ಬ್ರೇಕಿಂಗ್ ನ್ಯೂಸ್
20-01-21 10:34 am Mangalore Correspondent ಕರಾವಳಿ
ಮಂಗಳೂರು, ಜ.20 : ಉಳ್ಳಾಲದಲ್ಲಿ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೆ ಆಕೆಯ ಇಬ್ಬರು ಅಪ್ರಾಪ್ತ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆಂದು ಆರೋಪಿಸಲಾಗಿರುವ ಎಸ್‌ಡಿಪಿಐ ಕಾರ್ಯಕರ್ತ ಸಿದ್ದೀಕ್ ಎಂಬಾತ ತಪ್ಪಿತಸ್ಥನಾಗಿದ್ದಲ್ಲಿ ಆತನಿಗೆ ಶಿಕ್ಷೆಯಾಗಲಿ ಎಂದು ಎಸ್ ಡಿಪಿಐ ಹೇಳಿದೆ.
ಆರೋಪ ಹೊತ್ತಿರುವ ಸಿದ್ದೀಕ್ ಎಸ್ ಡಿಪಿಐ ಪಕ್ಷದ ಅಧ್ಯಕ್ಷ ಎಂದು ವರದಿಯಾಗಿದ್ದು, ಆದರೆ ಆತ ಎಸ್‌ಡಿಪಿಐ ಅಧ್ಯಕ್ಷನಲ್ಲ, ಕೇವಲ ಸಾಮಾನ್ಯ ಕಾರ್ಯಕರ್ತನಾಗಿದ್ದಾನೆ. ಎ.ಆರ್.ಅಬ್ಬಾಸ್ ಎಂಬವರು ಉಳ್ಳಾಲ ನಗರ ಸಮಿತಿಯ ಅಧ್ಯಕ್ಷರಾಗಿದ್ದಾರೆ.
ಈ ಬಗ್ಗೆ ಪಕ್ಷದಲ್ಲಿ ಆಂತರಿಕ ತನಿಖೆ ನಡೆಸಲು ಸಮಿತಿ ರಚಿಸಲಾಗಿದ್ದು, ವಾಸ್ತವಾಂಶ ತಿಳಿಯಲು ಆತ ಇದುವರೆಗೂ ನಮ್ಮ ಸಂಪರ್ಕಕ್ಕೆ ಲಭ್ಯವಾಗಿಲ್ಲ. ಒಂದು ವೇಳೆ ಆತ ತಪ್ಪಿತಸ್ಥನಾಗಿದ್ದರೆ ಆತ ನಮ್ಮ ಕಾರ್ಯಕರ್ತ ಎಂದುಕೊಂಡು ಯಾವುದೇ ಕಾರಣಕ್ಕೂ ಆತನನ್ನು ನಮ್ಮ ಪಕ್ಷ ಬೆಂಬಲಿಸುವುದಿಲ್ಲ. ಅಲ್ಲದೆ, ಯಾವುದೇ ರೀತಿಯ ಸಹಾಯವನ್ನೂ ಮಾಡುವುದಿಲ್ಲ. ಪೊಲೀಸ್ ಇಲಾಖೆಯೂ ಆತನ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸುತ್ತದೆ ಎಂದು ಪಕ್ಷದ ಪ್ರಕಟಣೆಯಲ್ಲಿ ತಿಳಿಸಿದೆ.

ಅದೇ ರೀತಿ ಪೊಲೀಸ್ ಇಲಾಖೆ ಕೂಡ ಎರಡು ಕಡೆಯಿಂದಲೂ ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕು. ಯಾಕೆಂದರೆ ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಹಿಳೆಯರನ್ನು ಉಪಯೋಗಿಸಿಕೊಂಡು ಯುವಕರ ಫೋಟೊ ತೆಗೆದು ಹನಿಟ್ರ್ಯಾಪ್ ನಡೆಸಿ ಬ್ಲ್ಯಾಕ್ ಮೇಲ್ ನಡೆಸಲಾಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ತನಿಖೆ ನಡೆಸಬೇಕು. ಅಂತಹ ಷಡ್ಯಂತ್ರಕ್ಕೆ ಈತ ಬಲಿಯಾಗಿದ್ದಾನೆಯೇ ಎಂಬುದು ತನಿಖೆಯಿಂದ ಗೊತ್ತಾಗಬೇಕಿದೆ ಎಂದು ಎಸ್‌ಡಿಪಿಐ ತಿಳಿಸಿದೆ.
ಎಸ್ ಡಿಪಿಐ ಮುಖಂಡನ ಲೈಂಗಿಕ ಕಿರುಕುಳ ; ತನಿಖೆಗೆ ಎರಡು ವಿಶೇಷ ತಂಡ ನೇಮಕ
SDPI has issued a statement to convict it's Block Leader Sadiuq of Ullal over Sexual Harassment if the said is proved.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm