ಬ್ರೇಕಿಂಗ್ ನ್ಯೂಸ್
11-10-26 06:35 pm HK News Staffer ಕರಾವಳಿ
ಮಂಗಳೂರು, ಅ.11: ಮಂಗಳೂರು ದಸರಾ ಎಂದೇ ಹೆಸರಾಗಿರುವ ಕುದ್ರೋಳಿ ಕ್ಷೇತ್ರದ ದಸರಾ ಉದ್ಘಾಟನೆಗೆ ಸಿಎಂ ಡಿಕೆ ಶಿವಕುಮಾರ್ ಬರುವುದೆಂದು ಸುದ್ದಿಯಾಗಿತ್ತು. ದೇವಸ್ಥಾನ ಕಮಿಟಿಯವರೂ ಮುಖ್ಯಮಂತ್ರಿ ಬಂದು ಉದ್ಘಾಟನೆ ಮಾಡಲಿದ್ದಾರೆಂದು ಹೇಳಿದ್ದರು. ಆದರೆ ಒಂದು ದಿನ ಇರುವಾಗಲೇ ಸಿಎಂ ಡಿಕೆ ಶಿವಕುಮಾರ್ ಮಂಗಳೂರಿಗೆ ಬರುವ ಕಾರ್ಯಕ್ರಮ ರದ್ದಾಗಿದೆ.
ಮುಖ್ಯಮಂತ್ರಿ ಅವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಸ್ ಶ್ರೀಧರ್ ಅವರು ಸಿಎಂ ಡಿಕೆ ಶಿವಕುಮಾರ್ ಅ. 12ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ ಪ್ರವಾಸ ಕಾರ್ಯಕ್ರಮವನ್ನು ಅನಿವಾರ್ಯ ಕಾರಣಗಳಿಂದ ರದ್ದುಪಡಿಸಿದ್ದಾರೆಂದು ತಿಳಿಸಿದ್ದಾರೆ. ಅ.12ರಂದು ಉಡುಪಿ ಜಿಲ್ಲೆಯ ಕಾಪು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದ ದಸರಾ ಮತ್ತು ಮಂಗಳೂರಿನ ಕುದ್ರೋಳಿ ದಸರಾ ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆಂದು ಹೇಳಲಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ಮುಖ್ಯಮಂತ್ರಿ ಬರುವುದನ್ನು ರದ್ದು ಮಾಡಿದ್ದಾರೆ.
ಅ.20ರಂದು ಮಂಗಳೂರಿನಲ್ಲಿ ಮಿಥುನ್ ರೈ ನೇತೃತ್ವದಲ್ಲಿ ನಡೆಯುವ ಪಿಲಿನಲಿಕೆ ಕಾರ್ಯಕ್ರಮಕ್ಕೆ ಸಿಎಂ ಡಿಕೆ ಶಿವಕುಮಾರ್ ಕುಟುಂಬ ಸಹಿತವಾಗಿ ಬರಲಿದ್ದಾರೆಂಬ ಮಾಹಿತಿಯಿದ್ದು ಅದೇ ಸಂದರ್ಭದಲ್ಲಿ ಕುದ್ರೋಳಿ ಮತ್ತು ಉಚ್ಚಿಲಕ್ಕೆ ತೆರಳುವ ಸಾಧ್ಯತೆಯಿದೆ. ಈ ಹಿಂದೆ ಸಿಎಂ ಸಿದ್ದರಾಮಯ್ಯ ಅವರು ದಸರಾ ಸಂದರ್ಭದಲ್ಲಿ ಮಂಗಳೂರಿಗೆ ಬಂದಿದ್ದರೂ ಬದ್ಧ ಎದುರಾಳಿಯಾಗಿ ಗುರುತಿಸಿದ್ದ ಜನಾರ್ದನ ಪೂಜಾರಿಯವರ ನೇತೃತ್ವದಲ್ಲಿ ನಡೆಯುವ ಕುದ್ರೋಳಿ ದಸರಾಕ್ಕೆ ಹೋಗದಂತೆ ಕೆಲವು ಕಾಂಗ್ರೆಸ್ ನಾಯಕರೇ ತಡೆದಿದ್ದರು. ಈಗ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾದ ಮೊದಲ ಹಂತದಲ್ಲೇ ಕುದ್ರೋಳಿ ದಸರಾ ಉದ್ಘಾಟನೆಗೆ ಬರುತ್ತಾರೆ ಎನ್ನುವುದು ಮಂಗಳೂರಿನ ಮಟ್ಟಿಗೆ ಚರ್ಚೆಗೆ ಗ್ರಾಸವಾಗಿತ್ತು. ಮಂಗಳೂರು ದಸರಾಕ್ಕೆ ಎರಡೆರಡು ಬಾರಿ ಬರುತ್ತಾರೆಯೇ ಎಂಬ ಮಾತು ಕೇಳಿಬಂದಿತ್ತು.
ಇದೀಗ ಮುಖ್ಯಮಂತ್ರಿ ಪ್ರವಾಸ ಕಾರ್ಯಕ್ರಮ ರದ್ದಾಗಿದ್ದು ದಸರಾ ಉದ್ಘಾಟನೆಗೆ ಬೇರೊಬ್ಬ ಅತಿಥಿಯನ್ನು ಕರೆಯಲು ಸಿದ್ಧತೆ ನಡೆದಿದೆ. ದೇವಸ್ಥಾನ ಸಮಿತಿಯಿಂದಲೂ ಈ ಬಗ್ಗೆ ಮಾಹಿತಿ ನೀಡಲಾಗಿದ್ದು ಸಿಎಂ ಡಿಕೆಶಿ ತುರ್ತಾಗಿ ದೆಹಲಿ ತೆರಳುತ್ತಿರುವುದರಿಂದ ಕುದ್ರೋಳಿ ಕ್ಷೇತ್ರದ ಭೇಟಿ ಕಾರ್ಯಕ್ರಮ ಮುಂದೂಡಲಾಗಿದೆ ಎಂದು ತಿಳಿಸಲಾಗಿದೆ.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
11-10-26 03:20 pm
HK News Staffer
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
11-10-26 06:35 pm
HK News Staffer
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm