ಬ್ರೇಕಿಂಗ್ ನ್ಯೂಸ್
01-03-21 02:47 pm Udupi Correspondent ಕರಾವಳಿ
ಉಡುಪಿ, ಮಾ.1; ದುಬೈ ಜಗತ್ತಿನಲ್ಲಿ ಹೆಲ್ತ್ ಕೇರ್ ಸಾಮ್ರಾಜ್ಯ ಕಟ್ಟಿ ಸಿರಿವಂತನಾಗಿ ದಿಢೀರ್ ಕುಸಿತಕ್ಕೊಳಗಾಗಿ ದಿವಾಳಿಯಾಗಿದ್ದ ಹೆಸರಾಂತ ಉದ್ಯಮಿ ಬಿ.ಆರ್ ಶೆಟ್ಟಿ ಉಡುಪಿಯಲ್ಲಿ ಕಾಣಿಸಿಕೊಂಡಿದ್ದಾರೆ. ಇಲ್ಲಿನ ಕೂಸಮ್ಮ ಶಂಭು ಶೆಟ್ಟಿ - ಹಾಜಿ ಅಬ್ದುಲ್ಲಾ ಸ್ಮಾರಕ ಸರಕಾರಿ ಆಸ್ಪತ್ರೆಯಲ್ಲಿ ಕಾಣಿಸಿಕೊಂಡು ಪತ್ರಿಕಾಗೋಷ್ಠಿ ನಡೆಸಿದ್ದಾರೆ.
ಆಸ್ಪತ್ರೆಯಲ್ಲಿ ಹತ್ತು ಸಾವಿರದ ಮಗುವಿನ ಜನನ ಸಂದರ್ಭದ ಕಾರ್ಯಕ್ರಮಕ್ಕೆ ಬಿ.ಆರ್ ಶೆಟ್ಟಿ ಆಗಮಿಸಿದ್ದರು. ಕಾರ್ಯಕ್ರಮದ ಬಳಿಕ ತಮ್ಮ ಆರ್ಥಿಕ ಪತನ, ಸದ್ಯದ ಸ್ಥಿತಿಗತಿ ಬಗ್ಗೆ ಬಿ.ಆರ್ ಶೆಟ್ಟಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.

ನಾನು ಎಲ್ಲೂ ಓಡಿ ಹೋಗಿಲ್ಲ, ಹೋಗುವುದೂ ಇಲ್ಲ. ನನ್ನ ಸಾಮ್ರಾಜ್ಯ ಪತನ ಆಗಿದ್ದು ನಿಜ. ಆದರೆ ಅದಕ್ಕೆ ನಾನು ಕಾರಣ ಅಲ್ಲ, ನಾನೊಬ್ಬ ಬಲಿಪಶು ಎಂದು ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗಿ ಚರ್ಚೆ ಮಾಡಲು ನನಗೆ ನಾಚಿಕೆಯಾಗುತ್ತದೆ. ಈ ಹಿಂದೆ ನಾನು ಅವರ ಜೊತೆ ಮಾತನಾಡಿದ್ದೇನೆ. ಆದರೆ ಇವತ್ತಿನ ನನ್ನ ಪರಿಸ್ಥಿತಿಯಲ್ಲಿ ಅವರ ಮುಂದೆ ನಿಲ್ಲಲು ನನಗೆ ಮುಜುಗರ ಆಗುತ್ತದೆ ಎಂದು ಹೇಳಿದರು.

ಮಾಧ್ಯಮದವರು ವಿಜಯ್ ಮಲ್ಯ ಮೋಸ ಮಾಡಿ ಓಡಿ ಹೋದ, ನೀರವ್ ಮಲ್ಯ ಬ್ಯಾಂಕುಗಳಿಗೆ ಮೋಸ ಮಾಡಿ ಓಡಿ ಹೋದ ಎಂದು ಬರೆಯುತ್ತಿದ್ದಾರೆ. ನಾಳೆ ಬಿ.ಆರ್ ಶೆಟ್ಟಿಯೂ ಓಡಿಹೋಗಿದ್ದಾಗಿ ಬರೆಯುತ್ತಾರೆ. ನಾನೆಲ್ಲಿಗೂ ಓಡಿ ಹೋಗಲ್ಲ. ನಾನು ಉಡುಪಿಯಲ್ಲೇ ಇರುತ್ತೇನೆ ಎಂದರು ಶೆಟ್ಟಿ.

ಉಡುಪಿಯಲ್ಲಿ ನನ್ನ ಕನಸಿನ ಕೂಸು ಬಿ.ಆರ್.ಎಸ್ ಲೈಫ್ ಆಸ್ಪತ್ರೆಯನ್ನು ನಿರ್ಮಾಣ ಮಾಡುತ್ತೇನೆ. ಅದೇ ರೀತಿ ಹಾಜಿ ಅಬ್ದುಲ್ಲಾ ಶಂಭು ಶೆಟ್ಟಿ ಸ್ಮಾರಕ ಸರಕಾರಿ ಆಸ್ಪತ್ರೆಯನ್ನು ಇನ್ನಷ್ಟು ಚೆನ್ನಾಗಿ ನಡೆಸಿಕೊಂಡು ಹೋಗುತ್ತೇನೆ. ಉಡುಪಿಯಲ್ಲಿ ಶಿಕ್ಷಣ ಸಂಸ್ಥೆ ಕಟ್ಟುವ ಉದ್ದೇಶ ಇದೆ. ನನ್ನ ಆರ್ಥಿಕ ಪತನದ ಬಗ್ಗೆ ಹೆಚ್ಚು ಮಾತನಾಡಲು ಸಾಧ್ಯವಿಲ್ಲ, ಅದೀಗ ಕೋರ್ಟ್ ಅಂಗಳದಲ್ಲಿದೆ ಎಂದು ಹೇಳಿದರು.
UAE based billionaire accused of fraud B R Shetty was today spotted in Udupi. Speaking to media persons he said I won't run Like Malya or Nirav Modi.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm