕರಾವಳಿ
Photo credits : Coast Guard Mangalore
ಮಂಗಳೂರು, ಜ.10: ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ್ದ ಬೋಟ್‌ನಲ್ಲಿ ಸಿಲಿಂಡರ್ ಬ್ಲಾಸ್ಟ್ ಆಗಿ ಮೀನುಗಾರನೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಇದೇ ವೇಳೆ ಬೋಟಿನಲ್ಲಿದ್ದ ಮೀನುಗಾರರನ್ನು ಕರಾವಳಿ ರಕ್ಷಣಾ ಪಡೆ ರಕ್ಷಿಸಿದೆ.
ತಮಿಳುನಾಡು ಮೂಲದ ಮೀನುಗಾರಿಕಾ ಬೋಟ್ ಮಂಗಳೂರಿನಿಂದ ಸುಮಾರು 140 ನಾಟಿಕಲ್ ಮೈಲಿ ದೂರಲ್ಲಿ ಮೀನುಗಾರಿಕೆಯಲ್ಲಿ ತೊಡಗಿಸಿತ್ತು. ಈ ಸಂದರ್ಭ ಬೋಟಿನಲ್ಲಿದ್ದ ಗ್ಯಾಸ್ ಸಿಲಿಂಡರ್ ದಿಢೀರ್ ಸ್ಫೋಟಗೊಂಡಿದ್ದು ದೋಣಿಗೆ ಬೆಂಕಿ ಹತ್ತಿಕೊಂಡಿದೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ಭಾರತೀಯ ಕರಾವಳಿ ರಕ್ಷಣಾ ಪಡೆ ರಕ್ಷಣೆಗೆ ಧಾವಿಸಿದೆ. ಮುಂಬೈ ವಲಯದ ಕರಾವಳಿ ರಕ್ಷಣಾ ಪಡೆಯಿಂದ ಸಾಚೇತ್ ಮತ್ತು ಸುಜೀತ್ ಎನ್ನುವ ಎರಡು ಕಾವಲು ನೌಕೆಗಳನ್ನು ಸಹಾಯಕ್ಕೆ ಕರೆಸಿಕೊಂಡು ಕಾರ್ಯಾಚರಣೆ ನಡೆಸಲಾಯಿತು. ಅಲ್ಲದೆ, ಅಪಾಯಕ್ಕೆ ಈಡಾಗಿದ್ದ ದೋಣಿಯ ತ್ವರಿತ ಪತ್ತೆಗಾಗಿ ವಿಮಾನ ಬಳಸಲಾಗಿತ್ತು.
ಈ ವೇಳೆ ದೋಣಿ ಪತ್ತೆ ಮಾಡಿದ್ದಲ್ಲದೆ, ಅಪಾಯಕ್ಕೀಡಾದ ಮೀನುಗಾರರ ಜೊತೆ ಸಂವಹನ ಸಾಧಿಸಿ ಧೈರ್ಯ ತುಂಬಿದ್ದಾರೆ. ಅದೇ ಸ್ಥಳಕ್ಕೆ ಕೋಸ್ಟ್‌ಗಾರ್ಡ್ ನೌಕೆಗಳೆರಡೂ ತಲಪಿದ್ದು ತಕ್ಷಣವೇ ತೀವ್ರ ಗಾಯಗೊಂಡಿದ್ದ ಓರ್ವನನ್ನು ರಕ್ಷಣಾ ನೌಕೆಗೆ ತರಿಸಿಕೊಂಡು ಪ್ರಥಮ ಚಿಕಿತ್ಸೆ ನೀಡಲಾಗಿದೆ. ಆನಂತರ ಅದರಲ್ಲಿದ್ದ ಎಲ್ಲ ಮೀನುಗಾರರನ್ನೂ ರಕ್ಷಿಸಿ ಮಂಗಳೂರಿಗೆ ಕರೆತರಲಾಗಿದೆ. ಬಳಿಕ ಗಾಯಗೊಂಡ ಮೀನುಗಾರನನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
Indian Coast Guard Rescues Tamil Nadu Fishermen 140 miles West of New Mangalore Port from Fishing Boat which had on board
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
10-10-26 10:31 pm
HK News Staffer
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
ಸರ್ಕಾರಿ ಸಂಸ್ಥೆಯಿಂದ ಕೋಟ್ಯಂತರ ದೇಣಿಗೆ ; ಪಿಣರಾಯಿ...
09-10-26 05:40 pm
Prakash Raj, Dhruv Rathee: SIR ರದ್ದತಿಗೆ ಬೆಂಗಳ...
08-10-26 08:03 pm
10-10-26 09:27 pm
HK News Staffer
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
ಮೂಡುಶೆಡ್ಡೆ ; ಮುಸ್ಲಿಮರ ದಫನಕ್ಕೆ 2 ಎಕರೆ ಪಿಲಿಕುಳದ...
10-10-26 03:21 pm
Nana patekar: ಮಂಗಳೂರು, ಉಡುಪಿಯೊಂದಿಗೆ ನಾನಾ ಪಾಟೇ...
08-10-26 04:30 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm