ಬ್ರೇಕಿಂಗ್ ನ್ಯೂಸ್
04-05-21 11:19 am Mangalore Correspondent ಕರಾವಳಿ
ಮಂಗಳೂರು, ಮೇ 4 : ಹಿರಿಯ ಪತ್ರಕರ್ತ ಸುರೇಂದ್ರ ಶೆಟ್ಟಿ (57) ಅಲ್ಪಕಾಲದ ಅನಾರೋಗ್ಯದಿಂದ ಮಂಗಳವಾರ ಮುಂಜಾನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಬ್ರಹ್ಮಾವರದ ಆವರ್ಸೆ ಪಡುಮನೆ ಮೂಲದ ಸುರೇಂದ್ರ ಶೆಟ್ಟಿ ಮಂಗಳೂರು ವಿ.ವಿ.ಯ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಮುಂಗಾರು, ಸಂಯುಕ್ತ ಕರ್ನಾಟಕ, ಕನ್ನಡಪ್ರಭ, ವಿಜಯಕರ್ನಾಟಕ, ವಾರ್ತಾ ಭಾರತಿ ಮತ್ತಿತರ ಪತ್ರಿಕೆಗಳಲ್ಲಿ ಕೆಲಸ ಮಾಡಿದ್ದಾರೆ. ಕೆಲ ಕಾಲ ಕನ್ನಡಪ್ರಭ ಪತ್ರಿಕೆಯ ಮಂಗಳೂರು ಆವೃತ್ತಿ ಮುಖ್ಯಸ್ಥರಾಗಿಯೂ ಕೆಲಸ ಮಾಡಿದ್ದರು.

ಮಂಗಳೂರು ವಿ.ವಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ಹಳೆ ವಿದ್ಯಾರ್ಥಿಗಳ ಸಂಘ MAAM ಸ್ಥಾಪಕ ಗೌರವಾಧ್ಯಕ್ಷರಾಗಿದ್ದರು. ವಿಭಾಗದ ಬೆಳ್ಳಿಹಬ್ಬ ಸಮಿತಿಯ ಅಧ್ಯಕ್ಷರಾಗಿದ್ದರು. MAAM ಸಂಘಟನೆ ಮಂಗಳೂರಿನ ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ ಅವರಿಗೆ ಏರ್ಪಡಿಸಿದ ಮನೋಭಿನಂದನ ಸಮಾರಂಭದಲ್ಲಿ ಹೊರತಂದ ಮನೋಭಿನಂದನ ಅಭಿನಂದನಾ ಗ್ರಂಥದ ಸಂಪಾದಕರಾಗಿದ್ದರು. ಕಳೆದ ಎರಡು ವರ್ಷಗಳಿಂದ ಮಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ದುಡಿಯುತ್ತಿದ್ದರು. ಅವರು ಪತ್ನಿ, ಪುತ್ರಿ, ಕುಟುಂಬಸ್ಥರನ್ನು ಅಗಲಿದ್ದಾರೆ.
ಸುರೇಂದ್ರ ಶೆಟ್ಟಿ ನಿಧನಕ್ಕೆ ಮೀಡಿಯಾ ಅಲ್ಯುಮ್ನಿ ಅಸೋಸಿಯೇಷನ್ ಆಫ್ ಮಂಗಳಗಂಗೋತ್ರಿ (MAAM) ಇದರ ಗೌರವಾಧ್ಯಕ್ಷ ವೇಣು ಶರ್ಮ ಸಹಿತ ಎಲ್ಲ ಪದಾಧಿಕಾರಿಗಳು ತೀವ್ರ ಸಂತಾಪ ಸೂಚಿಸಿದ್ದಾರೆ. ಸಂಘಟನೆಯ ಆರಂಭದ ದಿನಗಳಿಂದಲೂ ಅವರ ಸಹಭಾಗಿತ್ವ ಮತ್ತು ಮಾರ್ಗದರ್ಶನವನ್ನು ವೇಣು ಶರ್ಮ ಸ್ಮರಿಸಿದ್ದಾರೆ.
Mangalore Senior Journalist Surendra Shetty passes away at 57. He was suffering from health issues and was admitted in the hospital.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
11-10-26 10:28 pm
HK News Desk
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
11-10-26 06:35 pm
HK News Staffer
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm