ಬ್ರೇಕಿಂಗ್ ನ್ಯೂಸ್
18-05-21 09:34 pm Mangaluru Correspondent ಕರಾವಳಿ
ಮಂಗಳೂರು, ಮೇ 18: ರಾಜ್ಯ ಪೌರ ಘನ ತ್ಯಾಜ್ಯ ನಿಯಮ, ಮಂಗಳೂರು ಮಹಾನಗರಪಾಲಿಕೆ ತ್ಯಾಜ್ಯ ನಿರ್ವಹಣೆ ಉಪವಿಧಿಯಂತೆ ಹಾಗೂ ರಾಜ್ಯ ಉಚ್ಛ ನಾಯ್ಯಾಲಯದ ನಿರ್ದೇಶನದಂತೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಮನೆಗಳು ಹಾಗೂ ವಸತಿ ಸಮುಚ್ಚಯಗಳಿಂದ ಉತ್ಪತ್ತಿಯಾಗುವ ತ್ಯಾಜ್ಯಗಳನ್ನು ಮೂಲದಲ್ಲಿಯೇ ಹಸಿ ಕಸ, ಒಣ ಕಸವನ್ನಾಗಿಸಿ ವಿಂಗಡಿಸಿ ನೀಡುವುದನ್ನು ಕಡ್ಡಾಯ ಮಾಡಲಾಗಿದೆ.
ಪ್ರಸುತ್ತ ಪಾಲಿಕೆ ವ್ಯಾಪ್ತಿ ಒಳಗೆ ಕೋವಿಡ್-19 ಪಾಸಿಟಿವ್ ಪ್ರಕರಣಗಳು ಏರಿಕೆಯಾಗುತ್ತಿದ್ದು ಮೂಲದಲ್ಲಿಯೇ ಕಸ ವಿಂಗಡಿಸದೆ ನೀಡದಿದ್ದಲ್ಲಿ ಘನ ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ಕಸ ವಿಗಂಡಿಸುವ ಕರ್ತವ್ಯ ನಿರ್ವಹಿಸುತ್ತಿರುವ ನೈರ್ಮಲ್ಯ ಕಾರ್ಮಿಕರು ಅಪಾಯಕ್ಕೆ ಒಳಗಾಗುವ ಸಾಧ್ಯತೆ ಹೆಚ್ಚಿರುತ್ತದೆ. ಈ ಹಿನ್ನೆಲೆಯಲ್ಲಿ ಈಗಾಗ್ಲೇ ಕಸವನ್ನು ಬೇರ್ಪಡಿಸಿ ನೀಡುವಂತೆ ಪಾಲಿಕೆ ವತಿಯಿಂದ ಹಲವು ಬಾರಿ ಎಚ್ಚರಿಕೆ ನೀಡಲಾಗಿರುತ್ತದೆ.

ಮಂಗಳೂರು ಮಹಾನಗರ ಪಾಲಿಕೆಯು ಇನ್ನು ಮುಂದೆ ಬೇರ್ಪಡಿಸದೆ ನೀಡುವ ಕಸವನ್ನು ಸಂಗ್ರಹಿಸದೆ ತಿರಸ್ಕರಿಸಲು ತೀರ್ಮಾನಿಸಿದ್ದು, ಈ ಹಿನ್ನೆಲೆಯಲ್ಲಿ ಪ್ರತಿ ಶುಕ್ರವಾರ ಒಣ ಕಸವನ್ನು ಹಾಗೂ ಶುಕ್ರವಾರ ಹೊರತುಪಡಿಸಿ ವಾರದ ಎಲ್ಲ ದಿನಗಳಲ್ಲಿ ಹಸಿ ಕಸವನ್ನು ಪಾಲಿಕೆಯ ತ್ಯಾಜ್ಯ ಸಂಗ್ರಹಣ ವಾಹನಕ್ಕೆ ನೀಡಿ ಸ್ವಚ್ಛ ಮಂಗಳೂರು ನಿರ್ಮಾಣಕ್ಕೆ ಸಾರ್ವಜನಿಕರು ಸಹಕಾರಿಸಬೇಕು.
ಈ ಸೂಚನೆಯನ್ನು ಉಲ್ಲಂಘಿಸುವುವವರ ವಿರುದ್ಧ ಕೆ.ಎಂ.ಸಿ ನಿಯಮ 1976 ಹಾಗೂ ಮಂಗಳೂರು ಮಹಾನಗರ ಪಾಲಿಕೆ ತ್ಯಾಜ್ಯ ನಿರ್ವಹಣೆ ಉಪವಿಧಿಯಂತೆ ಭಾರಿ ದಂಡವನ್ನು ವಿಧಿಸಲಾಗುತ್ತದೆ. ಸಾರ್ವಜನಿಕರು ರಸ್ತೆ ಬದಿಗಳಲ್ಲಿ ಕಸ ಎಸೆಯುವುದು ಅಥವಾ ಹಾಕುವುದು ಕಂಡುಬಂದಲ್ಲಿ 10,000 ರೂ. ದಂಡವನ್ನು ವಿಧಿಸಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು.
ತಮ್ಮಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಸಂಸ್ಕರಿಸಲು ಕಾಂಪೋಸ್ಟಿಂಗ್ ಘಟಕವನ್ನು ಅಳವಡಿಸಿಕೊಂಡಲ್ಲಿ ಪ್ರಸಕ್ತ ಸಾಲಿನ ಆಸ್ತಿ ತೆರಿಗೆಯ ಘನ ತ್ಯಾಜ್ಯ ಕರದಲ್ಲಿ ಶೇ.50ರಷ್ಟು ವಿನಾಯಿತಿ ನೀಡುವ ಮೂಲಕ ಪ್ರೋತ್ಸಾಹಿಸಲಾಗುವುದು ಎಂದು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
MCC ( Mangalore City Corporation) has ordered that anyone who refuses to segregate waste, will be penalised with a Criminal case or a 10 thousand fine will be imposed in Mangalore.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
11-10-26 10:28 pm
HK News Desk
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
11-10-26 06:35 pm
HK News Staffer
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm