ಬ್ರೇಕಿಂಗ್ ನ್ಯೂಸ್
11-06-21 10:37 am Mangalore Correspondent ಕರಾವಳಿ
ಕೊಣಾಜೆ, ಜೂನ್ 11: ಕೈರಂಗಳ ಶಾರದಾ ವಿದ್ಯಾಗಣಪತಿ ಶಾಲಾ ಸಂಚಾಲಕರಾದ ಟಿ.ಜಿ.ರಾಜಾರಾಂ ಭಟ್ ಮುಂದಾಳತ್ವದಲ್ಲಿ "ನೆರವಿನ ಆಸರೆ" ಯೋಜನೆಯಡಿ ನರಿಂಗಾನ ಗ್ರಾಮದ ನಾರಾಯಣ ಪೂಜಾರಿ ಎಂಬವರ ಬಡ ಕುಟುಂಬಕ್ಕೆ ನೂತನ ಮನೆಯನ್ನು ನಿರ್ಮಿಸಲಾಗಿದೆ.
ಶಿಥಿಲಗೊಂಡಿದ್ದ ಮನೆಯಲ್ಲಿ ಜೀವನ ಸಾಗಿಸುತ್ತಿದ್ದ ನರಿಂಗಾನ ಗ್ರಾಮದ ಶೇಡಿಗುಂಡಿ ನಿವಾಸಿ ನಾರಾಯಣ ಪೂಜಾರಿ ಕುಟುಂಬಕ್ಕೆ ನೂತನ ಮನೆಯನ್ನು ನಿರ್ಮಿಸಿಕೊಡಲಾಗಿದೆ. ಹಿರಿಯರು ಕೈರಂಗಳ ಶಾರದಾ ವಿದ್ಯಾಗಣಪತಿ ಶಾಲಾ ಸಂಚಾಲಕರಾದ ಟಿ.ಜಿ.ರಾಜಾರಾಂ ಭಟ್ ಮುಂದಾಳುತ್ವದಲ್ಲಿ "ನೆರವಿನ ಆಸರೆ" ಯೋಜನೆಯಡಿ ಮನೆ ನಿರ್ಮಾಣಗೊಂಡಿದೆ.



ನಾರಾಯಣ ಪೂಜಾರಿಯವರಿಗೆ ನೂತನ ಮನೆ ನಿರ್ಮಿಸಲು ದೋಸೆ ಮನೆ ಶಂಕರ ಭಟ್ ಅವರು ಸ್ಥಳದಾನ ಮಾಡಿದ್ದಾರೆ. ಮನೆ ನಿರ್ಮಾಣದ ಬಹುತೇಕ ಖರ್ಚು ವೆಚ್ಚಗಳನ್ನು ರಾಜಾರಾಂ ಭಟ್ ಅವರೇ ಭರಿಸಿದ್ದು, ಸಹೃದಯಿ ದಾನಿಗಳ ಆರ್ಥಿಕ ಸಹಕಾರದಲ್ಲಿ ಸುಮಾರು 8 ಲಕ್ಷ ರೂಪಾಯಿ ವೆಚ್ಚದಲ್ಲಿ ನೂತನ ಮನೆ ನಿರ್ಮಾಣಗೊಂಡಿದೆ. ಮನೆ ನಿರ್ಮಾಣ ಕಾರ್ಯದಲ್ಲಿ ಸ್ಥಳೀಯ ಹಿಂದು ಜಾಗರಣಾ ವೇದಿಕೆಯ ಸದಸ್ಯರು ನಿರಂತರ ಶ್ರಮದಾನಗೈದಿದ್ದಾರೆ.
ಇದೇ ಬರುವ ಜೂ.15 ರ ಮಂಗಳವಾರ ನಾರಾಯಣ ಪೂಜಾರಿಯವರಿಗೆ ನೂತನ ಮನೆಯ ಕೀಲಿ ಕೈ ಹಸ್ತಾಂತರ ನಡೆಯಲಿದ್ದು ಈ ವೇಳೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖಂಡರಾದ ಕಲ್ಲಡ್ಕ ಪ್ರಭಾಕರ ಭಟ್ ಪಾಲ್ಗೊಳ್ಳಲಿದ್ದಾರೆ. ಅದೇ ದಿನ "ನೆರವಿನ ಆಸರೆ" ಯೋಜನೆಯ ಎರಡನೇ ಫಲಾನುಭವಿಯಾಗಿ ಆಯ್ಕೆಯಾಗಿರುವ ಬಾಳೆಪುಣಿ ಗ್ರಾಮದ ಕುಕ್ಕುದಕಟ್ಟೆ ನಿವಾಸಿ ಶರಣಪ್ಪ ಅವರಿಗೆ ನಿರ್ಮಾಣಗೊಳ್ಳಲಿರುವ ನೂತನ ಮನೆಯ ಕಾಮಗಾರಿಗೂ ಶಿಲಾನ್ಯಾಸ ಕಾರ್ಯ ನಡೆಯಲಿದೆ.
Director and Founder of Vidhyaganapathi school Rajaram Bhat have been a helping hand to a poor family by building a Brand New House for them at Konaje in Mangalore.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm