ಬ್ರೇಕಿಂಗ್ ನ್ಯೂಸ್

Forensic Expert Dr Mahabala Shetty, Dharmasthala case: ಧರ್ಮಸ್ಥಳ ಸ್ನಾನಘಟ್ಟ ಬಳಿ 20ಕ್ಕೂ ಹೆಚ್ಚು ಕೊಳೆತ ಶವಗಳನ್ನು ಪೋಸ್ಟ್ ಮಾರ್ಟಂ ಮಾಡಿದ್ದೆ, ಅವನ್ನು ಅಲ್ಲಿಯೇ ಹೂಳಲಾಗಿತ್ತು ; ಪ್ರಕರಣಕ್ಕೆ ಸ್ಫೋಟಕ ತಿರುವು ಕೊಟ್ಟ ಫಾರೆನ್ಸಿಕ್ ತಜ್ಞ ಡಾ.ಮಹಾಬಲ ಶೆಟ್ಟಿ    |    ಕನಸು ಕಮರಿಸಿದ ಅಪಘಾತ ; ವೈದ್ಯರ ಎಡವಟ್ಟು, ಸಕಾಲದಲ್ಲಿ ಚಿಕಿತ್ಸೆ ಸಿಗದೆ ಕೈಕಾಲಿನ ಶಕ್ತಿಯೇ ಊನ, ಕಂಗೆಟ್ಟ ವಿಶ್ವಕರ್ಮ ಕುಟುಂಬಕ್ಕೆ ಕ್ರಿಶ್ಚಿಯನ್ ಗೆಳೆಯರ ಆಸರೆ ! ಅರ್ಧಕ್ಕೆ ಉಳಿದುಬಿಟ್ಟ ಮನೆಗೆ ದಿಕ್ಕಿಲ್ಲದ ಸ್ಥಿತಿ, ಬೆಳಕು ಹರಿಸೀತೆ ಸಹೃದಯರ ಹಾರೈಕೆ ?!    |    Kannada Producer Ganesh, Film Dharmasthala File, Movie: 'ಧರ್ಮಸ್ಥಳ ಫೈಲ್ಸ್' ಸಿನಿಮಾ ಘೋಷಿಸಿದ ಕನ್ನಡದ ನಿರ್ಮಾಪಕ ಎ. ಗಣೇಶ್ ; ಸಮಸ್ಯೆ ಆದ್ರೆ ಚಿತ್ರತಂಡವೇ ಹೊಣೆ ಎಂಬ ಕಂಡೀಷನ್! ಕತೆ ಇನ್ನಷ್ಟೇ ಬರೆಸಬೇಕೆಂದ ಚಿತ್ರತಂಡ     |   

ಉಡುಪಿ ಕಾಪು ಕ್ಷೇತ್ರದ ಬಿಜೆಪಿ ಶಾಸಕ ಲಾಲಾಜಿ ಮೆಂಡನ್ ಅವರಿಗೆ ಕೊರೊನಾ ಪಾಸಿಟಿವ್

13-08-20 03:56 pm       Udupi Reporter   ಕರಾವಳಿ

ಉಡುಪಿ ಜಿಲ್ಲೆಯ ಕಾಪು ಕ್ಷೇತ್ರದ ಬಿಜೆಪಿ ಶಾಸಕ ಲಾಲಾಜಿ ಆರ್. ಮೆಂಡನ್ ಅವರಿಗೆ ಕೊರೊನಾ ಸೋಂಕು ದೃಢಗೊಂಡಿದೆ. ಸ್ವತಃ ಶಾಸಕರೇ ಈ ವಿಷಯವನ್ನು ತಮ್ಮ ಫೇಸ್ಬುಕ್ ಪೇಜ್ ಮೂಲಕ ದೃಢಪಡಿಸಿದ್ದಾರೆ.

ಉಡುಪಿ, ಆಗಸ್ಟ್ 13: ಉಡುಪಿ ಜಿಲ್ಲೆಯ ಕಾಪು ಕ್ಷೇತ್ರದ ಬಿಜೆಪಿ ಶಾಸಕ ಲಾಲಾಜಿ ಆರ್. ಮೆಂಡನ್ ಅವರಿಗೆ ಕೊರೊನಾ ಸೋಂಕು ದೃಢಗೊಂಡಿದೆ. ಸ್ವತಃ ಶಾಸಕರೇ ಈ ವಿಷಯವನ್ನು ತಮ್ಮ ಫೇಸ್ಬುಕ್ ಪೇಜ್ ಮೂಲಕ ದೃಢಪಡಿಸಿದ್ದಾರೆ. ಕೆಲವು ದಿನಗಳ ಹಿಂದೆ ಶಾಸಕರ ಆಪ್ತ ಕಾರ್ಯದರ್ಶಿಗೆ ಕೊರೊನಾ ಸೋಂಕು ತಗುಲಿತ್ತು. ಈ ಹಿನ್ನೆಲೆಯಲ್ಲಿ ಲಾಲಾಜಿ ಆರ್. ಮೆಂಡನ್ ಹೋಮ್ ಕ್ವಾರಂಟೈನ್ ನಲ್ಲಿದ್ದರು. ಅವರ ಗಂಟಲದ್ರವ ಪರೀಕ್ಷೆಗೆ ಒಳಪಡಿಸಿದಾಗ ಸೋಂಕು ತಗುಲಿದ್ದು ದೃಢಗೊಂಡಿದೆ.

ಆದರೆ ತಮಗೆ ಯಾವುದೇ ರೋಗ ಲಕ್ಷಣಗಳಿಲ್ಲ, ಹೀಗಾಗಿ ಕೋವಿಡ್ ಕೇರ್ ಸೆಂಟರ್ ನಲ್ಲಿ ಚಿಕಿತ್ಸೆ ಪಡೆಯುತ್ತೇನೆ. ಕಾಪು ಕ್ಷೇತ್ರದ ಜನತೆ ಅಗತ್ಯ ಕೆಲಸಗಳಿಗಾಗಿ ಕಚೇರಿಯನ್ನು ಸಂಪರ್ಕಿಸಿ. ಶೀಘ್ರ ನಿಮ್ಮ ಸೇವೆ ಮಾಡಲು ಮರಳುತ್ತೇನೆ ಎಂದು ಹೇಳಿದ್ದಾರೆ.

ಇತ್ತೀಚಿನ ದಿನಗಳಲ್ಲಿ ರಾಜಕಾರಣಿಗಳು, ಜನಪ್ರತಿನಿಧಿಗಳಿಗೆ ಮಹಾಮಾರಿ ಕೊರೊನಾ ಸೋಂಕು ತಗುಲುತ್ತಿದೆ. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ ಸೇರದಂತೆ ಹಲವು ಪ್ರಮುಖ ರಾಜಕಾರಣಿಗಳು ಕೊರೊನಾ ಸೋಂಕಿಗೆ ಒಳಗಾಗಿದ್ದರು. ಈ ಇಬ್ಬರು ನಾಯಕರು ಕೊರೊನಾ ವೈರಸ್ ನಿಂದ ಗುಣಮುಖರಾಗಿ, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.