ಬ್ರೇಕಿಂಗ್ ನ್ಯೂಸ್
23-01-21 04:21 pm Mangalore Correspondent ಕರಾವಳಿ
ಮಂಗಳೂರು, ಜ.23 : ಸಿಎಂ ತವರು ಜಿಲ್ಲೆಯಲ್ಲೇ ಅಕ್ರಮ ಗಣಿಗಾರಿಕೆ ಕಂಡುಬಂದಿದ್ದಲ್ಲದೆ, ಭಾರೀ ಸ್ಫೋಟ ಆಗಿರುವುದು ಅಲ್ಲಿನ ಕಾನೂನು ವ್ಯವಸ್ಥೆ ಬಗ್ಗೆ ಶಂಕೆ ಮೂಡಿಸಿದೆ. ಪೊಲೀಸರು ಜನ ಸಾಮಾನ್ಯರ ಮರಳು ಗಾಡಿಯನ್ನು ವಶ ಪಡಿಸಿಕೊಳ್ಳತ್ತಾರೆ. ಯಾಕೆ ಲಾರಿಯಲ್ಲಿ ಸ್ಪೋಟಕ ವಸ್ತು ಸಾಗಟ ಮಾಡುವವರನ್ನ ಹಿಡಿಯಲ್ಲಾ.. ಇದು ಅಲ್ಲಿನ ಗಣಿ ಇಲಾಖೆ ಅಧಿಕಾರಿಗಳಿಗೆ ಗೊತ್ತಿರಲಿಲ್ಲವೇ ? ಸಂಬಂಧಪಟ್ಟ ಗಣಿ ಇಲಾಖೆ ಅಧಿಕಾರಿಗಳನ್ನ ಕೂಡಲೇ ಸಂಸ್ಪೆಂಡ್ ಮಾಡಬೇಕು ಎಂದು ಮಾಜಿ ಸಚಿವ ಯು.ಟಿ ಖಾದರ್ ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿದ ಖಾದರ್, ಸ್ಫೋಟ ಘಟನೆಯಿಂದ ಜನಸಾಮಾನ್ಯರ ಮನೆಗಳು ಹಾಳಾಗಿವೆ. ಅಕ್ರಮ ಎಂದು ಗೊತ್ತಿದ್ದರೂ ಯಾಕೆ ಸರಕಾರ ಇದರ ಬಗ್ಗೆ ತನಿಖೆ ಮಾಡಲು ಹಿಂದೇಟು ಹಾಕಿತ್ತು. ಇದರಲ್ಲಿ ಯಾರೆಲ್ಲಾ ಶಾಮೀಲಾತಿ ಇದ್ದಾರೆ ಜನರಿಗೆ ಗೊತ್ತಾಗಬೇಕು. ಈ ಘಟನೆಯಿಂದ ಮುಂದಿನ ದಿನಗಳಲ್ಲಿ ಶಿವಮೊಗ್ಗ ಜಿಲ್ಲೆಯ ಜನರ ಜೀವನದ ಮೇಲೆ ಪರಿಣಾಮ ಬೀರಲಿದೆ. ಆಸುಪಾಸಿನಲ್ಲಿ ಮನೆ ಹಾಳಾದವರಿಗೆ ಕೂಡಲೇ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಅರ್ನಾಬ್ ವಿರುದ್ಧ ಕ್ರಮಕ್ಕೆ ಆಗ್ರಹ
ದೇಶದ ರಕ್ಷಣೆ ಉದ್ದೇಶದಿಂದ ಭದ್ರತಾ ವಿಷಯ ಗೌಪ್ಯವಾಗಿರಬೇಕು. ಆದರೆ, ರಿಪಬ್ಲಿಕ್ ಟಿವಿ ಮುಖ್ಯಸ್ಥರು ಹೀನ ಕೃತ್ಯದಲ್ಲಿ ತೊಡಗಿದ್ದಾರೆ. ದೇಶದ ಭದ್ರತೆ ವಿಚಾರವನ್ನು ಅಧಿಕಾರಿಗಳು ಸೋರಿಕೆ ಮಾಡಿದ್ದಾರೆ. ಹೀನ ಕೃತ್ಯದ ಹೊಣೆಯನ್ನ ನೇರವಾಗಿ ಪ್ರಧಾನ ಮಂತ್ರಿ ಹೊರಬೇಕು. ಘಟನೆ ಬಗ್ಗೆ ಸದನ ಸಮಿತಿಯಿಂದ ತನಿಖೆ ನಡೆಯಬೇಕು ಎಂದು ಕೆಪಿಸಿಸಿ ವಕ್ತಾರ, ವಿಧಾನ ಪರಿಷತ್ ಸದಸ್ಯ ಪ್ರಕಾಶ ರಾಠೋಡ್ ಹೇಳಿದ್ದಾರೆ.

ಅರ್ನಾಬ್ ಗೋಸ್ವಾಮಿಯ ವಾಟ್ಸಪ್ ಚಾಟ್ ನೋಡಿದರೆ ಸಂಪೂರ್ಣವಾಗಿ ಅರ್ಥವಾಗುತ್ತೆ. ಇದು ಒಂದು ದೇಶದೋಹ್ರದ ಕೃತ್ಯವೆಂದು ತಿಳಿದುಬರುತ್ತದೆ. ಇದರಿಂದ ಪುಲ್ವಾಮ ದಾಳಿಯ ಕೃತ್ಯ ಮೊದಲೇ ನಿರ್ಧಾರವಾಗಿತ್ತಾ ಎನ್ನುವ ಸಂಶಯ ಕಾಡುವಂತಾಗಿದೆ. ರಾಜಕೀಯ ದುರುದ್ದೇಶದಿಂದ ಈ ದಾಳಿ ನಡೆಸಿದ್ದಾರೆಯೇ ಎನ್ನುವ ಶಂಕೆ ಮೂಡುತ್ತಿದೆ. ಅರ್ನಾಬ್ ಗೋಸ್ವಾಮಿಯ ವಾಹಿನಿ TRP ಗಾಗಿ ಈ ಕೃತ್ಯ ನಡೆಸಿದೆ ಎನ್ನುವುದಕ್ಕೆ ಬೇರೆ ಸಾಕ್ಷಿ ಬೇಕಿಲ್ಲ. ದೇಶದ್ರೋಹಿ ಕೃತ್ಯದಲ್ಲಿ ತೊಡಗಿರುವ ಅರ್ನಾಬ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
02-11-25 10:23 pm
Mangalore Correspondent
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm