ಬ್ರೇಕಿಂಗ್ ನ್ಯೂಸ್
20-02-21 10:42 pm Udupi Correspondent ಕರಾವಳಿ
ಉಡುಪಿ, ಫೆ. 20: ಕೊರೋನಾದ 2ನೇ ಅಲೆಯ ಭೀತಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇರಳ ಮತ್ತು ಮಹಾರಾಷ್ಟ್ರ ಗಡಿಯನ್ನು ಹೊಂದಿಕೊಂಡಿರುವ ಜಿಲ್ಲೆಗಳಲ್ಲಿ ನಿರ್ಬಂಧಗಳನ್ನು ವಿಧಿಸಲು ಉನ್ನತ ಮಟ್ಟದಲ್ಲಿ ಚರ್ಚೆಯಾಗುತ್ತಿದೆ ಎಂದು ರಾಜ್ಯ ಗೃಹ, ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಕಾಪುವಿನಲ್ಲಿ ನೂತನವಾಗಿ ನಿರ್ಮಿಸಲಾದ ಪೊಲೀಸ್ ವಸತಿ ಗೃಹಗಳ ಉದ್ಘಾಟನೆಗೆ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಕೇರಳ ಹಾಗೂ ಮಹಾರಾಷ್ಟ್ರಗಳ ಜೊತೆ ನಮ್ಮ ಜಿಲ್ಲೆಗಳಿಗೆ ವ್ಯಾಪಾರ ಸಂಬಂಧವಿದೆ. ಕೇರಳಕ್ಕೆ ದಿನನಿತ್ಯದ ಓಡಾಟವೂ ನಡೆಯುತ್ತಿದೆ. ಹೀಗಿದ್ದರೂ ಕೊರೋನ ಭೀತಿಯ ಹಿನ್ನೆಲೆಯಲ್ಲಿ ಗಡಿ ಜಿಲ್ಲೆಗಳಿಗೆ ಕೆಲವೊಂದು ನಿರ್ಬಂಧ ಹಾಕಲು ಚರ್ಚೆ ನಡೆಯುತ್ತಿದೆ ಎಂದರು.
ಕೇರಳದಿಂದ ಕರ್ನಾಟಕಕ್ಕೆ ಬರಲು 15 -16 ರಸ್ತೆಗಳಿವೆ. ಇವುಗಳಲ್ಲಿ ಪ್ರಮುಖ ಮಾರ್ಗಗಳಿಗೆ ಸೀಮಿತಗೊಳಿಸಿ ಉಳಿದ ರಸ್ತೆಗಳನ್ನು ಬಂದ್ ಮಾಡಲು ಚಿಂತನೆ ನಡೆಯುತ್ತಿದೆ. ಅಲ್ಲದೇ ಕೇರಳ, ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವ ಎಲ್ಲರಿಗೂ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಎಲ್ಲರೂ ಕಡ್ಡಾಯವಾಗಿ ಕೋವಿಡ್ ಪರೀಕ್ಷಾ ವರದಿ ಸಲ್ಲಿಸಬೇಕು ಎಂಬ ನಿಯಮ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಅಲ್ಲದೇ ಮಹಾರಾಷ್ಟ್ರ, ಕೇರಳ ಹಾಗೂ ಆಂಧ್ರಪ್ರದೇಶ ಗಡಿ ಭಾಗಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಸಂಬಂಧಪಟ್ಟ ಜಿಲ್ಲೆಯ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಲಾಗಿದೆ ಎಂದೂ ಸಚಿವರು ನುಡಿದರು.

ಪಿಎಫ್‌ಐ ವಿವಾದದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಪಿಎಫ್‌ಐ ಹೇಳಿಕೆಯನ್ನು ಗಂಭೀರವಾಗಿ ತೆಗೆದುಕೊಂಡಿದ್ದೇವೆ. ಈಗಾಗಲೇ ಪ್ರಕರಣ ದಾಖಲಾಗಿದೆ. ತಪ್ಪಿತಸ್ಥರಿಗೆ ಶಿಕ್ಷೆಯಾಗುತ್ತದೆ ಎಂದರು.
ಐಎಂಎ ಜುವೆಲ್ಲರಿ ಹಗರಣದ ಆರೋಪಿ ಮನ್ಸೂರ್ ಖಾನ್ ನಿಂದ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಎಚ್.ಡಿ.ಕುಮಾರಸ್ವಾಮಿಗೆ ಹಣ ಸಂದಾಯವಾಗಿರುವ ಆರೋಪದ ಬಗ್ಗೆ ವಿಚಾರಿಸಿದಾಗ, ಐಎಂಎ ಪ್ರಕರಣವನ್ನು ಸಿಬಿಐ ತನಿಖೆ ಮಾಡುತ್ತಿದೆ. ಅದನ್ನು ನಮ್ಮ ರಾಜ್ಯದ ಪೊಲೀಸರು ತನಿಖೆ ಮಾಡುತ್ತಿಲ್ಲ. ಹೀಗಾಗಿ ವಿಚಾರಣೆಯ ಅಂಶಗಳು ನನ್ನ ಗಮನಕ್ಕೆ ಬಂದಿಲ್ಲ ಎಂದು ಬೊಮ್ಮಾಯಿ ಹೇಳಿದರು.
State home minister Basavaraj Bommai on Saturday, February 20 said that restrictions will be placed on the state’s border areas with Kerala and Maharashtra due to rising cases and second wave of coronavirus.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm