ಬ್ರೇಕಿಂಗ್ ನ್ಯೂಸ್
17-01-21 06:08 pm Mangalore Correspondent ಕರಾವಳಿ
ಪುತ್ತೂರು, ಜ.17: ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆಯಲ್ಲಿ ವಿದ್ಯುತ್ ತಂತಿ ಸ್ಪರ್ಷಗೊಂಡು ಕೂಲಿಕಾರ್ಮಿಕರೊಬ್ಬ ದಾರುಣವಾಗಿ ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಬಲ್ನಾಡು ಗ್ರಾಮದ ಉಜ್ರುಪಾದೆ ಎಂಬಲ್ಲಿ ನಡೆದಿದೆ.
ಪೆರ್ಲಂಪಾಡಿ ಗ್ರಾಮದ ಏಣಿತಡ್ಕ ನಿವಾಸಿ ಕೃಷಿ ಕೂಲಿ ಕಾರ್ಮಿಕ ಅಶ್ರಫ್ ಅಲಿ (51) ಮೃತಪಟ್ಟ ವ್ಯಕ್ತಿ. ಅಶ್ರಫ್ ಅವರು ಉಜ್ರುಪಾದೆ ನಿವಾಸಿ ಗಣೇಶ್ ಎಂಬವರ ತೋಟದಲ್ಲಿ ಕರಿಮೆಣಸು ಕೊಯ್ಯಲೆಂದು ಅಲ್ಯುಮೀನಿಯಂ ಏಣಿಯನ್ನು ಕೊಂಡೊಯ್ಯುತ್ತಿದ್ದ ವೇಳೆಯಲ್ಲಿ ತೋಟದ ನಡುವೆ ಹಾದು ಹೋಗಿದ್ದ ವಿದ್ಯುತ್ ತಂತಿಗೆ ಏಣಿ ಸ್ಪರ್ಷಗೊಂಡು ವಿದ್ಯುತ್ ಪ್ರವಹಿಸಿ ಅಶ್ರಫ್ ಅವರು ಗಂಭೀರ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆತರಲಾಯಿತಾದರೂ ಆ ವೇಳೆಗೆ ಅವರು ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.
ಮೂಲತ: ಕೇರಳ ನಿವಾಸಿಯಾಗಿರುವ ಅಶ್ರಫ್ ಅವರು ಪೆರ್ಲಂಪಾಡಿಯಿಂದ ವಿವಾಹವಾಗಿ ಮಾವನ ಮನೆಯಲ್ಲಿಯೇ ವಾಸವಾಗಿದ್ದರು. ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಮೃತರ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಬಿಟ್ಟು ಕೊಡಲಾಯಿತು. ಸಂಪ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
A farmer died after he was electrocuted in his land at Puttur. The sampya police have registered the case.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
10-10-26 10:31 pm
HK News Staffer
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
ಸರ್ಕಾರಿ ಸಂಸ್ಥೆಯಿಂದ ಕೋಟ್ಯಂತರ ದೇಣಿಗೆ ; ಪಿಣರಾಯಿ...
09-10-26 05:40 pm
Prakash Raj, Dhruv Rathee: SIR ರದ್ದತಿಗೆ ಬೆಂಗಳ...
08-10-26 08:03 pm
10-10-26 09:27 pm
HK News Staffer
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
ಮೂಡುಶೆಡ್ಡೆ ; ಮುಸ್ಲಿಮರ ದಫನಕ್ಕೆ 2 ಎಕರೆ ಪಿಲಿಕುಳದ...
10-10-26 03:21 pm
Nana patekar: ಮಂಗಳೂರು, ಉಡುಪಿಯೊಂದಿಗೆ ನಾನಾ ಪಾಟೇ...
08-10-26 04:30 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm