ಬ್ರೇಕಿಂಗ್ ನ್ಯೂಸ್
18-01-21 06:39 pm Mangalore Correspondent ಕರಾವಳಿ
ಮಂಗಳೂರು, ಜ.18: ಆರು ತಿಂಗಳ ಹಿಂದೆ ಕೇಂದ್ರ ಗುಪ್ತಚರ ಅಧಿಕಾರಿಗಳ ತಲೆನೋವಿಗೆ ಕಾರಣವಾಗಿದ್ದ ಸ್ಯಾಟಲೈಟ್ ಫೋನ್ ಕರಾವಳಿಯಲ್ಲಿ ಮತ್ತೆ ಆಕ್ಟಿವ್ ಆಗಿರುವ ವಿಚಾರ ಬೆಳಕಿಗೆ ಬಂದಿದೆ.
ಗುಪ್ತಚರ ಅಧಿಕಾರಿಗಳು, ಸ್ಥಳೀಯ ಪೊಲೀಸರು ಕಣ್ಣಿಗೆ ಎಣ್ಣೆ ಬಿಟ್ಟುಕೊಂಡು ಕಾರ್ಯಾಚರಣೆ ನಡೆಸಿದ ಬಳಿಕ ಕಳೆದ ಆರು ತಿಂಗಳಿಂದಲೂ ಸ್ಯಾಟಲೈಟ್ ಫೋನ್ ಗಳು ಸೈಲೆಂಟಾಗಿದ್ದವು. ಇದೀಗ ಕರಾವಳಿಯ ದಟ್ಟಾರಣ್ಯ ಪ್ರದೇಶಗಳಲ್ಲಿ ಮತ್ತೆ ಸ್ಯಾಟ್ ಲೈಟ್ ಫೋನ್ ರಿಂಗಣಿಸಿದೆ. ಕಳೆದ 10 ದಿನಗಳಲ್ಲಿ ಮೂರು ಬಾರಿ ಆಕ್ಟಿವ್ ಆಗಿದ್ದು ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ದಟ್ಟಾರಣ್ಯ ಪ್ರದೇಶದಲ್ಲಿ ಫೋನ್ ಸಕ್ರಿಯವಾಗಿರುವ ಬಗ್ಗೆ ಲೊಕೇಷನ್ ಟ್ರೇಸ್ ಆಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕನಕಮಜಲು ಎಂಬಲ್ಲಿ ಲೊಕೇಶನ್ ಕಂಡುಬಂದಿದ್ದು ಆ ಜಾಗದಲ್ಲಿ ಯಾರೋ ಸ್ಯಾಟಲೈಟ್ ಫೋನ್ ಬಳಕೆ ಮಾಡಿರುವುದನ್ನು ಪತ್ತೆ ಮಾಡಲಾಗಿದೆ. ಗುಪ್ತಚರ ಏಜೆನ್ಸಿ 'ರಾ' ಸಂಸ್ಥೆಯ ಅಧಿಕಾರಿಗಳು ಸ್ಯಾಟಲೈಟ್ ಫೋನ್ ಆ್ಯಕ್ಟಿವ್ ಆಗಿರುವುದನ್ನು ಪತ್ತೆ ಮಾಡಿ ರಾಜ್ಯ ಗುಪ್ತಚರ ಇಲಾಖೆಗೆ ಸಂದೇಶ ರವಾನಿಸಿದ್ದಾರೆ.

ಭಾರತದಲ್ಲಿ ನಿಷೇಧಿಸಲಾಗಿರುವ ತುರಾಯಾ ಸ್ಯಾಟಲೈಟ್ ಫೋನ್ ನಿಂದ ನಿಗೂಢ ವ್ಯಕ್ತಿಗಳ ಜೊತೆ ಸಂಪರ್ಕ ಸಾಧಿಸಿದ್ದನ್ನು ಪತ್ತೆ ಮಾಡಲಾಗಿದೆ. ಕೇಂದ್ರ ಇಂಟೆಲಿಜೆನ್ಸ್ ಅಧಿಕಾರಿಗಳ ಸೂಚನೆಯಂತೆ ರಾಜ್ಯ ಗುಪ್ತಚರ ಇಲಾಖೆಯಿಂದ ಈಗ ತನಿಖೆ ಆರಂಭಿಸಲಾಗಿದೆ. ಸ್ಯಾಟಲೈಟ್ ಫೋನ್ ಗಳನ್ನು ನಿಷೇಧಿಸಿರುವುದರಿಂದ ಉಗ್ರವಾದಿ ಚಟುವಟಿಕೆ ನಿರತರು ಈ ಫೋನ್ ಬಳಕೆ ಮಾಡಿರುವ ಸಾಧ್ಯತೆ ಕಂಡುಬಂದಿದೆ. ಹೀಗಾಗಿ ಸದ್ದಿಲ್ಲದ ರೀತಿ ಕರಾವಳಿಯ ಸ್ಲೀಪರ್ ಸೆಲ್ ಗಳು ಮತ್ತೆ ಆಕ್ಟಿವ್ ಆಗಿರುವ ಬಗ್ಗೆ ಶಂಕೆ ಮೂಡುತ್ತಿದೆ.
ಒಂದು ವರ್ಷದ ಹಿಂದೆ ಧರ್ಮಸ್ಥಳ ಬಳಿ ಸ್ಯಾಟಲೈಟ್ ಫೋನ್ ಬಳಕೆ ಆಗಿದ್ದನ್ನು ಪತ್ತೆ ಮಾಡಲಾಗಿತ್ತು. ಗುಪ್ತಚರ ಅಧಿಕಾರಿಗಳು ಅಲ್ಲಿಗೆ ತೆರಳಿ, ತನಿಖೆ ಕೈಗೊಂಡಿದ್ದರು. ಆದರೆ, ಯಾವುದೇ ಮಾಹಿತಿ ಪೊಲೀಸರಿಗೆ ಲಭಿಸಿರಲಿಲ್ಲ. ಸ್ಯಾಟಲೈಟ್ ಫೋನ್ ಆ್ಯಕ್ಟಿವ್ ಆದರೂ ಅದನ್ನು ಪತ್ತೆ ಮಾಡಲು ಸಾಧ್ಯವಾಗದಿರುವುದು ಪೊಲೀಸರ ತಲೆನೋವಿಗೆ ಕಾರಣವಾಗಿತ್ತು. ಇದೀಗ ಮತ್ತೆ ಅಂಥದ್ದೇ ಸನ್ನಿವೇಶ ಸೃಷ್ಟಿಯಾಗಿದ್ದು ಪೊಲೀಸರ ನಿದ್ದೆಗೆಡಿಸಿದೆ.
Satellite phones activate once again In Mangalore and coastal areas Inform I sources to inform high sources.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
10-10-26 10:31 pm
HK News Staffer
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
ಸರ್ಕಾರಿ ಸಂಸ್ಥೆಯಿಂದ ಕೋಟ್ಯಂತರ ದೇಣಿಗೆ ; ಪಿಣರಾಯಿ...
09-10-26 05:40 pm
Prakash Raj, Dhruv Rathee: SIR ರದ್ದತಿಗೆ ಬೆಂಗಳ...
08-10-26 08:03 pm
10-10-26 09:27 pm
HK News Staffer
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
ಮೂಡುಶೆಡ್ಡೆ ; ಮುಸ್ಲಿಮರ ದಫನಕ್ಕೆ 2 ಎಕರೆ ಪಿಲಿಕುಳದ...
10-10-26 03:21 pm
Nana patekar: ಮಂಗಳೂರು, ಉಡುಪಿಯೊಂದಿಗೆ ನಾನಾ ಪಾಟೇ...
08-10-26 04:30 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm