ಬ್ರೇಕಿಂಗ್ ನ್ಯೂಸ್
19-01-21 03:22 pm Mangalore Correspondent ಕರಾವಳಿ
ಮಂಗಳೂರು, ಜ.19: ಉಳ್ಳಾಲದ ಎಸ್ ಡಿಪಿಐ ಮುಖಂಡ ಮಹಿಳೆ ಮತ್ತು ಆಕೆಯ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಘಟನೆಯ ತನಿಖೆಗೆ ಎರಡು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಮಾಹಿತಿ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಕಮಿಷನರ್, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪೋಕ್ಸೋ ಮತ್ತು ಮಹಿಳೆಗೆ ಕಿರುಕುಳ ನೀಡಿದ ಬಗ್ಗೆ ಪ್ರಕರಣ ದಾಖಲಾಗಿದೆ. ಕೃತ್ಯವನ್ನು ಗಂಭೀರವಾಗಿ ಪರಿಗಣಿಸಿದ್ದು ಆರೋಪಿಯ ಪತ್ತೆಗೆ ಎರಡು ತಂಡಗಳನ್ನು ರಚಿಸಿದ್ದೇವೆ. ಆರೋಪಿ ಕೇರಳಕ್ಕೆ ಪರಾರಿಯಾಗಿರುವ ಶಂಕೆಯಿದ್ದು, ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ತಿಳಿಸಿದರು.

ಅಲ್ಲದೆ, ಮಹಿಳೆಯನ್ನು ದೂರು ನೀಡದಂತೆ ಕೆಲವು ಸಮುದಾಯದ ಮುಖಂಡರು ಒತ್ತಡ ಹೇರಿದ ಬಗ್ಗೆಯೂ ಮಹಿಳೆ ದೂರು ನೀಡಿದ್ದಾರೆ. ಮಹಿಳೆ ಮತ್ತು ಮಕ್ಕಳನ್ನು ಸತತವಾಗಿ ಪೀಡಿಸಿದ ಬಗ್ಗೆ ದೂರು ಲಭಿಸಿತ್ತು. ಕೊನೆಯ ಬಾರಿಗೆ ಕಳೆದ ಡಿ.25ರಂದು ಆತ ಲೈಂಗಿಕ ಕಿರುಕುಳ ನೀಡಿದ್ದ. ಈ ಬಗ್ಗೆ ಆಕೆಯೇ ಸ್ವತಃ ಮುಂದೆ ಬಂದು ದೂರು ದಾಖಲಿಸಿದ್ದಾರೆ. ಮಹಿಳೆ ಮತ್ತು ಮಕ್ಕಳನ್ನು ಚೈಲ್ಡ್ ಕೇರ್ ಸಂಸ್ಥೆಯವರು ಪರಿಶೀಲನೆ ನಡೆಸಿದ್ದು, ಕಿರುಕುಳ ಆಗಿರುವ ಬಗ್ಗೆ ದೃಢಪಟ್ಟ ಹಿನ್ನೆಲೆಯಲ್ಲಿ ದೂರು ದಾಖಲಿಸಲಾಗಿದೆ ಎಂದು ಕಮಿಷನರ್ ತಿಳಿಸಿದ್ದಾರೆ.
ನಮಗೆ ಅಪರಾಧ ಮತ್ತು ಅಪರಾಧಿಗಳನ್ನು ಪತ್ತೆ ಮಾಡುವುದಷ್ಟೇ ಮುಖ್ಯ. ಅವರು ಯಾವ ಸಂಘಟನೆಯವರು, ರಾಜಕೀಯ ಪಕ್ಷದಲ್ಲಿ ಇದ್ದಾರೆಯೇ ಎಂಬ ಬಗ್ಗೆ ನಮ್ಮ ವ್ಯಾಪ್ತಿಗೆ ಬರುವುದಿಲ್ಲ. ಅದರ ಅಗತ್ಯವೂ ಇಲ್ಲ. ಆರೋಪಿಗಳನ್ನು ಶೀಘ್ರದಲ್ಲಿ ಪತ್ತೆ ಮಾಡುತ್ತೇವೆ ಎಂದು ಪ್ರಶ್ನೆಯೊಂದಕ್ಕೆ ತಿಳಿಸಿದರು.
ಎಸ್ ಡಿಪಿಎಐ ಉಳ್ಳಾಲ ಸಮಿತಿ ಅಧ್ಯಕ್ಷ ಸಿದ್ದೀಕ್ ಉಳ್ಳಾಲ್ ಎಂಬಾತ ಈ ದುಷ್ಕೃತ್ಯ ಎಸಗಿರುವ ಬಗ್ಗೆ ಹೆಡ್ ಲೈನ್ ಕರ್ನಾಟಕ ಮೊದಲ ಬಾರಿಗೆ ಸುದ್ದಿ ಪ್ರಕಟಿಸಿ ಪ್ರಕರಣ ಬಯಲಿಗೆ ತಂದಿತ್ತು ಎಂಬುದನ್ನು ಸ್ಮರಿಸಬಹುದು.
Video:
A special team has been formed to arrest SDPI leader Sadiq from Ullal who has been alleged of sexual harassment on women and her two children.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm