ಬ್ರೇಕಿಂಗ್ ನ್ಯೂಸ್
05-04-21 09:14 am Mangaluru correspondent ಕರಾವಳಿ
ಮಂಗಳೂರು, ಎ.5: ಮಹಾನಗರ ಪಾಲಿಕೆ ವ್ಯಾಪ್ತಿಯ ತ್ಯಾಜ್ಯ ವಿಲೇವಾರಿ ಘಟಕ ವಾಮಂಜೂರಿನ ಪಚ್ಚನಾಡಿಯಲ್ಲಿರುವ ಡಂಪಿಂಗ್ ಯಾರ್ಡಿಗೆ ಭಾನುವಾರ ರಾತ್ರೋರಾತ್ರಿ ಬೆಂಕಿ ಬಿದ್ದಿದ್ದು ಬೆಂಕಿಯ ಕೆನ್ನಾಲಿಗೆ ಪರಿಸರದಲ್ಲಿ ಭೀತಿ ಸೃಷ್ಟಿಸಿದೆ.
ತಾಜ್ಯ ಸಂಸ್ಕರಿಸುವ ಘಟಕದಲ್ಲಿ ಶೇಖರಿಸಿಟ್ಟ ಪ್ಲಾಸ್ಟಿಕ್ ಸರಕುಗಳಿಗೆ ಬೆಂಕಿ ಹತ್ತಿಕೊಂಡಿದ್ದು ಇದರ ಪರಿಣಾಮ ಅಗ್ನಿ ದುರಂತ ಸಂಭವಿಸಿದೆ. ಸ್ಥಳೀಯರು ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಆದರೆ, ಒಂದು ವಾಹನವಷ್ಟೇ ಸ್ಥಳಕ್ಕೆ ಬಂದಿದ್ದು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದೆ. ಆದರೆ, ಅಗ್ನಿಯ ಜ್ವಾಲೆ ಕಡಿಮೆಯಾಗುವ ಲಕ್ಷಣಗಳು ಕಂಡುಬರುತ್ತಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಘಟಕವನ್ನು ಮಂಗಳೂರು ಮಹಾನಗರ ಪಾಲಿಕೆಯಿಂದ ಮುಂಬೈ ಮೂಲದ ಆಂಟನಿ ವೇಸ್ಟ್ ಮ್ಯಾನೇಜ್ಮೆಂಟ್ ಕಂಪನಿಗೆ ಗುತ್ತಿಗೆ ನೀಡಿದ್ದು ಇಲ್ಲಿ ಅವೈಜ್ಞಾನಿಕ ರೀತಿಯಲ್ಲಿ ತಾಜ್ಯ ರಾಶಿ ಹಾಕಲಾಗಿತ್ತು. ಅದೇ ಕಾರಣದಿಂದ ಬೆಂಕಿ ಹತ್ತಿಕೊಂಡಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಘಟನಾ ಸ್ಥಳಕ್ಕೆ ಬಂದಿದ್ದ ಪಾಲಿಕೆಯ ಅಧಿಕಾರಿಗಳನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದಾರೆ.
video:
Mangalore Huge fire erupts at pachanady dumpyard unit. DC Rajendra and MCC mayor Premanad Shetty have rushed to the spot.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
11-10-26 10:28 pm
HK News Desk
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
11-10-26 06:35 pm
HK News Staffer
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm