ಬ್ರೇಕಿಂಗ್ ನ್ಯೂಸ್
18-05-21 05:17 pm Udupi Correspondent ಕರಾವಳಿ
ಬೈಂದೂರು, ಮೇ 18 : ವಿದ್ಯುತ್ ಕಂಬದ ದುರಸ್ತಿ ವೇಳೆ ರಸ್ತೆಗೆ ಅಡಲಾಗಿ ಜೋತು ಬಿದ್ದ ವಿದ್ಯುತ್ ತಂತಿ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ರಸ್ತೆಗೆ ಬಿದ್ದು ಮೃತಪಟ್ಟ ಘಟನೆ ಹೇರೂರು ಬಳಿ ನಡೆದಿದೆ.
ಮೃತರನ್ನು ಹೇರೂರು ಗ್ರಾಮದ ಯರುಕೋಣೆ ನಿವಾಸಿ ಶೇಖರ ಶೆಟ್ಟಿ ಎಂದು ಗುರುತಿಸಲಾಗಿದೆ. ಮೇ 15ರಂದು ರಾತ್ರಿ ಗಾಳಿ ಮಳೆಯಿಂದಾಗಿ ರಸ್ತೆ ಬದಿಯ ವಿದ್ಯುತ್ ತಂತಿ ಮೇಲೆ ಮರ ಬಿದ್ದು ವಿದ್ಯುತ್ ಕಂಬಗಳು ತುಂಡಾಗಿದ್ದವು. ಮೇ 17ರಂದು ಮೆಸ್ಕಾಂ ಇಲಾಖೆಯಿಂದ ವಿದ್ಯುತ್ ತಂತಿ ಅಳವಡಿಸುವ ಕಾರ್ಯ ನಡೆಯುತ್ತಿತ್ತು.
ಆದರೆ ಗುತ್ತಿಗೆದಾರರು ಸ್ಥಳದಲ್ಲಿ ಮುಂಜಾಗ್ರತಾ ಕ್ರಮವಾಗಿ ಯಾವುದೇ ಸೂಚನಾ ಫಲಕ, ಸಿಬ್ಬಂದಿಯನ್ನು ನೇಮಿಸದೆ ದುರಸ್ತಿ ಕಾರ್ಯ ಮಾಡುತ್ತಿದ್ದರು ಎನ್ನಲಾಗಿದ್ದು, ಕಂಬಕ್ಕೆ ವಿದ್ಯುತ್ ತಂತಿ ಜೋಡಿಸುತ್ತಿದ್ದ ಸಂದರ್ಭ ತಂತಿಯೊಂದು ತುಂಡಾಗಿ ರಸ್ತೆಗೆ ಅಡ್ಡಲಾಗಿ ಜೋತು ಬಿದ್ದಿತ್ತು. ಇದೇ ವೇಳೆ ರಸ್ತೆಯಲ್ಲಿ ಬೈಕಿನಲ್ಲಿ ಹೋಗುತ್ತಿದ್ದ ಶೇಖರ ಶೆಟ್ಟಿ ತಂತಿಯನ್ನು ಗಮನಿಸದೆ ತೆರಳಿದ್ದು ತಂತಿ ಅವರ ಕುತ್ತಿಗೆ ಭಾಗಕ್ಕೆ ಸಿಲುಕಿತ್ತು. ಇದರಿಂದ ಅವರು ರಸ್ತೆಗೆ ಬಿದ್ದು ಕುತ್ತಿಗೆ ಮುರಿದಿದ್ದು ಗಂಭೀರ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Motorcyclist dies after getting tangled in wire in byndoor. The deceased has been identified as Shekar Shetty.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
11-10-26 10:28 pm
HK News Desk
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
11-10-26 06:35 pm
HK News Staffer
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm