ಬ್ರೇಕಿಂಗ್ ನ್ಯೂಸ್
15-02-21 06:09 pm Mangalore Correspondent ಕರಾವಳಿ
ಮಂಗಳೂರು, ಫೆ.15: ಸುರತ್ಕಲ್ (ಎನ್ಐಟಿಕೆ) ಟೋಲ್ ಕೇಂದ್ರದಲ್ಲಿ ಫಾಸ್ಟ್ ಟ್ಯಾಗ್ ಕಡ್ಡಾಯ ಮಾಡುತ್ತಾರೆಂಬ ನೆಲೆಯಲ್ಲಿ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ, ಸುರತ್ಕಲ್ ಹಾಗೂ ಮುಲ್ಕಿ ನಾಗರಿಕ ಅಭಿವೃದ್ದಿ ಸಮಿತಿಯ ಮುಖಂಡರು ಸುರತ್ಕಲ್ ಟೋಲ್ ಕೇಂದ್ರದಲ್ಲಿ ಬೆಳಗ್ಗಿನಿಂದಲೇ ಜಮಾಯಿಸಿದ್ದರು. ಈ ವೇಳೆ, ಟೋಲ್ ಸಂಗ್ರಹ ಗುತ್ತಿಗೆದಾರರ ಪ್ರತಿನಿಧಿಗಳು, ಸ್ಥಳೀಯರ ವಾಹನಗಳ ರಿಯಾಯ್ತಿಯನ್ನು ರದ್ದುಗೊಳಿಸುವ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಅಂತಹ ಸೂಚನೆಯೇ ಸಂಬಂಧಪಟ್ಟ ಅಧಿಕಾರಿಗಳಿಂದ ಬಂದಿಲ್ಲ ಎಂದು ತಿಳಿಸಿದ್ದಾರೆ.

ಅಲ್ಲದೆ, ಸ್ಥಳೀಯ ವಾಹನಗಳು ಸಂಚರಿಸುವ ಪಥವನ್ನು ಫಾಸ್ಟ್ ಟ್ಯಾಗ್ ಮುಕ್ತವನ್ನಾಗಿಯೇ ಸದ್ಯಕ್ಕೆ ಮುಂದುವರಿಸಲಾಗುವುದು ಎಂದು ಗುತ್ತಿಗೆದಾರರು ತಿಳಿಸಿದರು. ಈ ಹಿನ್ನೆಲೆಯಲ್ಲಿ ಅಲ್ಲಿ ಸೇರಿದ್ದ ಸಂಘಟನೆಗಳ ಪ್ರಮುಖರು ಸಭೆ ನಡೆಸಿದ್ದು, ಸ್ಥಳೀಯ ವಾಹನಗಳ ಉಚಿತ ಪ್ರಯಾಣಕ್ಕೆ ಭರವಸೆ ನೀಡಿರುವುದರಿಂದ ಸದ್ಯ ಪ್ರತಿಭಟನೆ ನಡೆಸದಿರಲು ನಿರ್ಧರಿಸಿದ್ದಾರೆ. ಒಂದ್ವೇಳೆ ದಿಢೀರ್ ಶುಲ್ಕ ವಿಧಿಸಿದರೆ ಸ್ಥಳದಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿದರು.


ಇದೇ ವೇಳೆ, ಸುರತ್ಕಲ್ ಟೋಲ್ ಕೇಂದ್ರವನ್ನು ಅಲ್ಲಿಂದ ತೆರವುಗೊಳಿಸುವ ಹೋರಾಟವನ್ನು ತೀವ್ರಗೊಳಿಸುವುದು, ಅದರ ಭಾಗವಾಗಿ ಸಾಮೂಹಿಕ ಧರಣಿ ನಡೆಸಲು ನಿರ್ಧರಿಸಿದ್ದಾರೆ. ಇದಲ್ಲದೆ, ಸಂಸದ ನಳಿನ್ ಕುಮಾರ್ ಕಟೀಲ್ ಕೇಂದ್ರ ಸಚಿವರ ಜೊತೆ ಟೋಲ್ ಕೇಂದ್ರ ತೆರವುಗೊಳಿಸುವ ಕುರಿತು ನಡೆಸಿದ ಮಾತುಕತೆಗಳು ಫಲಪ್ರದ ಆಗಲ್ಲ. ಈವರಗೆ ತಾತ್ಕಾಲಿಕ ನೆಲೆಯಲ್ಲಿ ಮೂರು ತಿಂಗಳಿಗೆ ಟೋಲ್ ಸಂಗ್ರಹದ ಗುತ್ತಿಗೆ ನೀಡುತ್ತಿದ್ದರೆ, ಈ ಬಾರಿ ಒಂದು ವರ್ಷದ ಅವಧಿಗೆ ಟೋಲ್ ಸಂಗ್ರಹದ ಗುತ್ತಿಗೆ ನೀಡಲಾಗಿದೆ. ಗುತ್ತಿಗೆ ನವೀಕರಣ, ಟೆಂಡರ್ ಪ್ರಕ್ರಿಯೆ ಜನವರಿ ತಿಂಗಳಲ್ಲಿ ನಡೆಯುವ ಮಾಹಿತಿ ಇದ್ದರೂ, ಸಂಸದರು ನಿರ್ಲಕ್ಷ್ಯ ವಹಿಸಿದ್ದಾರೆ. ಈ ನಡುವೆ, ಸಚಿವ ನಿತಿನ್ ಗಡ್ಕರಿಯನ್ನು ಭೇಟಿ ಮಾಡಿರುವುದು, ತಾತ್ಕಾಲಿಕ ಟೋಲ್ ಗೇಟ್ ತೆರವಿನ ಕುರಿತು ಹೇಳಿಕೆ ನೀಡಿರುವುದು ಜನತೆಯನ್ನು ದಿಕ್ಕುತಪ್ಪಿಸುವ ಯತ್ನ ಅಷ್ಟೇ. ಸರಣಿ ಹೋರಾಟಗಳಿಂದಷ್ಟೆ ಟೋಲ್ ಗೇಟ್ ತೆರವು ಸಾಧ್ಯ ಎಂದು ಸಭೆಯಲ್ಲಿ ನಿರ್ಣಯಿಸಲಾಯ್ತು.

ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ, ಮುಲ್ಕಿ ಅಭಿವೃದ್ದಿ ನಾಗರಿಕ ಸಮಿತಿಯ ಅಧ್ಯಕ್ಷ ಹರೀಶ್ ಪುತ್ರನ್, ಮಾಜಿ ಉಪ ಮೇಯರ್ ಪುರುಷೋತ್ತಮ ಚಿತ್ರಾಪುರ, ವಿವಿಧ ಸಂಘಟನೆಗಳ ಮುಖಂಡರಾದ ವಸಂತ ಬರ್ನಾಡ್, ಧನಂಜಯ ಮಟ್ಟು, ಶ್ರೀನಾಥ್ ಕುಲಾಲ್, ಅಶ್ರಫ್ ಸಫಾ, ಅದ್ದಿ ಬೊಳ್ಳೂರು, ಗ್ರಾಪಂ ಸದಸ್ಯರಾದ ಅಬ್ದುಲ್ ಖಾದರ್ ಹಳೆಯಂಗಡಿ, ಧನರಾಜ್ ಸಸಿಹಿತ್ಲು ಮತ್ತಿತರರು ಉಪಸ್ಥಿತರಿದ್ದರು.
Surathkal Toll Gate gets another year contract by State BJP president Naleen Kumar Kateel amid protest and opposition by localities and organisations.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
10-10-26 10:31 pm
HK News Staffer
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
ಸರ್ಕಾರಿ ಸಂಸ್ಥೆಯಿಂದ ಕೋಟ್ಯಂತರ ದೇಣಿಗೆ ; ಪಿಣರಾಯಿ...
09-10-26 05:40 pm
Prakash Raj, Dhruv Rathee: SIR ರದ್ದತಿಗೆ ಬೆಂಗಳ...
08-10-26 08:03 pm
10-10-26 09:27 pm
HK News Staffer
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
ಮೂಡುಶೆಡ್ಡೆ ; ಮುಸ್ಲಿಮರ ದಫನಕ್ಕೆ 2 ಎಕರೆ ಪಿಲಿಕುಳದ...
10-10-26 03:21 pm
Nana patekar: ಮಂಗಳೂರು, ಉಡುಪಿಯೊಂದಿಗೆ ನಾನಾ ಪಾಟೇ...
08-10-26 04:30 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm