ಬ್ರೇಕಿಂಗ್ ನ್ಯೂಸ್
23-01-21 12:44 pm Mangalore Correspondent ಕರಾವಳಿ
ಉಳ್ಳಾಲ, ಜ.23 : ಹದಿನೈದು ವರುಷದ ಹಿಂದೆ ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡ ಹಿಂದು ಯುವತಿಗೆ ಸಹಾಯ ಮಾಡುವ ನೆಪದಲ್ಲಿ ಅತ್ಯಾಚಾರವೆಸಗಿ ಆಕೆಯ ಇಬ್ಬರು ಹೆಣ್ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿ ತಲೆಮರೆಸಿಕೊಂಡಿದ್ದ ಉಳ್ಳಾಲದ SDPI ಮುಖಂಡನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.

ಉಳ್ಳಾಲದ SDPI ಮುಖಂಡ ಸಿದ್ದೀಕ್ ಉಳ್ಳಾಲ ಬಂಧಿತ ಆರೋಪಿ. ಸಂತ್ರಸ್ತ ಮಹಿಳೆ ಗಂಡನಿಂದ ದೂರವಾಗಿ ಉಳ್ಳಾಲದ ಒಂಭತ್ತುಕೆರೆಯಲ್ಲಿ ತನ್ನ ಇಬ್ಬರು ಅಪ್ರಾಪ್ತ ಹೆಣ್ಮಕ್ಕಳೊಂದಿಗೆ ವಾಸಿಸುತ್ತಿದ್ದಳು. ಈಕೆಗೆ ಸಹಾಯ ಮಾಡೋ ನೆಪದಲ್ಲಿ ಸ್ನೇಹ ಬೆಳೆಸಿಕೊಂಡ ಸಿದ್ದೀಕ್ ಆಕೆಯನ್ನು ಬಲಾತ್ಕರಿಸಿದಲ್ಲದೆ ಆಕೆಯ ಇಬ್ಬರು ಅಪ್ರಾಪ್ತ ಹೆಣ್ಮಕ್ಕಳಿಗೂ ಲೈಂಗಿಕ ಕಿರುಕುಳ ನೀಡಿದ್ದ. ಈ ಬೆಳವಣಿಗೆ ಕಳೆದ ಡಿಸೆಂಬರ್ ತಿಂಗಳಲ್ಲೇ ನಡೆದಿದ್ದು ಮಹಿಳೆ ಸಿದ್ದೀಕ್ ವಿರುದ್ಧ ದೂರು ನೀಡಲು ಮುಂದಾದಾಗ ಆತನ ಸಹಚರರು ಎನ್ನಲಾದ ಪಕ್ಷದ ಮುಖಂಡರು ಜೀವ ಬೆದರಿಕೆ ಹಾಕಿದ್ದರೆನ್ನಲಾಗಿದೆ.


ಆನಂತರವೂ ಸಿದ್ದೀಕ್ ಉಪಟಳ ಜಾಸ್ತಿಯಾದ ಹಿನ್ನೆಲೆಯಲ್ಲಿ ಕಳೆದ ಜ.16 ರಂದು ಸಂತ್ರಸ್ತ ಮಹಿಳೆ ಉಳ್ಳಾಲ ಠಾಣೆಗೆ ದೂರು ನೀಡಿದ್ದು, ಆರೋಪಿಯ ವಿರುದ್ಧ ಅತ್ಯಾಚಾರ, ಪೋಕ್ಸೊ ಪ್ರಕರಣ ದಾಖಲಾಗಿತ್ತು. ಅಂದಿನಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಕೇರಳಕ್ಕೆ ಪರಾರಿಯಾಗಿದ್ದಾನೆಂಬ ಮಾಹಿತಿ ಇದ್ದುದರಿಂದ ಪತ್ತೆಗಾಗಿ ಎರಡು ತಂಡಗಳನ್ನು ರಚಿಸಲಾಗಿತ್ತು. ಇದೀಗ ಪೊಲೀಸರು ಆರೋಪಿಯನ್ನು ಪತ್ತೆ ಮಾಡಿ ಉಳ್ಳಾಲ ಠಾಣೆಗೆ ಕರೆತಂದಿದ್ದಾರೆ.
ಎಸ್ ಡಿಪಿಐ ಮುಖಂಡನ ಲೈಂಗಿಕ ಕಿರುಕುಳ ; ತನಿಖೆಗೆ ಎರಡು ವಿಶೇಷ ತಂಡ ನೇಮಕ
ಉಳ್ಳಾಲ ; ಲೈಂಗಿಕ ದೌರ್ಜನ್ಯ ಆರೋಪಿ ತಪ್ಪಿತಸ್ಥನಾಗಿದ್ದಲ್ಲಿ ಶಿಕ್ಷೆಯಾಗಲಿ ; ಎಸ್‌ಡಿಪಿಐ
In connection to Sexual Harassment by SDPI leader in Ullal, the Mangalore police have prevailed in arresting the accused Sadiq.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
02-11-25 10:23 pm
Mangalore Correspondent
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm