ಬ್ರೇಕಿಂಗ್ ನ್ಯೂಸ್
06-04-21 08:13 pm Mangaluru correspondent ಕರಾವಳಿ
ಮಂಗಳೂರು, ಎ.6: ಲವ್ ಜಿಹಾದ್ ಹೆಸರಲ್ಲಿ ನೈತಿಕ ಪೋಲಿಸ್ ಗಿರಿ ನಡೆಸಲಾಗುತ್ತಿದೆ. ದಿನದಿಂದ ದಿನಕ್ಕೆ ಕ್ರೈಮ್ ಪ್ರಕರಣಗಳು ಮಂಗಳೂರಿನಲ್ಲಿ ಹೆಚ್ಚುತ್ತಿದೆ. ಹಿಂದು ಪರ ಸಂಘಟನೆಗಳು ಧೈರ್ಯವಿದ್ದರೆ ಲವ್ ಜಿಹಾದ್ ಕಾನೂನು ಜಾರಿಗಾಗಿ ಇವರ ಸರಕಾರದ ವಿರುದ್ಧವೇ ಪ್ರತಿಭಟನೆ ಮಾಡಲಿ ಎಂದು ಶಾಸಕ ಯು.ಟಿ. ಖಾದರ್ ಸವಾಲ್ ಹಾಕಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಖಾದರ್, ಲವ್ ಜಿಹಾದ್ ಬಗ್ಗೆ ಸುದ್ದಿಗೋಷ್ಟಿ ಕರೆದು ಪೊಲೀಸರಿಗೆ ಸವಾಲು ಹಾಕುತ್ತಾರೆ. ಲವ್ ಜಿಹಾದ್ ಕಾನೂನು ತರುತ್ತೇವೆಂದು ಪಂಚಾಯತ್ ಚುನಾವಣೆ ಸಂದರ್ಭದಲ್ಲಿ ಕಾರ್ಯಕಾರಿಣಿ ಮಾಡಿ ಹೇಳಿಕೊಂಡಿದ್ದ ಬಿಜೆಪಿ ಸರ್ಕಾರ ಆನಂತರ ಸುಮ್ಮನಾಗಿದ್ದು ಯಾಕೆ..? ಇವರಿಗೆ ಲವ್ ಜಿಹಾದ್ ವಿಚಾರದಲ್ಲಿ ಕಾನೂನು ತರಬಹುದಲ್ವಾ.. ಅದು ಬಿಟ್ಟು ಸಂಘಟನೆಗಳ ಹೆಸರಲ್ಲಿ ನೈತಿಕ ಪೊಲೀಸ್ ಕೆಲಸ ಮಾಡುತ್ತಿದ್ದಾರೆ. ಪೊಲೀಸರು ಸವಾಲು ಹಾಕುವ ಸಂಘಟನೆಗಳ ವಿರುದ್ಧ ಯಾಕೆ ಕ್ರಮ ಕೈಗೊಂಡಿಲ್ಲ. ಪೊಲೀಸರ ವೈಫಲ್ಯದ ಕಾರಣ ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಕುಸಿದು ಹೋಗಿದೆ. ಕಾರ್ಯಕರ್ತರು ಬೀದಿಯಲ್ಲಿ ಹೊಡೆದಾಡುವಂತಾಗಿದೆ ಎಂದು ಖಾದರ್ ಹೇಳಿದರು.

ಪಬ್ ಜೀ ಯಂತಹ ವೈಲಂಟ್ ಆಗಿರುವ ವಿಡಿಯೋ ಗೇಮ್ ಗಳು ಸಣ್ಣ ಮಕ್ಕಳ ಮೇಲೆ ಪ್ರಭಾವ ಬೀರುತ್ತಿದೆ. ಬ್ಯಾನ್ ಆದ ಆಟಗಳು ಹೇಗೆ ಮತ್ತೆ ಚಾಲ್ತಿಯಲ್ಲಿವೆ, ಗೊತ್ತಿಲ್ಲ. ಒಂದ್ಕಡೆ ಸರಕಾರ ಬ್ಯಾನ್ ಮಾಡಿದೆ ಅಂತಾರೆ, ಇಲ್ಲಿ ಮಕ್ಕಳು ಅದನ್ನೇ ಆಡುತ್ತಾರೆ. ಈ ಗೇಮ್ ನಿಂದಾಗಿ ವಿದ್ಯಾರ್ಥಿಗಳ ಮನಸ್ಥಿತಿ ವಿಕಾರವಾಗುತ್ತಿದೆ. ವಿದ್ಯಾರ್ಥಿಗಳು, ಯುವಕರು ಈ ವಿಡಿಯೋ ಗೇಮ್ ಆಟಕ್ಕೆ ಅಡಿಕ್ಟ್ ಆಗುತ್ತಿದ್ದಾರೆ. ಮಕ್ಕಳ ವ್ಯಕ್ತಿತ್ವ ವೈಲೆಂಟ್ ಆಗುತ್ತಿದೆ. ಆದ್ದರಿಂದ ಕೇಂದ್ರ ಮತ್ತು ರಾಜ್ಯ ಸರಕಾರಗಳು ತಕ್ಷಣವೇ ಪಬ್ ಜಿಯಂತಹ ಆನ್ಲೈನ್ ಗೇಮ್ ಗಳನ್ನು ನಿಷೇಧಿಸಬೇಕೆಂದು ಆಗ್ರಹಿಸಿದರು.
U T Khader slams Bajrang Dal for violence in the name of Love Jihad. The organisation should fight for law but not to take law in their hands slamed Khader in Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm