ಬ್ರೇಕಿಂಗ್ ನ್ಯೂಸ್
16-02-21 07:30 pm Mangaluru Correspondent ಕರಾವಳಿ
ಕುಂದಾಪುರ, ಫೆ.15: ಫಾಸ್ಟ್ಯಾಗ್ ಕಡ್ಡಾಯ ಕ್ರಮದಿಂದಾಗಿ ಇಲ್ಲಿನ ರಾಷ್ಟ್ರೀಯ ಹೆದ್ದಾರಿ ಸಾಸ್ತಾನದ ಟೋಲ್ ಗೇಟಿನಲ್ಲಿ ಸ್ಥಳೀಯರಿಗೂ ಶುಲ್ಕ ವಿಧಿಸಲಾಗುತ್ತಿದ್ದು ಇದನ್ನು ವಿರೋಧಿಸಿ ಹೆದ್ದಾರಿ ಹೋರಾಟ ಸಮಿತಿ ನೇತೃತ್ವದಲ್ಲಿ ಮಂಗಳವಾರ ಸ್ಥಳೀಯರು ಪ್ರತಿಭಟನೆ ನಡೆಸಿದರು.
ಸ್ಥಳೀಯರು ಟೋಲ್ ಗೇಟಿನ ಮುಂದೆ ತಮ್ಮ ವಾಹನಗಳನ್ನು ರಸ್ತೆಗೆ ಅಡ್ಡ ಇಟ್ಟು ಧರಣಿ ಕುಳಿತು ನವಯುಗ ಕಂಪನಿಯ ವಿರುದ್ಧ ಘೋಷಣೆಗಳನ್ನು ಕೂಗಿದರು. ಹೆದ್ದಾರಿ ಹೋರಾಟ ಸಮಿತಿಯ ಅಧ್ಯಕ್ಷ ಶ್ಯಾಮ ಸುಂದರ್ ಮಾತನಾಡಿ, ಕೋಟ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ನಿವಾಸಿಗಳು ಸಾಸ್ತಾನ ಟೋಲ್ ಗೇಟಿಗೆ ಹಿಂದಿನಂತೆ ಯಾವುದೇ ಟೋಲ್ ನೀಡದೆ ಕರ ನಿರಾಕರಣೆ ಚಳವಳಿ ಮುಂದಾಗಬೇಕು ಎಂದು ಕರೆ ನೀಡಿದರು.
ಹೆದ್ದಾರಿ ಹೋರಾಟ ಸಮಿತಿ ಸ್ಥಾಪಕ ಅಧ್ಯಕ್ಷ ಪ್ರತಾಪ್ ಶೆಟ್ಟಿ ಮಾತನಾಡಿ, ಸ್ಥಳೀಯರಿಗೆ ಟೋಲ್ ನಿಂದ ವಿನಾಯಿತಿ ನೀಡುವ ವರೆಗೆ ಹೋರಾಟ ಮುಂದುವರಿಸಲಾಗುವುದು ಎಂದರು. ಉಡುಪಿ ಡಿವೈಎಸ್ಪಿ ಸುಧಾಕರ್ ಎಸ್., ಬ್ರಹ್ಮಾವರ ವೃತ ನಿರೀಕ್ಷಕ ಅನಂತ ಪದ್ಮನಾಭ ಹಾಗೂ ಕೋಟ ಎಸ್ಸೈ ಸಂತೋಷ್ ಬಿ.ಪಿ. ಪ್ರತಿಭಟನಾಕಾರರ ಮನವೊಲಿಸಲು ಪ್ರಯತ್ನಿಸಿದರು. ಆದರೆ ಇದಕ್ಕೆ ಪ್ರತಿಭಟನಾಕಾರರು ಮಣಿಯಲಿಲ್ಲ. ಬಳಿಕ ಸ್ಥಳಕ್ಕಾಗಮಿಸಿದ ಬ್ರಹ್ಮಾವರ ತಹಶೀಲ್ದಾರ್ ಕಿರಣ್ ಗೌರಯ್ಯ ಈ ಬಗ್ಗೆ ಸೂಕ್ತ ಕ್ರಮಕ್ಕೆ ಸಮಯಾವಕಾಶ ಕೋರಿದರು. ಅದಕ್ಕೆ ಸಮ್ಮತಿಸಿದ ಪ್ರತಿಭಟನಾಕಾರರ ಪ್ರತಿಭಟನೆ ಹಿಂಪಡೆದರು.
Members of Tollgate Virodhi Horata Samithi of Surathkal and Mulki Nagarika Abhivridhi Samithi have decided to intensify their protest against the toll plaza at Surathkal.
23-05-25 02:35 pm
Bangalore Correspondent
ಹಾಸನ ಜಿಲ್ಲೆಯಲ್ಲಿ ಮತ್ತೊಬ್ಬ ಮಹಿಳೆಯನ್ನು ತುಳಿದು ಸ...
23-05-25 11:54 am
ಕೊಡಗಿನಲ್ಲಿ ಈ ಬಾರಿ ಮಳೆ ಹೆಚ್ಚು ; ಮತ್ತೆ ಪ್ರಕೃತಿ...
22-05-25 11:09 pm
Ramanagara, Bangalore South: ರಾಮನಗರ ಜಿಲ್ಲೆಯನ್...
22-05-25 09:07 pm
Alok Kumar IPS, DGP, Phone Tapping: ರಫ್ ಅಂಡ್...
22-05-25 07:36 pm
23-05-25 08:08 pm
HK News Desk
ಭಾರತೀಯ ಹೈಕಮಷಿನ್ ಅಧಿಕಾರಿಗೆ ಗೇಟ್ ಪಾಸ್, 24 ಗಂಟೆಯ...
22-05-25 05:53 pm
ವಿದೇಶಕ್ಕೆ ಹೊರಟ ಸರ್ವಪಕ್ಷಗಳ ಏಳು ನಿಯೋಗ ; ಭಾರತದ ಸ...
22-05-25 05:43 pm
ಸಿಂಧು ಜಲ ಒಪ್ಪಂದ ಮರು ಪರಿಶೀಲಿಸಲು ಭಾರತ ಉತ್ಸುಕ ;...
21-05-25 12:57 pm
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
23-05-25 10:46 pm
Mangalore Correspondent
Bantwal Heart Attack, Mangalore: ಪತ್ನಿಯ ಸೀಮಂತ...
23-05-25 06:04 pm
Mangalore Suhas Shetty, Nandan Mallya, BJP: ಸ...
23-05-25 05:38 pm
VHP, Mangalore, Suhas Shetty Murder: ಸುಹಾಸ್ ಶ...
22-05-25 10:29 pm
Thokottu Auto Driver Fight, Mangalore: ಅಡ್ಡ ಇ...
22-05-25 10:19 pm
23-05-25 11:20 pm
Mangalore Correspondent
ಬಾಬ್ರಿ ಮಸೀದಿಗೆ ಪ್ರತೀಕಾರ, ಭಾರತದ ವಿರುದ್ಧ ದಾಳಿಗ...
23-05-25 01:25 pm
Valachil Murder, Mangalore crime: ಮದುವೆ ಸಂಬಂಧ...
23-05-25 10:02 am
Davangere Doctor, Stock Market Fraud: ಷೇರು ಮಾ...
22-05-25 02:22 pm
Mangalore Fraud, Currency trading scam: ಕರೆನ್...
19-05-25 09:38 pm