ಬ್ರೇಕಿಂಗ್ ನ್ಯೂಸ್
20-04-21 10:53 am Mangalore Correspondent ಕರಾವಳಿ
ಕಡಬ, ಎ.20 : ಗುಂಡ್ಯ ಹೊಳೆಯಲ್ಲಿ ಸ್ನಾನಕ್ಕಿಳಿದು ಈಜಾಟಕ್ಕೆ ಹೋದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸೋಮವಾರ ಸಂಜೆ ಇಚಿಲಂಪಾಡಿಯಲ್ಲಿ ನಡೆದಿದೆ.
ಮೃತ ಯುವಕರನ್ನು ನೆಲ್ಯಾಡಿ ಶಾಂತಿಬೆಟ್ಟು ನಿವಾಸಿ ಉಮ್ಮರ್ ಎಂಬವರ ಪುತ್ರ ಝಾಕಿರ್(18) ಹಾಗೂ ಉಮ್ಮರ್ ಅವರ ಸಹೋದರಿಯ ಪುತ್ರ ಉಪ್ಪಿನಂಗಡಿ ಸಮೀಪದ ಸರಳೀಕಟ್ಟೆ ನಿವಾಸಿ ಸಿನಾನ್(19) ಎಂದು ಗುರುತಿಸಲಾಗಿದೆ.
ನೆಲ್ಯಾಡಿಯಲ್ಲಿ ತನ್ನ ಮಾವನ ಕೋಳಿ ಅಂಗಡಿಯಲ್ಲಿ ಕೆಲಸಕ್ಕಿದ್ದ ಸಿನಾನ್ ಹಾಗೂ ಕಾಲೇಜು ವ್ಯಾಸಂಗ ಮಾಡುತ್ತಿದ್ದ ಝಾಕಿರ್ ಜೊತೆಗೂಡಿ ಸೋಮವಾರ ಸಂಜೆ ಸ್ನಾನಕ್ಕೆಂದು ಇಚಿಲಂಪಾಡಿಯ ಗುಂಡ್ಯ ಹೊಳೆಗೆ ತೆರಳಿದ್ದರು. ಇಚಿಲಂಪಾಡಿ ಸೇತುವೆಯ ಸಮೀಪ ನದಿಗೆ ಇಳಿದಿದ್ದು, ನೀರಿನಲ್ಲಿ ಮುಳುಗಿದ್ದಾರೆ. ಸಂಜೆ ವೇಳೆಗೆ ನದಿ ತಟದಲ್ಲಿ ಮೊಬೈಲ್ ರಿಂಗಣಿಸುವುದನ್ನು ಕೇಳಿದ ಸ್ಥಳೀಯರು ಸ್ಥಳಕ್ಕಾಗಮಿಸಿದಾಗ ಬೈಕ್ ಹಾಗೂ ಕಳಚಿಟ್ಟ ವಸ್ತ್ರ ಕಂಡುಬಂದಿದ್ದು, ಈ ವೇಳೆ ಜೋಬಿನ್, ಮೋಹನ್, ನವಾಝ್, ರೋಯಿ ಹಾಗೂ ರಿಜು ಎಂಬವರು ನೀರಿಗಿಳಿದು ಹುಡುಕಾಟ ನಡೆಸಿದ್ದಾರೆ.
ಈ ವೇಳೆ ಇಬ್ಬರ ಮೃತದೇಹ ದೊರೆತಿದೆ. ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ರವಾನಿಸಲಾಗಿದೆ. ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kadaba Two youths drowned in the river after going to bath. Both were residents of Nelyadi. The deceased are identified as Zakir and Sinan.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm