ಬ್ರೇಕಿಂಗ್ ನ್ಯೂಸ್
27-01-21 09:54 pm Mangaluru Correspondent ಕರಾವಳಿ
ಪುತ್ತೂರು, ಜ.27: ಬೈಕ್ ರಸ್ತೆ ಡಿವೈಡರ್ಗೆ ಡಿಕ್ಕಿಯಾದ ಪರಿಣಾಮ ನವವಿವಾಹಿತ ಸವಾರ ಮೃತಪಟ್ಟ ದುರ್ಘಟನೆ ಉಪ್ಪಿನಂಗಡಿ ಜಂಕ್ಷನ್ ಬಳಿ ಮಂಗಳವಾರ ತಡರಾತ್ರಿ ನಡೆದಿದೆ.
ಕಡಬ ತಾಲೂಕಿನ ಹಳೆನೇರಂಕಿ ಗ್ರಾಮದ ಕಲ್ಲೇರಿ ನಿವಾಸಿ ಕಿಶೋರ್(29) ಮೃತಪಟ್ಟ ಯುವಕ. ಈತನಿಗೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿತ್ತು. ಮೃತರು ತಾಯಿ, ಪತ್ನಿ ಮತ್ತು ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.
ಮಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಕಿಶೋರ್ ರಾತ್ರಿ ಕೆಲಸ ಮುಗಿಸಿ ವಾಪಸ್ ಮನೆಗೆ ಬರುತ್ತಿದ್ದ ವೇಳೆ ಅಪಘಾತ ನಡೆದಿದೆ. ನಿಯಂತ್ರಣ ಕಳೆದುಕೊಂಡ ಬೈಕ್ ಡಿವೈಡರ್ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಗಂಭೀರ ಗಾಯಗೊಂಡಿದ್ದ ಕಿಶೋರ್ನನ್ನು ಸ್ಥಳೀಯರು ಕೂಡಲೇ ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲು ಕರೆದುಕೊಂಡು ಹೋದರಾದರೂ ದಾರಿ ಮಧ್ಯೆ ಕೊನೆಯುಸಿರುಳೆದಿದ್ದಾರೆ.
ಮಂಗಳೂರಿನ ತೊಕ್ಕೊಟ್ಟಿನಲ್ಲಿ ಪ್ರಿಂಟಿಂಗ್ ಪ್ರೆಸ್ ಒಂದರಲ್ಲಿ ಉದ್ಯೋಗಿಯಾಗಿದ್ದ ಅವರಿಗೆ ಕಳೆದ ಡಿಸೆಂಬರ್ ತಿಂಗಳಲ್ಲಿ ವಿವಾಹ ನಡೆದಿತ್ತು. ಪ್ರತಿದಿನ ಅವರು ಮಂಗಳೂರಿನಿಂದ ಹಳೇ ನೆರಂಕಿಯ ತನ್ನ ಮನೆಗೆ ಬೈಕಿನಲ್ಲಿ ಹೋಗಿ ಬರುತಿದ್ದರು.
ಅಪಘಾತದ ಮಧ್ಯೆ ಕಿಶೋರ್ ಧರಿಸಿದ್ದ ನಾಲ್ಕು ಪವನ್ ತೂಕದ ಚಿನ್ನದ ಸರ ನಾಪತ್ತೆಯಾಗಿದೆ ಎಂದು ಮೃತರ ಸಂಬಂಧಿಕರು ತಿಳಿಸಿದ್ದಾರೆ.
A 29-year-old Newly Married youth was killed in a road accident after his bike collided with a road divider on National Highway 75 in Puttur, Uppinangady on Wednesday, January 27.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
10-10-26 10:31 pm
HK News Staffer
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
ಸರ್ಕಾರಿ ಸಂಸ್ಥೆಯಿಂದ ಕೋಟ್ಯಂತರ ದೇಣಿಗೆ ; ಪಿಣರಾಯಿ...
09-10-26 05:40 pm
Prakash Raj, Dhruv Rathee: SIR ರದ್ದತಿಗೆ ಬೆಂಗಳ...
08-10-26 08:03 pm
10-10-26 09:27 pm
HK News Staffer
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
ಮೂಡುಶೆಡ್ಡೆ ; ಮುಸ್ಲಿಮರ ದಫನಕ್ಕೆ 2 ಎಕರೆ ಪಿಲಿಕುಳದ...
10-10-26 03:21 pm
Nana patekar: ಮಂಗಳೂರು, ಉಡುಪಿಯೊಂದಿಗೆ ನಾನಾ ಪಾಟೇ...
08-10-26 04:30 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm