ಬ್ರೇಕಿಂಗ್ ನ್ಯೂಸ್
29-03-21 05:07 pm Mangalore Correspondent ಕರಾವಳಿ
ಮಂಗಳೂರು, ಮಾ.29: ಸಿಡಿ ಪ್ರಕರಣದಲ್ಲಿ ಸಂತ್ರಸ್ತ ಯುವತಿಗೆ ರಕ್ಷಣೆ ಒದಗಿಸಬೇಕು, ಆರೋಪಿ ರಮೇಶ್ ಜಾರಕಿಹೊಳಿಯನ್ನು ಕೂಡಲೇ ಬಂಧಿಸಬೇಕು ಅಲ್ಲದೆ, ಪ್ರಕರಣದ ಬಗ್ಗೆ ಹೈಕೋರ್ಟ್ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಒತ್ತಾಯಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣ ಬೆಳಕಿಗೆ ತಿಂಗಳಾದರೂ ಆರೋಪಿ ಸ್ಥಾನದಲ್ಲಿರುವ ರಮೇಶ್ ಜಾರಕಿಹೊಳಿಯನ್ನು ಪೊಲೀಸರು ಬಂಧಿಸಿಲ್ಲ. ಆತ ಹಾದಿ ಬೀದಿಯಲ್ಲಿ ಮಾತನಾಡುವ ಜತೆಗೆ ಸಾರ್ವಜನಿಕವಾಗಿ ಓಡಾಡಿಕೊಂಡಿದ್ದಾರೆ. ಎಸ್ಐಟಿ ಯನ್ನು ತಮ್ಮ ಕೈಗೊಂಬೆ ಮಾಡಿಕೊಂಡು ಸಾಕ್ಷ್ಯ ನಾಶ ಮಾಡುವ ಅನುಮಾನ ಇದೆ ಎಂದು ಆರೋಪಿಸಿದರು.

ಪ್ರಕರಣದ ಆರಂಭದಲ್ಲಿ ಮಹಿಳಾ ಆಯೋಗದ ಅಧ್ಯಕ್ಷರಿಂದಲೂ ಸಂತ್ರಸ್ತೆಗೆ ರಕ್ಷಣೆ ನೀಡುವ ಭರವಸೆ ನೀಡಲಾಗಿತ್ತು. ಆದರೆ, ಅಂತಹ ಯಾವುದೇ ನೆರವು ಯುವತಿಗೆ ದೊರಕಿಲ್ಲ. ಬದಲಿಗೆ ಆಕೆಯನ್ನೇ ಆರೋಪಿಯಾಗಿಸುತ್ತಿದ್ದಾರೆ ಎಂದು ಅವರು ಹೇಳಿದರು.
ಬೆಳಗಾವಿಯ ಲೋಕಸಭೆ ಹಾಗೂ ಮಸ್ಕಿ, ಬಸವಕಲ್ಯಾಣ ಕ್ಷೇತ್ರಗಳ ಉಪ ಚುನಾವಣೆ ಇರುವ ಹಿನ್ನೆಲೆಯಲ್ಲಿ ಪ್ರಸಕ್ತ ವಿದ್ಯಮಾನಗಳ ನಡುವೆ ಬಿಜೆಪಿ ಮತ್ತು ರಾಜ್ಯ ಸರಕಾರದ ನಾಯಕರು ಹತಾಶೆಗೊಂಡಿದ್ದಾರೆ. ಚುನಾವಣೆಯಲ್ಲಿ ಸಿಡಿ ಪ್ರಕರಣದಿಂದ ಹಿನ್ನಡೆಯಾಗುವುದನ್ನು ಮನಗಂಡು ತಮ್ಮ ಬೆಂಬಲಿಗರ ಮೂಲಕ ಕೆಪಿಸಿಸಿ ಅಧ್ಯಕ್ಷರ ಮೇಲೆ ಗೂಬೆ ಕೂರಿಸುತ್ತಿದ್ದಾರೆ. ಡಿಕೆ ಶಿವಕುಮಾರ್ ಪ್ರಯಾಣಿಸುವ ಕಾರಿನ ಮೇಲೆ ಕಲ್ಲು ತೂರಾಟ, ಪೊಲೀಸ್ ಬೆಂಗಾವಲು ವಾಹನದ ಮೇಲೆ ಚಪ್ಪಲಿ ಎಸೆಯುವ ಪ್ರಕರಣ ನಡೆಸುತ್ತಿದ್ದಾರೆ. ಈ ರೀತಿಯ ಬೆಳವಣಿಗೆಯನ್ನು ಕಾಂಗ್ರೆಸ್ ಖಂಡಿಸುತ್ತದೆ ಎಂದವರು ಹೇಳಿದರು.
ಸದಾಶಿವ ಉಳ್ಳಾಲ್, ಟಿ.ಕೆ. ಸುಧೀರ್, ನೀರಜ್‌ಪಾಲ್, ಮುರಳೀದರ ರೈ, ಸುರೇಂದ್ರ ಕಾಂಬ್ಳಿ, ಲಾರೆನ್ಸ್ ಡಿಸೋಜಾ, ವಿಶ್ವಾಸ್ ಕುಮಾರ್ ದಾಸ್ ಉಪಸ್ಥಿತರಿದ್ದರು.
Appoint High court judge for clear investigation in sex CD scandal of Ramesh Jarkiholi stated Harish Kumar in Mangalore during the press meet held at congress office.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
11-10-26 03:20 pm
HK News Staffer
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
11-10-26 06:35 pm
HK News Staffer
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm