ಬ್ರೇಕಿಂಗ್ ನ್ಯೂಸ್
30-01-21 02:51 pm Mangalore Correspondent ಕರಾವಳಿ
ಬಂಟ್ವಾಳ, ಜ.30: ತಾಲೂಕಿನ ಸರಪಾಡಿಯಲ್ಲಿ ನಿರ್ಮಾಣಗೊಂಡು ಉದ್ಘಾಟನೆಗೆ ಸಿದ್ದವಾಗಿರುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ವೀಕ್ಷಣೆಗೆ ತೆರಳಿದ್ದ ಮಾಜಿ ಸಚಿವ ರಮಾನಾಥ ರೈ ಅವರಿಗೆ ಬಿಜೆಪಿ ಕಾರ್ಯಕರ್ತರು ಘೆರಾವ್ ಹಾಕಿದ ಘಟನೆ ನಡೆದಿದೆ.
ತನ್ನ ಅವಧಿಯಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಜಾರಿಯಾಗಿದ್ದ ಹಿನ್ನೆಲೆಯಲ್ಲಿ ಕ್ಷೇತ್ರದ ಮಾಜಿ ಶಾಸಕ ರಮಾನಾಥ ರೈ ಯೋಜನೆಯ ಕಾಮಗಾರಿಯನ್ನು ನೋಡಲೆಂದು ಇಂದು ಸ್ಥಳಕ್ಕೆ ತೆರಳಿದ್ದರು. ಆದರೆ, ರಮಾನಾಥ ರೈ ಸ್ಥಳಕ್ಕೆ ಬರುವ ವಿಚಾರ ತಿಳಿದು ಬಿಜೆಪಿ ಕಾರ್ಯಕರ್ತರು ಸೇರಿದ್ದು ಸ್ಥಳದಲ್ಲಿ ಬಿಗುವಿನ ವಾತಾವರಣ ನೆಲೆಯಾಗಿದೆ. ಗೇಟ್ ತೆರೆದು ತನಗೆ ವೀಕ್ಷಿಸಲು ಅವಕಾಶ ನೀಡಬೇಕೆಂದು ರಮಾನಾಥ ರೈ ಪಟ್ಟು ಹಿಡಿದಾಗ ಪೊಲೀಸರು ಅದಕ್ಕೆ ಅವಕಾಶ ಕೊಡಲಿಲ್ಲ. ಬಿಜೆಪಿ ಕಾರ್ಯಕರ್ತರು ಧಿಕ್ಕಾರ ಕೂಗಿದ್ದಲ್ಲದೆ, ರಮಾನಾಥ ರೈ ಜೊತೆ ವಾಗ್ವಾದ ನಡೆಸಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಆಕ್ರೋಶದ ಮಾತುಗಳು ವಿನಿಮಯ ಆಗಿದ್ದು ಪೊಲೀಸರ ನಡುವೆ ತಳ್ಳಾಟಕ್ಕೂ ಸಾಕ್ಷಿಯಾಯಿತು.


ಬಂಟ್ವಾಳದಿಂದ ಹೆಚ್ಚುವರಿ ಪೊಲೀಸರನ್ನು ಸ್ಥಳದಲ್ಲಿ ನಿಯೋಜಿಸಿದ್ದು ಸೇರಿದ್ದ ಕಾರ್ಯಕರ್ತರನ್ನು ಚದುರಿಸಲಾಗಿದೆ. ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ನಾಳೆ ಭಾನುವಾರ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಉದ್ಘಾಟಿಸಲಿದ್ದು ಇದೇ ಸಂದರ್ಭದಲ್ಲಿ ಮಾಜಿ ಶಾಸಕರು ಸ್ಥಳಕ್ಕೆ ಬಂದಿದ್ದು ಬಿಜೆಪಿ ಕಾರ್ಯಕರ್ತರ ಆಕ್ಷೇಪಕ್ಕೆ ಕಾರಣವಾಗಿದೆ.

ರಮಾನಾಥ ರೈ ಈ ವೇಳೆ ಪೊಲೀಸರ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾನು ಮಾಜಿ ಶಾಸಕ. ಸರಕಾರಿ ಯೋಜನೆಯನ್ನು ವೀಕ್ಷಿಸುವುದು ನನ್ನ ಹಕ್ಕು. ಅದನ್ನು ನಿರಾಕರಿಸುವಂತಿಲ್ಲ ಎಂದಿದ್ದಾರೆ. ಆದರೆ, ಪೊಲೀಸರು ಯೋಜನೆಗೆ ಸಂಬಂಧಪಟ್ಟ ಅಧಿಕಾರಿಗಳು ಇಲ್ಲದೆ ವೀಕ್ಷಿಸಲು ಅವಕಾಶ ನೋಡುವುದಿಲ್ಲ. ಮೇಲಿನ ಅಧಿಕಾರಿಗಳು ಪರ್ಮಿಶನ್ ನೀಡಿದರೆ ಅವಕಾಶ ನೀಡುತ್ತೇವೆ. ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನೆಲೆಯಾಗಿದೆ. ಹೀಗಿರುವಾಗ ಅವಕಾಶ ನೀಡುವುದು ಹೇಗೆ ಎಂದು ಪ್ರಶ್ನೆ ಮಾಡಿದ್ದಾರೆ. ಕೊನೆಗೆ ರಮಾನಾಥ ರೈ ಮತ್ತು ಕಾಂಗ್ರೆಸ್ ನಾಯಕರ ನಿಯೋಗ ಸ್ಥಳದಿಂದ ತೆರಳಿದ್ದಾರೆ.
Video:
Clash erupts between BJP and Congress Members in Bantwal in Mangalore. The issue erupted regarding water project at Bantwal.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm