ಬ್ರೇಕಿಂಗ್ ನ್ಯೂಸ್
09-04-21 09:51 pm Mangaluru correspondent ಕರಾವಳಿ
ಮಂಗಳೂರು, ಎ.9 : ರಾಜ್ಯ ಸರಕಾರದ ಸೂಚನೆಯಂತೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಎ.10ರಿಂದ 20ರ ವರೆಗೆ ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆಯ ವರೆಗೆ ರಾತ್ರಿ ಕರ್ಫ್ಯೂ ವಿಧಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.
ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ಮತ್ತು ಅವರ ಸಹಾಯಕರಿಗೆ ವೈದ್ಯಕೀಯ ಸೇವೆಗಾಗಿ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲ ಕಾರ್ಖಾನೆಗಳು/ಕಂಪನಿಗಳು/ಸಂಸ್ಥೆಗಳು ಯಥಾರೀತಿಯಲ್ಲಿ ಕಾರ್ಯ ನಿರ್ವಹಿಸಲು ಅನುಮತಿ ನೀಡಲಾಗಿದೆ. ಆದರೆ ಸಂಬಂಧಿಸಿದ ಕಾರ್ಮಿಕರು ಕರ್ಪ್ಯೂ ಅವಧಿಗೆ ಮುನ್ನವೇ ಕರ್ತವ್ಯದಲ್ಲಿ ಹಾಜರಿರಬೇಕು.

ದೂರಸಂಪರ್ಕ ಮತ್ತು ಅಂತರ್ಜಾಲ ಸೇವಾ ಸಂಸ್ಥೆಗಳು ಹಾಗೂ ಮಾಹಿತಿ ತಂತ್ರಜ್ಞಾನ, ಮಾಹಿತಿ ತಂತ್ರಜ್ಞಾನ ಆಧಾರಿತ ಸಂಸ್ಥೆಗಳ ಸಿಬ್ಬಂದಿ ರಾತ್ರಿ ಪಾಳಿಯಲ್ಲಿ ಅಧಿಕೃತ ಗುರುತಿನ ಚೀಟಿ ಹೊಂದಿ ಸಂಚರಿಸಲು ಅನುಮತಿ ನೀಡಲಾಗಿದೆ.

ವೈದ್ಯಕೀಯ ಸೇವೆ ಮತ್ತು ತುರ್ತು ಚಟುವಟಿಕೆಗೆ ಮಾತ್ರ ಅನುಮತಿ ನೀಡಲಾಗಿದೆ. ಉಳಿದಂತೆ ಎಲ್ಲ ವಾಣಿಜ್ಯ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ. ಅತ್ಯವಶ್ಯಕ ಸೇವೆಗಳನ್ನು ಒದಗಿಸುವಂತಹ ವಾಹನಗಳು, ಸರಕು ಸಾಗಣಿಕೆ ವಾಹನಗಳು, ಹೋಮ್ ಡೆಲಿವರಿ, ಇ-ಕಾಮರ್ಸ್ ಮತ್ತು ಖಾಲಿ ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ.

ರಾತ್ರಿ ವೇಳೆಯಲ್ಲಿನ ಬಸ್, ರೈಲು ಹಾಗೂ ವಿಮಾನದ ದೂರ ಪ್ರಯಾಣಕ್ಕೆ ಅನುಮತಿ ನೀಡಲಾಗಿದ್ದು, ಪ್ರಯಾಣಿಕರು ಮನೆಯಿಂದ ನಿಲ್ದಾಣಗಳಿಗೆ ಮತ್ತು ನಿಲ್ದಾಣಗಳಿಂದ ಮನೆಗೆ ಅಧಿಕೃತ ಟಿಕೆಟ್‌ಗಳ ಆಧಾರದ ಮೇಲೆ ಆಟೋ/ ಕ್ಯಾಬ್ ಇತ್ಯಾದಿಗಳ ಮೂಲಕ ಸಂಚರಿಸಬಹುದು. ಆದೇಶ ಪಾಲಿಸದೇ ಇರುವವರ ವಿರುದ್ಧ ಕಾನೂನು ಅನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
The deputy commissioner of DK, Dr Rajendra has issued the corona night curfew guidelines on April 9. To curb the spread of Coronavirus, a night curfew will be imposed from April 10 to April 20 from 10 p.m. to 5 a.m. The state government has imposed a night curfew from April 10 to 20 in 8 cities in the state including Bengaluru, Mangaluru, Bidar, Udupi, Kalaburagi, Manipal, Mysuru, and Tumakuru.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm