ಬ್ರೇಕಿಂಗ್ ನ್ಯೂಸ್
06-05-21 05:23 pm Mangalore Correspondent ಕರಾವಳಿ
ಮಂಗಳೂರು, ಮೇ 6 : ಬಹ್ರೇನ್‌ನಿಂದ ಮಂಗಳೂರಿಗೆ ತರಿಸಿದ 40 ಮೆಟ್ರಿಕ್ ಟನ್ ಆಕ್ಸಿಜನ್ ಸಂಪೂರ್ಣ ಕ್ರೆಡಿಟ್ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಸಲ್ಲಬೇಕೆಂಬ ಸ್ಥಳೀಯ ಬಿಜೆಪಿ ನಾಯಕರ ವಾದಕ್ಕೆ ಮಾಜಿ ಸಚಿವ ಯು.ಟಿ. ಖಾದರ್ ವ್ಯಂಗ್ಯವಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿ ಕುಹಕವಾಡಿರುವ ಯು.ಟಿ ಖಾದರ್, ನಮ್ಮ ರಾಜ್ಯದಲ್ಲಿ ಉತ್ಪಾದನೆಯಾಗುವ ಆಕ್ಸಿಜನ್ ಬಳಸಲು ನಮಗೆ ಅವಕಾಶವಿಲ್ಲ. ದೂರದ ಬಹ್ರೇನ್‌ನಿಂದ ಕಳಿಸಿಕೊಟ್ಟ ಆಕ್ಸಿಜನ್ ಹಡಗೇರಿ ಖುಷಿಪಡುವ ಬಿಜೆಪಿ ನಾಯಕರ ಆತ್ಮನಿರ್ಭರಕ್ಕೆ ಚಪ್ಪಾಳೆ ಹೊಡೆಯಬೇಕೋ, ದೀಪ ಹಚ್ಚಬೇಕೋ ತಿಳಿಯುತ್ತಿಲ್ಲ. ಧಿಕ್ಕಾರವಿದೆ ನಿಮ್ಮ ಆಡಳಿತ ವೈಫಲ್ಯಕ್ಕೆ ಅಂತಾ ಆಕ್ಸಿಜನ್ ಟ್ಯಾಂಕ್ ಎದುರು ನಿಂತ ಬಿಜೆಪಿ ನಾಯಕರ ಫೋಟೋ ಹಾಕಿ ವ್ಯಂಗ್ಯವಾಡಿದ್ದಾರೆ.

ನಿನ್ನೆ ಬಹ್ರೇನ್ ಮತ್ತು ಭಾರತ ಸರ್ಕಾರದ ನಡುವಿನ ಸಹಕಾರ ಒಪ್ಪಂದದಂತೆ 30 ಮೆಟ್ರಿಕ್ ಟನ್‌ನ ಎರಡು ಲಿಕ್ವಿಡ್ ಆಕ್ಸಿಜನ್ ಟ್ಯಾಂಕರ್‌ಗಳು ನವಮಂಗಳೂರು ಬಂದರಿಗೆ ಬಂದಿತ್ತು. ಭಾರತೀಯ ಕರಾವಳಿ ತಟರಕ್ಷಣಾ ಪಡೆಯ ಐಎನ್ಎಸ್ ತಲ್ವಾರ್ ಆಕ್ಸಿಜನ್ ಟ್ಯಾಂಕರ್ ಗಳನ್ನು ಬಹ್ರೇನ್‌ನಿಂದ ಹೊತ್ತು ತಂದಿದ್ದು, ಕ್ರೇನ್ ಮೂಲಕ ಟ್ಯಾಂಕರ್ ಗಳನ್ನು ಬಂದರಿನಲ್ಲಿ ಕೆಳಗಿಳಿಸಲಾಗಿತ್ತು.
ನೌಕೆಯಲ್ಲಿ ಕೊವೀಡ್ ಚಿಕಿತ್ಸೆಗೆ ಬಳಸುವ ಇತರ ವೈದ್ಯಕೀಯ ಉಪಕರಣಗಳನ್ನೂ ಕಳಿಸಿಕೊಡಲಾಗಿದ್ದು, ಯುದ್ಧ ನೌಕೆಯನ್ನು ಸ್ವಾಗತ ಮಾಡಲು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ವೇದವ್ಯಾಸ ಕಾಮತ್ ಸೇರಿದಂತೆ ಅಧಿಕಾರಿಗಳು ಜನಪ್ರತಿನಿಧಿಗಳು ಭಾಗವಹಿಸಿದ್ದರು.
Read: ಬಹರೈನ್ ಸಹಾಯ ಹಸ್ತ ; ಮಂಗಳೂರಿಗೆ ಬಂತು 40 ಮೆಟ್ರಿಕ್ ಟನ್ ಆಕ್ಸಿಜನ್ !!
ನಮ್ಮ ರಾಜ್ಯದಲ್ಲಿ ಉತ್ಪಾದನೆಯಾಗುವ ಆಕ್ಸಿಜನ್ ಬಳಸಲು ನಮಗೆ ಅವಕಾಶವಿಲ್ಲ. ದೂರದ ಬಹರೈನ್ ನಿಂದ ಬಂದ ಆಕ್ಸಿಜನ್ ಹಡಗೇರಿ ಖುಷಿಪಡುವ ಬಿಜೆಪಿ ನಾಯಕರ ಆತ್ಮನಿರ್ಭರತೆಗೆ ಚಪ್ಪಾಳೆ ಹೊಡೆಯ ಬೇಕೋ ದೀಪ ಹಚ್ಚ ಬೇಕೋ ತಿಳಿಯುತ್ತಿಲ್ಲ.
— UT Khadér (@utkhader) May 6, 2021
ಧಿಕ್ಕಾರವಿದೆ ನಿಮ್ಮ ಅಸಮರ್ಥತೆಗೆ.@BJP4Karnataka @nalinkateel @KotasBJP @vedavyasbjp pic.twitter.com/A2cwEbyWxI
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm