ಬ್ರೇಕಿಂಗ್ ನ್ಯೂಸ್
27-05-21 06:45 pm Mangalore Correspondent ಕರಾವಳಿ
ಮಂಗಳೂರು, ಮೇ 27: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಪಡಿತರದ ಮೂಲಕ ಸ್ಥಳೀಯ ಕೆಂಪು ಕುಚ್ಚಲಕ್ಕಿ ವಿತರಿಸಬೇಕೆಂಬ ಬೇಡಿಕೆಯ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಆಹಾರ ನಾಗರಿಕ ಸರಬರಾಜು ಇಲಾಖೆ ಸಚಿವ ಉಮೇಶ್ ಕತ್ತಿ ಮತ್ತು ಅಧಿಕಾರಿಗಳ ಜೊತೆ ವಿಧಾನಸೌಧ ಸಭಾಂಗಣದಲ್ಲಿ ಮಹತ್ವದ ಸಭೆ ನಡೆಸಿದ್ದಾರೆ.
ಅವಳಿ ಜಿಲ್ಲೆಗಳ ಒಟ್ಟು ಕೆಂಪು ಕುಚ್ಚಲಕ್ಕಿಯ ಬೇಡಿಕೆ, ಸುಮಾರು ವಾರ್ಷಿಕ 12 ಲಕ್ಷ ಕ್ವಿಂಟಾಲ್ ಆಗಿದ್ದು, ಕೆಂಪು ಕುಚ್ಚಲಕ್ಕಿ ಪೂರೈಸಲು ರಾಜ್ಯದ ಭತ್ತದ ತಳಿಗಳಾದ MO 4, ಜಯ, ಅಭಿಲಾಷ, ಭದ್ರಾ ಕಜೆ, ಜ್ಯೋತಿ ಮುಂತಾದ ತಳಿಗಳನ್ನು ಖರೀದಿಸಲು ಸುದೀರ್ಘ ಚರ್ಚೆ ನಡೆಸಲಾಗಿದ್ದು ಕೇಂದ್ರದ ಅನುಮತಿ ಪಡೆಯಲು ಅಗತ್ಯ ಪ್ರಸ್ತಾವನೆ ಸಲ್ಲಿಸಲು ನಿರ್ಣಯ ಕೈಗೊಂಡಿತು.

ಅವಳಿ ಜಿಲ್ಲೆಗಳ ಕೆಂಪು ಕುಚ್ಚಲಕ್ಕಿ ಬೇಡಿಕೆಯನ್ನು ಪೂರೈಸಲು ಸುಮಾರು 20 ಲಕ್ಷ ಕ್ವಿಂಟಾಲ್ ಭತ್ತದ ಪೂರೈಕೆ ಆಗಬೇಕಾಗಿದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಹೊರತಾಗಿಯೂ ಮಂಡ್ಯ, ಮೈಸೂರು, ರಾಮನಗರ, ಬೆಳಗಾವಿ ಜಿಲ್ಲೆಗಳಿಂದ ಭತ್ತ ಖರೀದಿಸಲು ಸಭೆಯಲ್ಲಿ ಚರ್ಚೆ ನಡೆಯಿತು.
ಕೇಂದ್ರದ ಅನುಮತಿ ಪಡೆದು ನವೆಂಬರ್ ತಿಂಗಳಿಂದ ಸ್ಥಳೀಯ ಅಕ್ಕಿ ಗಿರಣಿಗಳ ಮೂಲಕ ಕೆಂಪು ಕುಚ್ಚಲಕ್ಕಿ ಉತ್ಪಾದಿಸಿ ಪಡಿತರದ ಮೂಲಕ ಜನಸಾಮಾನ್ಯರಿಗೆ ವಿತರಣೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉತ್ಪಾದನೆಯಾದ ಭತ್ತದ ಪ್ರಮಾಣ ಕಡಿಮೆಯಾದಲ್ಲಿ, ಇತರ ಜಿಲ್ಲೆಗಳಿಂದ ಭತ್ತವನ್ನು ಖರೀದಿಸಲಾಗುವುದು ಎಂದು ಕರ್ನಾಟಕ ಆಹಾರ ಮತ್ತು ನಾಗರೀಕ ಪೂರೈಕೆ ಸರಬರಾಜು ನಿಗಮ ನಿಯಮಿತದ ಉಪಾಧ್ಯಕ್ಷ ಕಿರಣ್ ಕುಮಾರ್ ಕೊಡ್ಗಿ ತಿಳಿಸಿದರು.
ಸಭೆಯಲ್ಲಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ಸಚಿವರ ಆಪ್ತ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.
Minister of Food, Civil Supplies and Consumer Affairs Department of Karnataka Umesh Katti, District in-charge minister Kota Srinivas Poojary on Thursday, May 27 said that the district administration is likely to provide boiled rice (red) under the Public Distribution System (PDC) in Dakshina Kannada from November.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
11-10-26 10:28 pm
HK News Desk
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
11-10-26 06:35 pm
HK News Staffer
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm