ಬ್ರೇಕಿಂಗ್ ನ್ಯೂಸ್
18-05-21 09:42 pm Mangaluru Correspondent ಕರಾವಳಿ
ಮಂಗಳೂರು, ಮೇ 18: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಈ ಭಾಗದ ಜನ ಊಟಕ್ಕೆ ಬಳಸುವ ಕೆಂಪು ಕುಚಲಕ್ಕಿಯನ್ನು ಪಡಿತರ ಅಂಗಡಿಗಳಲ್ಲಿ ಪೂರೈಸಲು ಕ್ರಮ ವಹಿಸಲಾಗುವುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ಪದ್ಧತಿಯಡಿ ಕೆಂಪು ಕುಚಲಕ್ಕಿ ವಿತರಿಸುವ ಬಗ್ಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಕೆಂಪು ಕುಚ್ಚಲಕ್ಕಿಯನ್ನು ಸ್ಥಳೀಯ ಗಿರಣಿಗಳ ಮೂಲಕ ಸಂಸ್ಕರಿಸಿ ಪಡಿತರ ಅಂಗಡಿಗಳ ಮೂಲಕ ಗುಣಮಟ್ಟದ ಅಕ್ಕಿ ವಿತರಿಸಲು ಸರ್ಕಾರ ಅಗತ್ಯ ಯೋಜನೆ ರೂಪಿಸುತ್ತಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗೆ ಪ್ರತಿ ತಿಂಗಳು 1 ಲಕ್ಷ ಕ್ವಿಂಟಲ್ ಕೆಂಪು ಕುಚಲಕ್ಕಿ ಅಗತ್ಯವಿದ್ದು, ಅವುಗಳ ಉತ್ಪಾದನೆಗೆ 16ರಿಂದ 18 ಲಕ್ಷ ಕ್ವಿಂಟಾಲ್ ಭತ್ತದ ಅವಶ್ಯಕತೆ ಇದೆ ಎಂದರು. ಇದಕ್ಕಾಗಿ ಬೆಳಗಾವಿ, ಚಾಮರಾಜನಗರ, ಮಂಡ್ಯ, ಶಿವಮೊಗ್ಗ, ಮೈಸೂರು ಜಿಲ್ಲೆಗಳಿಂದ ಗುಣಮಟ್ಟದ ಭತ್ತ ಖರೀದಿಸಲಾಗುವುದು ಎಂದರು.
ಸಭೆಯಲ್ಲಿ ರಾಜ್ಯ ಆಹಾರ ನಿಗಮದ ಉಪಾಧ್ಯಕ್ಷ ಕಿರಣ್ ಕೊಡಗಿ ಕರಾವಳಿ ಜಿಲ್ಲೆಗೆ ಕೆಂಪು ಕುಚಲಕ್ಕಿ ಗೆ ಭತ್ತದ ತಳಿಗೆ ಸಬ್ಸಿಡಿ ನೀಡಲು ಕೇಂದ್ರ ಸರಕಾರದ ಅನುಮೋದನೆಗೆ ರಾಜ್ಯ ಆಹಾರ ನಿಗಮ ಪ್ರಯತ್ನ ಮಾಡಲಿದೆ ಎಂದರು.
ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆವಿ ಮಾತನಾಡಿ, ರೈತರು ಬೆಳೆದ ಕೆಂಪು ಭತ್ತಕ್ಕೆ ಕನಿಷ್ಟ ಬೆಂಬಲ ಬೆಲೆಯಡಿ ಖರೀದಿಸಲು ಅವಕಾಶ ಇರಲಿಲ್ಲ. ಪ್ರಸ್ತುತ ಭಾರತದ ಆಹಾರ ನಿಗಮದಲ್ಲಿ ಕೆಂಪು ಭತ್ತಕ್ಕೆ ಕನಿಷ್ಟ ಬೆಲೆ ನೀಡಲು ಅನುಮತಿ ದೊರಕಿದೆ ಎಂದರು.
ಶಾಸಕರಾದ ವೇದವ್ಯಾಸ್ ಕಾಮತ್, ಡಾ. ಭರತ್ ವೈ ಶೆಟ್ಟಿ, ಉಮಾನಾಥ್ ಕೋಟ್ಯಾನ್, ರಾಜೇಶ್ ನಾಯಕ್, ಪ್ರತಾಪ್ ಸಿಂಹ ನಾಯಕ್, ಅಪರ ಜಿಲ್ಲಾಧಿಕಾರಿ ಪ್ರಜ್ಞಾ, ಆಹಾರ ಮತ್ತು ನಾಗರಿಕ ಸರಬರಾಜು ಉಪ ನಿರ್ದೇಶಕಿ ಪಿ.ಆರ್ ರಮ್ಯ, ವಿವಿಧ ಅಕ್ಕಿ ಗಿರಣಿಗಳ ಮಾಲೀಕರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
District in-charge minister Kota Srinivas Poojary on Tuesday May 18 said that the district administration is likely to provide boiled rice (red) under the Public Distribution System (PDC) in Dakshina Kannada. But, it may require 2 to 3 months’ time to complete the process.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
11-10-26 10:28 pm
HK News Desk
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
11-10-26 06:35 pm
HK News Staffer
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm