ಬ್ರೇಕಿಂಗ್ ನ್ಯೂಸ್
23-01-21 11:55 am Mangalore Correspondent ಕರಾವಳಿ
ಸುಬ್ರಮಣ್ಯ, ಜ.23 : ಮುಜರಾಯಿ ದೇಗುಲಗಳಲ್ಲಿ ಬಡವರಿಗೆ ನೆರವಾಗುವ ನಿಟ್ಟಿನಲ್ಲಿ ತಿಂಗಳಿಗೆ ಎರಡು ಬಾರಿ ಸಪ್ತಪದಿ ಕಾರ್ಯಕ್ರಮ ನಡೆಸಲು ನಿರ್ಧರಿಸಲಾಗಿದೆ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಕಚೇರಿ ಸಭಾಂಗಣದಲ್ಲಿ ನಡೆದ 11ನೇ ರಾಜ್ಯ ಧಾರ್ಮಿಕ ಪರಿಷತ್ ಸಭೆಯಲ್ಲಿ ಈ ಮಾಹಿತಿ ನೀಡಿದರು. ಫೆಬ್ರವರಿ ತಿಂಗಳ 17 ಮತ್ತು 25ರಂದು ಸಪ್ತಪದಿ ಸರಳ ಸಾಮೂಹಿಕ ವಿವಾಹ ಆಯೋಜಿಸಲಾಗುವುದು. ಆ ಬಳಿಕ ಆಯಾ ತಿಂಗಳ ಮುಹೂರ್ತ ನೋಡಿಕೊಂಡು ಆಯಾ ಜಿಲ್ಲೆಗಳ ಜನರ ಸಂಪ್ರದಾಯ, ಪರಂಪರೆಗೆ ಅನುಗುಣವಾಗಿ ಸಪ್ತಪದಿ ಕಾರ್ಯಕ್ರಮ ನಡೆಸಲಾಗುವುದು. ಯಾವುದೇ ದೇವಸ್ಥಾನದವರು ಅಥವಾ ಜಿಲ್ಲೆಯವರು ಮುಂದೆ ಬಂದರೆ ಅವರು ಹೇಳಿದ ದಿನಾಂಕದಂದೇ ಸಪ್ತಪದಿ ಕಾರ್ಯಕ್ರಮ ನಡೆಸಲು ಅವಕಾಶ ಮಾಡಲಾಗುವುದು ಎಂದರು.

ವ್ಯವಸ್ಥಾಪನಾ ಸಮಿತಿ ನೇಮಕಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ಸುಮಾರು 206 ಎ ದರ್ಜೆ ದೇವಾಲಯಗಳು ಮತ್ತು ಸುಮಾರು 310 ಬಿ ದರ್ಜೆ ದೇವಾಲಯಗಳಿವೆ. ರಾಜ್ಯ ಧಾರ್ಮಿಕ ಪರಿಷತ್ ಮೂಲಕ ಈಗಾಗಲೇ 80 ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ ಮಾಡಲು ಅರ್ಜಿ ಕರೆಯಲಾಗಿತ್ತು. ಅದರಲ್ಲಿ ಸುಮಾರು 11 ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆಯಾಗಿ, ಆಡಳಿತ ನಡೆಸುತ್ತಿದೆ.
ಪೊಲೀಸ್ ವರದಿ ಬಾಕಿಯಿರುವ ದೇವಾಲಯಗಳು ಮಾತ್ರ ವ್ಯವಸ್ಥಾಪನಾ ಸಮಿತಿ ರಚನೆಗೆ ಬಾಕಿಯಾಗಿದೆ. ಇಂದಿನ ರಾಜ್ಯ ಧಾರ್ಮಿಕ ಪರಿಷತ್ ಸಭೆಯಲ್ಲಿ ಈಗಾಗಲೇ ಅವಧಿ ಮುಗಿದಿರುವ ದೇವಾಲಯಗಳಿಗೆ ಶೀಘ್ರ ವ್ಯವಸ್ಥಾಪನಾ ಸಮಿತಿಗೆ ಅರ್ಜಿ ಕರೆಯಲು ನಿರ್ಧರಿಸಲಾಗಿದೆ ಎಂದರು.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
10-10-26 10:31 pm
HK News Staffer
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
ಸರ್ಕಾರಿ ಸಂಸ್ಥೆಯಿಂದ ಕೋಟ್ಯಂತರ ದೇಣಿಗೆ ; ಪಿಣರಾಯಿ...
09-10-26 05:40 pm
Prakash Raj, Dhruv Rathee: SIR ರದ್ದತಿಗೆ ಬೆಂಗಳ...
08-10-26 08:03 pm
10-10-26 09:27 pm
HK News Staffer
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
ಮೂಡುಶೆಡ್ಡೆ ; ಮುಸ್ಲಿಮರ ದಫನಕ್ಕೆ 2 ಎಕರೆ ಪಿಲಿಕುಳದ...
10-10-26 03:21 pm
Nana patekar: ಮಂಗಳೂರು, ಉಡುಪಿಯೊಂದಿಗೆ ನಾನಾ ಪಾಟೇ...
08-10-26 04:30 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm