ಬ್ರೇಕಿಂಗ್ ನ್ಯೂಸ್
04-06-21 06:19 pm Mangalore Correspondent ಕರಾವಳಿ
ಉಳ್ಳಾಲ, ಜೂ.4: ಕೋಟೆಕಾರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ನೀಡಲ್ಪಟ್ಟ ಉಚಿತ ಕೋವಿಡ್ ಲಸಿಕೆಗಳನ್ನು ಗ್ರಾಮ ಪಂಚಾಯತ್ ಸದಸ್ಯರ ಸುಪರ್ದಿಗೆ ವಹಿಸಿ ಎಡವಟ್ಟು ಮಾಡಿರುವ ಘಟನೆ ನಡೆದಿದ್ದು ಇದರಿಂದ ಲಸಿಕೆ ವಿತರಣೆಯಲ್ಲಿ ಸ್ವಜನ ಪಕ್ಷಪಾತ ಮಾಡಿದ್ದಾರೆಂಬ ಆರೋಪ ಕೇಳಿಬಂದಿದೆ.
ಕೋಟೆಕಾರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಇಂದು 150 ಲಸಿಕೆ ಪೂರೈಕೆಯಾಗಿದ್ದು ಅದನ್ನ ಅಧಿಕಾರಿಗಳು ಸ್ಥಳೀಯ ನಾಲ್ಕು ಪಂಚಾಯತ್ ಗಳಿಗೆ ಹಂಚಿಕೆ ಮಾಡಿದ್ದಾರೆ. ತಲಪಾಡಿ, ಕೋಟೆಕಾರು ಪಟ್ಟಣ ಪಂಚಾಯತ್, ಸೋಮೇಶ್ವರ ಪುರಸಭೆಗೆ ತಲಾ 40 ಲಸಿಕೆಗಳನ್ನ ಹಂಚಿದ್ದು, ಕಿನ್ಯಾ ಗ್ರಾಮ ಪಂಚಾಯತ್ ಗೆ 30 ಲಸಿಕೆಗಳನ್ನು ನೀಡಲಾಗಿತ್ತು. ಆದರೆ, ಸ್ಥಳೀಯ ಪಂಚಾಯತ್ ಗಳಲ್ಲಿ ಗ್ರಾಮ ಪಂಚಾಯತಿ ಸದಸ್ಯರ ಕುಟುಂಬಸ್ಥರೇ ಲಸಿಕೆ ಪಡೆದಿದ್ದಾರೆಂಬ ಆರೋಪ ಕೇಳಿಬಂದಿದೆ.


ಕೋಟೆಕಾರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಗೋಪಿ ಪ್ರಕಾಶ್ ಹೇಳುವ ಪ್ರಕಾರ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ನೀಡುವುದರಿಂದ ಈಗಾಗಲೇ ಸಮಸ್ಯೆ ಉಂಟಾಗಿದ್ದು, ಮಂಗಳೂರು ಸಹಾಯಕ ಆಯುಕ್ತರು ಮತ್ತು ತಹಶೀಲ್ದಾರ್ ಸೂಚನೆಯಂತೆ ಸ್ಥಳೀಯಾಡಳಿತಗಳಿಗೆ ಲಸಿಕೆಗಳನ್ನ ಹಂಚಲಾಗಿದೆ ಎಂದು ಹೇಳಿದ್ದಾರೆ. ಆದರೆ, ಆಯಾ ಭಾಗದಲ್ಲಿ ಆಶಾ ಕಾರ್ಯಕರ್ತೆಯರು ಅರ್ಹ ಫಲಾನುಭವಿಗಳನ್ನ ಗುರುತಿಸಬೇಕೆಂದು ಆದೇಶ ನೀಡಲಾಗಿದೆ.
ಆದರೆ ಆಶಾ ಕಾರ್ಯಕರ್ತೆಯರು ತಮ್ಮ ಕೆಲಸವನ್ನು ಗ್ರಾಮ ಪಂಚಾಯತ್ ಸದಸ್ಯರ ಕೈಗೆ ಒಪ್ಪಿಸಿದ್ದು ಅವರು ತಮಗೆ ಬೇಕಾದವರಿಗೆ ಟೋಕನ್ ಗಳನ್ನು ನೀಡಿದ್ದಾರೆ. ತಲಪಾಡಿ ಗ್ರಾಮ ಪಂಚಾಯತ್ ನಲ್ಲಿ 40 ಲಸಿಕೆಗಳನ್ನು ನೀಡಲಾಗಿದ್ದು , ಟೋಕನ್ ಗಳನ್ನು ಪಿಡಿಓ ಕೇಶವ ಪೂಜಾರಿ ಅವರು 24 ಗ್ರಾಮ ಸದಸ್ಯರ ಕೈಗೆ ನೀಡಿರುವುದಾಗಿ ತಿಳಿದು ಬಂದಿದೆ. ಪಂಚಾಯತ್ ಸದಸ್ಯರು ಲಸಿಕೆಗಳ ಟೋಕನ್ ಗಳನ್ನು ತಮ್ಮ ಸಂಬಂಧಿ, ಹಿತೈಷಿಗಳಿಗೆ ನೀಡಿ ಸ್ವಜನ ಪಕ್ಷಪಾತ ಮಾಡಿದ್ದಾರೆಂಬ ಆರೋಪ ಕೇಳಿಬಂದಿದೆ.


ಇಂದು ಸ್ಥಳೀಯ ಪಂಚಾಯತ್ ನಲ್ಲಿ ಲಸಿಕಾ ಅಭಿಯಾನ ಇತ್ತು ಎಂಬುದು ನಮ್ಮ ಗಮನಕ್ಕೇ ಬಂದಿಲ್ಲ. ಪಂಚಾಯತ್ ಸದಸ್ಯರು ನಮ್ಮ ಗಮನಕ್ಕೂ ತಂದಿಲ್ಲ ಎಂದು ತಲಪಾಡಿ ನಿವಾಸಿ, ಸಾಮಾಜಿಕ ಕಾರ್ಯಕರ್ತ ಯಶು ಪಕ್ಕಳ ಹೇಳಿದ್ದು ಆರೋಪಕ್ಕೆ ಪುಷ್ಟಿ ನೀಡಿದೆ.
ತಲಪಾಡಿ ಪಂಚಾಯತ್ ಪಿಡಿಓ ಬಳಿ ಈ ಬಗ್ಗೆ ಕೇಳಿದರೆ, 40 ಲಸಿಕೆಗಳು ಪಂಚಾಯತಿಗೆ ಬಂದಿದ್ದು ಫಲಾನುಭವಿಗಳ ಆಯ್ಕೆಯನ್ನು ಗ್ರಾಮ ಪಂಚಾಯತ್ ಸದಸ್ಯರಿಗೆ ಬಿಟ್ಟು ಕೊಟ್ಟಿರುವುದಾಗಿ ಹೇಳಿದ್ದಾರೆ. ಒಟ್ಟಿನಲ್ಲಿ ಗ್ರಾಮ ಮಟ್ಟದಲ್ಲಿ ಸದಸ್ಯರ ಕೈಗೇ ಟೋಕನ್ ನೀಡಿರುವುದು ಆಕ್ಷೇಪಕ್ಕೆ ಕಾರಣವಾಗಿದೆ.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm