ಬ್ರೇಕಿಂಗ್ ನ್ಯೂಸ್
09-06-21 04:49 pm Mangalore Correspondent ಕರಾವಳಿ
ಮಂಗಳೂರು, ಜೂನ್ 9: ಹಿಂದು ಧಾರ್ಮಿಕ ದತ್ತಿ ಇಲಾಖೆಯಿಂದ ಮಸೀದಿ ಮದ್ರಸಗಳಿಗೆ ತಸ್ತಿಕ್ ಭತ್ತೆ ನೀಡುವ ರಾಜ್ಯ ಸರಕಾರದ ನಿರ್ಧಾರಕ್ಕೆ ವಿಶ್ವ ಹಿಂದು ಪರಿಷತ್ ವಿರೋಧ ವ್ಯಕ್ತಪಡಿಸಿದ್ದು ಕೂಡಲೇ ಈ ನಿರ್ಧಾರವನ್ನು ಹಿಂಪಡೆಯಬೇಕೆಂದು ಆಗ್ರಹಿಸಿದೆ.
ರಾಜ್ಯದಲ್ಲಿ ಕೋವಿಡ್ 19 ಸೋಂಕಿನಿಂದಾಗಿ ಅರ್ಚಕರು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ಕಾರಣ ಸರಕಾರದಿಂದ ತಸ್ತಿಕ್ ಭತ್ತೆ ನೀಡಲು ಆದೇಶಿಸಿದ್ದನ್ನು ವಿಶ್ವ ಹಿಂದು ಪರಿಷತ್ ಸ್ವಾಗತಿಸುತ್ತದೆ. ಆದರೆ ಅದೇ ಆದೇಶದಲ್ಲಿ ತಸ್ತೀಕ್ ಹಣವನ್ನು ಹಿಂದು ಧಾರ್ಮಿಕ ದತ್ತಿ ಇಲಾಖೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ 41 ಮಸೀದಿ, ಮದರಸದ ಮೌಲ್ವಿಗಳಿಗೆ ನೀಡಲು ನಿರ್ಧರಿಸಿದ್ದನ್ನು ವಿಶ್ವ ಹಿಂದು ಪರಿಷದ್ ವಿರೋಧಿಸುತ್ತದೆ. ದೈವಸ್ಥಾನ, ದೇವಸ್ಥಾನದ ಹಣವನ್ನು ಹಿಂದುಗಳಿಗೆ ಮತ್ತು ದೇವಸ್ಥಾನದ ಕಾರ್ಯಗಳಿಗೆ ಮಾತ್ರ ಉಪಯೋಗಿಸಬೇಕು ವಿನಃ ಮಸೀದಿ, ಮದರಸಗಳಿಗೆ ಉಪಯೋಗಿಸುವುದನ್ನು ಖಂಡಿಸುತ್ತೇವೆ. ಈ ನಿರ್ಧಾರವನ್ನು ಹಿಂಪಡೆಯಬೇಕೆಂದು ವಿಶ್ವ ಹಿಂದು ಪರಿಷತ್ ಮುಖಂಡರು ಧಾರ್ಮಿಕ ದತ್ತಿ ಇಲಾಖೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮನವಿ ಸಲ್ಲಿಸಿದ್ದಾರೆ.
ಮನವಿಗೆ ಸ್ಪಂದಿಸಿದ ಸಚಿವರು ನಿರ್ಧಾರವನ್ನು ಹಿಂದೆ ಪಡೆಯುವುದಾಗಿ ಭರವಸೆ ಕೊಟ್ಟಿದ್ದಾಗಿ ವಿಶ್ವ ಹಿಂದು ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪುವೆಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಚಿವರಿಗೆ ಮನವಿ ಸಲ್ಲಿಸಿದ ವೇಳೆ ವಿಹಿಂಪ ಜಿಲ್ಲಾ ಅಧ್ಯಕ್ಷರಾದ ಗೋಪಾಲ್ ಕುತ್ತಾರ್, ಜಿಲ್ಲಾ ಕಾರ್ಯದರ್ಶಿ ಶಿವಾನಂದ್ ಮೆಂಡನ್, ಜಿಲ್ಲಾ ಉಪಾಧ್ಯಕ್ಷರು ಮನೋಹರ್ ಸುವರ್ಣ, ಜಿಲ್ಲಾ ಸಂಚಾಲಕ್ ಪುನೀತ್ ಅತ್ತಾವರ ಉಪಸ್ಥಿತರಿದ್ದರು.
The state government has taken out an order to pay allowance to imams of 41 mosques and madrasas of Dakshina Kannada as Covid pandemic compensation. This amount will be paid from the funds of the Hindu Religious Endowment department. Vishwa Hindu Parishad (VHP) had opposed this move of the state government.
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
15-05-25 12:14 pm
HK Staff
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm