ಬ್ರೇಕಿಂಗ್ ನ್ಯೂಸ್

Forensic Expert Dr Mahabala Shetty, Dharmasthala case: ಧರ್ಮಸ್ಥಳ ಸ್ನಾನಘಟ್ಟ ಬಳಿ 20ಕ್ಕೂ ಹೆಚ್ಚು ಕೊಳೆತ ಶವಗಳನ್ನು ಪೋಸ್ಟ್ ಮಾರ್ಟಂ ಮಾಡಿದ್ದೆ, ಅವನ್ನು ಅಲ್ಲಿಯೇ ಹೂಳಲಾಗಿತ್ತು ; ಪ್ರಕರಣಕ್ಕೆ ಸ್ಫೋಟಕ ತಿರುವು ಕೊಟ್ಟ ಫಾರೆನ್ಸಿಕ್ ತಜ್ಞ ಡಾ.ಮಹಾಬಲ ಶೆಟ್ಟಿ    |    ಕನಸು ಕಮರಿಸಿದ ಅಪಘಾತ ; ವೈದ್ಯರ ಎಡವಟ್ಟು, ಸಕಾಲದಲ್ಲಿ ಚಿಕಿತ್ಸೆ ಸಿಗದೆ ಕೈಕಾಲಿನ ಶಕ್ತಿಯೇ ಊನ, ಕಂಗೆಟ್ಟ ವಿಶ್ವಕರ್ಮ ಕುಟುಂಬಕ್ಕೆ ಕ್ರಿಶ್ಚಿಯನ್ ಗೆಳೆಯರ ಆಸರೆ ! ಅರ್ಧಕ್ಕೆ ಉಳಿದುಬಿಟ್ಟ ಮನೆಗೆ ದಿಕ್ಕಿಲ್ಲದ ಸ್ಥಿತಿ, ಬೆಳಕು ಹರಿಸೀತೆ ಸಹೃದಯರ ಹಾರೈಕೆ ?!    |    Kannada Producer Ganesh, Film Dharmasthala File, Movie: 'ಧರ್ಮಸ್ಥಳ ಫೈಲ್ಸ್' ಸಿನಿಮಾ ಘೋಷಿಸಿದ ಕನ್ನಡದ ನಿರ್ಮಾಪಕ ಎ. ಗಣೇಶ್ ; ಸಮಸ್ಯೆ ಆದ್ರೆ ಚಿತ್ರತಂಡವೇ ಹೊಣೆ ಎಂಬ ಕಂಡೀಷನ್! ಕತೆ ಇನ್ನಷ್ಟೇ ಬರೆಸಬೇಕೆಂದ ಚಿತ್ರತಂಡ     |   

ಮಂಗಳೂರಿನಲ್ಲಿ ಶೀಘ್ರವೇ ಪ್ಲಾಸ್ಮಾ ಥೆರಪಿ ಕೇಂದ್ರ ಸ್ಥಾಪನೆ - ಶಾಸಕ‌ ಕಾಮತ್

13-08-20 11:07 am       Headline Karnataka News Network   ಕರಾವಳಿ

ಕೋವಿಡ್ 19 ವ್ಯಾಪಕವಾಗಿ ಹರಡುತ್ತಿರುವ‌ ಸಂದರ್ಭದಲ್ಲಿ ಪ್ಲಾಸ್ಮಾ ಥೆರಪಿ ಚಿಕಿತ್ಸೆಯು ಅತ್ಯಂತ ಪ್ರಭಾವಶಾಲಿಯಾಗಿರುವುದು ಹಲವೆಡೆ ಸಾಕಾರಗೊಂಡಿದೆ.

ಮಂಗಳೂರು, ಆಗಸ್ಟ್ 13: ಕೋವಿಡ್ 19 ವ್ಯಾಪಕವಾಗಿ ಹರಡುತ್ತಿರುವ‌ ಸಂದರ್ಭದಲ್ಲಿ ಪ್ಲಾಸ್ಮಾ ಥೆರಪಿ ಚಿಕಿತ್ಸೆಯು ಅತ್ಯಂತ ಪ್ರಭಾವಶಾಲಿಯಾಗಿರುವುದು ಹಲವೆಡೆ ಸಾಕಾರಗೊಂಡಿದೆ. ರಾಜ್ಯದ ಕೆಲವು ಭಾಗಗಳಲ್ಲಿ ಫ್ಲಾಸ್ಮಾ ಥೆರಪಿಯನ್ನು ಬಳಸಿ ವೈದ್ಯಕೀಯ ಸಂಶೋಧನೆ ನಡೆಸಿ ಯಶಸ್ವಿಯಾದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲೂ ಪ್ಲಾಸ್ಮಾ ಕೇಂದ್ರ ಸ್ಥಾಪಿಸುವ ಕುರಿತು ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಸಚಿವರೊಂದಿಗೆ ಚರ್ಚಿಸಿ, ಈ ಕುರಿತು ಪ್ರಸ್ತಾವನೆ ಸಲ್ಲಿಸಿ ಶೀಘ್ರವೇ ಪ್ಲಾಸ್ಮಾ ಥೆರಪಿ ಕೇಂದ್ರ ಸ್ಥಾಪಿಸಲಾಗುವುದು ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.

ಕೋವಿಡ್ ಸೋಂಕಿತರು ಗುಣಮುಖರಾದ ಮೇಲೆ ಅವರ ರಕ್ತದ ದ್ರವ ಭಾಗವನ್ನು  ಶೇಖರಿಸಿ ಚಿಕಿತ್ಸೆ ನೀಡುವ ವಿಧಾನವನ್ನು ಕರ್ನಾಟಕದಲ್ಲಿ ಈಗಾಗಲೇ ಪ್ರಾರಂಭಿಸಲಾಗಿದೆ. ಸೋಂಕಿತ ವ್ಯಕ್ತಿಯು ಚೇತರಿಸಿಕೊಳ್ಳುವ ಸಂದರ್ಭದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುವ ಹಿನ್ನೆಲೆಯಲ್ಲಿ ಆ ವ್ಯಕ್ತಿಯ ದೇಹದಿಂದ ಪ್ಲಾಸ್ಮಾ ಸಂಗ್ರಹಿಸಿ ರೋಗಿಗಳಿಗೆ ಚಿಕಿತ್ಸೆ ನೀಡುವ ಪದ್ಧತಿಯನ್ನು ಮಂಗಳೂರಿನಲ್ಲಿ ಅಳವಡಿಸಬೇಕು. 

ಒಬ್ಬ ವ್ಯಕ್ತಿಯಿಂದ ಸಂಗ್ರಹಿಸುವ ಪ್ಲಾಸ್ಮಾದಿಂದ ಗರಿಷ್ಠ 5 ಜನರಿಗೆ ಚಿಕಿತ್ಸೆ ನೀಡಬಹುದು ಎನ್ನುವುದನ್ನು ಈಗಾಗಲೇ ಅದ್ಯಯನದ ಮೂಲಕ ಕಂಡು ಹಿಡಿಯಲಾಗಿದೆ. ಹಾಗಾಗಿ ಸೋಂಕಿತರನ್ನು ಗುಣಪಡಿಸುವಲ್ಲಿ ಇದು ಮಹತ್ವದ ಪಾತ್ರ ವಹಿಸಬಹುದು ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.

ಈ ವಿಚಾರವಾಗಿ ಜಿಲ್ಲಾಧಿಕಾರಿ ಹಾಗೂ ಸಂಬಂದಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸಚಿವರ ಗಮನಕ್ಕೂ ತರಲಾಗಿದೆ ಎಂದು ಶಾಸಕ ಕಾಮತ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.