ಬ್ರೇಕಿಂಗ್ ನ್ಯೂಸ್
16-01-21 01:26 pm Mangalore Correspondent ಕರಾವಳಿ
ಮಂಗಳೂರು, ಜ.16: ಮಂಗಳೂರು ವಿವಿ ವ್ಯಾಪ್ತಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗಿನಲ್ಲಿ ಪಿಯುಸಿ ತರಗತಿಗಳು ಅಧಿಕೃತವಾಗಿ ಜ.15ರಿಂದ ಆರಂಭಗೊಂಡಿದ್ದು, ಮೊದಲ ದಿನ 45 ಶೇ. ವಿದ್ಯಾರ್ಥಿಗಳು ತರಗತಿಗೆ ಹಾಜರಾಗಿದ್ದಾರೆ.
ಶಿಕ್ಷಣ ಇಲಾಖೆಯ ಮಾಹಿತಿ ಪ್ರಕಾರ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 31 ಸರಕಾರಿ ಪಿಯು ಕಾಲೇಜುಗಳಿದ್ದು, 18,644 ಮಕ್ಕಳ ಪೈಕಿ 8194 ಮಂದಿ ಹಾಜರಾಗಿದ್ದಾರೆ. 27 ಅನುದಾನಿತ ಕಾಲೇಜುಗಳಲ್ಲಿ 25696 ವಿದ್ಯಾರ್ಥಿಗಳ ಪೈಕಿ 11507 ಮಂದಿ ಮೊದಲ ದಿನ ತರಗತಿಗೆ ಹಾಜರಾಗಿದ್ದಾರೆ. ವೀಕೆಂಡ್ ಆಗಿರುವುದರಿಂದ ಹೆಚ್ಚು ಮಂದಿ ಕಾಲೇಜಿಗೆ ಬಂದಿಲ್ಲ. ಮುಂದಿನ ವಾರ ಬಹುತೇಕ ವಿದ್ಯಾರ್ಥಿಗಳು ಕಾಲೇಜಿನತ್ತ ಬರುವ ನಿರೀಕ್ಷೆಯಿದೆ ಎಂದು ಕಾಲೇಜು ಸಿಬಂದಿ ಹೇಳುತ್ತಾರೆ.

ಈಗಾಗ್ಲೇ ಡಿಗ್ರಿ ಮತ್ತು ಪಾಲಿಟೆಕ್ನಿಕ್ ಕಾಲೇಜುಗಳು ಆರಂಭಗೊಂಡಿದ್ದು, ಆರಂಭದಲ್ಲಿ ಕಡಿಮೆ ಸಂಖ್ಯೆಯಲ್ಲಿ ವಿದ್ಯಾರ್ಥಿಗಳಿದ್ದರೂ ಈಗ ಬಹುತೇಕ ಫುಲ್ ಆಗಿದೆ. ಈಗ ಪಿಯು ತರಗತಿ ಆರಂಭಗೊಂಡಿದ್ದು ಉದ್ಯೋಗಕ್ಕೆ ಹೋಗುತ್ತಿರುವ ಮಂದಿಗೆ ತಿಳಿದಿರಲಿಕ್ಕಿಲ್ಲ. ಇನ್ನು ಕೆಲವರು ಆನ್ ಲೈನ್ ಕ್ಲಾಸ್ ಗೆ ಒಗ್ಗಿ ಹೋಗಿದ್ದಾರೆ. ಇದೇ ವೇಳೆ, ಸರಕಾರ ಇನ್ನೂ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಲ್ಲ. ಇನ್ನು ಕಾಸರಗೋಡು ಜಿಲ್ಲೆಯಿಂದ ಬರುವ ವಿದ್ಯಾರ್ಥಿಗಳಿಗೆ ಇನ್ನೂ ರೈಲು ಆರಂಭಗೊಳ್ಳದ ಕಾರಣ ಕಾಲೇಜಿಗೆ ಬರುವುದು ಕಷ್ಟವಾಗಿದೆ. ಮತ್ತೊಂದೆಡೆ ಸರಕಾರಿ ಹಾಸ್ಟೆಲ್ ಕೂಡ ಆರಂಭವಾಗಿಲ್ಲ. ಇವೆಲ್ಲ ಕಾರಣದಿಂದ ತರಗತಿ ಹಾಜರಾತಿ ಕಡಿಮೆಯಾಗಿರುವ ಸಾಧ್ಯತೆಯಿದೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ಹೇಳುತ್ತಿದ್ದಾರೆ.
Pu colleges start in Mangalore after a long period of holiday due to Covid 19 lockdown and now students have attended college with 45 per cent attendance.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
02-11-25 05:13 pm
HK News Desk
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
02-11-25 06:57 pm
Mangalore Correspondent
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm