ಬ್ರೇಕಿಂಗ್ ನ್ಯೂಸ್
20-06-21 03:44 pm Mangaluru Correspondent ಕರಾವಳಿ
ಉಳ್ಳಾಲ, ಜೂ.20: ಬ್ಲಡ್ ಡೋನರ್ಸ್ ಮಂಗಳೂರು ಸಂಘಟನೆ ವಿವಿಧ ಸಂಘ- ಸಂಸ್ಥೆಗಳ ಸಹಯೋಗದಲ್ಲಿ ಕೊಣಾಜೆ ಬಳಿಯ ಬಾಳೆಪುಣಿ ಗ್ರಾಮದ ಹೂಹಾಕುವ ಕಲ್ಲಿನಲ್ಲಿ 300ನೇ ರಕ್ತದಾನ ಶಿಬಿರ ನಡೆಸಿದೆ.
ಮುಡಿಪು ಬ್ಲಾಕ್ ಯುವ ಕಾಂಗ್ರೆಸ್ ಹಾಗೂ ಉಳ್ಳಾಲ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ, ಯೆನಪೋಯ ಆಸ್ಪತ್ರೆ ದೇರಳಕಟ್ಟೆ , ಕೆ.ಎಂ.ಸಿ ಆಸ್ಪತ್ರೆ ಮಂಗಳೂರು, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಮಂಗಳೂರು ಸಹಯೋಗ ನೀಡಿದ್ದವು.
ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕುಮಾರಿ ದೀಪಿಕಾ ರೆಡ್ಡಿ ಕಾರ್ಯಕ್ರಮ ಉದ್ಘಾಟಿಸಿ, ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಯಕ್ರಮ ಆಯೋಜನೆಗಳು ಇತರ ಜಿಲ್ಲೆಗಳಿಗಿಂತ ವಿಭಿನ್ನವಾಗಿದೆ. ಕೊರೊನಾ ಸಂಕಷ್ಟ ಕಾಲದಲ್ಲಿ ಎಲ್ಲ ಕಡೆನೂ ರಕ್ತದ ಅವಶ್ಯಕತೆ ಇರುತ್ತದೆ. ಇಂತಹ ಸಮಯದಲ್ಲಿ ರಕ್ತದ ಅವಶ್ಯಕತೆಯನ್ನು ಪೂರೈಸಲು ಶ್ರಮಿಸುತ್ತಿರುವ ಬ್ಲಡ್ ಡೋನರ್ಸ್ ಸಂಸ್ಥೆಯ ಸಾಮಾಜಿಕ ಕಳಕಳಿ ಅನುಕರಣೀಯ ಎಂದು ಹೇಳಿದರು.
ಮಾಜಿ ಸಚಿವ ಶಾಸಕ ಯು.ಟಿ ಖಾದರ್ ಮಾತನಾಡಿ, ರಕ್ತದಾನ ಮಾಡಿ ಜೀವ ಉಳಿಸಿದ ಪ್ರತಿ ಫಲ ಖಂಡಿತವಾಗಿಯೂ ದೇವರು ನೀಡುತ್ತಾನೆ. ಹಿಂದಿನ ಕಾಲದಲ್ಲಿ ರಕ್ತದಾನ ಮಾಡಲು ಜನರಲ್ಲಿ ತಪ್ಪು ಅಭಿಪ್ರಾಯಗಳಿದ್ದವು. ಈಗ ಆ ರೀತಿಯ ಭಾವನೆ ತೊಲಗಿ ಸಮಾಜ ಕಾರ್ಯ ಎನ್ನುವ ರೀತಿ ಜನರು ರಕ್ತ ನೀಡುತ್ತಿದ್ದಾರೆ ಎಂದರು.
ಮಂಜೇಶ್ವರ ವಿಧಾನಸಭಾ ಕ್ಷೇತ್ರ ಶಾಸಕರಾದ ಎ.ಕೆ.ಅಶ್ರಫ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಲುಕ್ಮಾನ್ ಬಂಟ್ವಾಳ, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಶೆಟ್ಟಿ, ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರಶಾಂತ್ ಕಾಜವ , ಮುಖಂಡರಾದ ಪದ್ಮನಾಭ ನರಿಂಗಾನ, ಎನ್.ಎಸ್ ಕರೀಂ, ಸಿದ್ದೀಕ್ ಪಾರೆ, ಅಬ್ದುಲ್ ಜಲೀಲ್ ಮೋಂಟುಗೋಳಿ, ಮುರಲೀದರ ಮೋರ್ಲ, ಬ್ಲಡ್ ಡೋನರ್ಸ್ ಅದ್ಯಕ್ಷರಾದ ಸಿದ್ದೀಕ್ ಮಂಜೇಶ್ವರ , ಬ್ಲಡ್ ಡೋನರ್ಸ್ನ ಪ್ರಧಾನ ಕಾರ್ಯದರ್ಶಿ ನವಾಝ್ ಕಲ್ಲರಕೋಡಿ, ಕಾರ್ಯದರ್ಶಿ ರಝಾಕ್ ಸಾಲ್ಮರ, ಕಾರ್ಯನಿರ್ವಾಹಕ ಶಾಹುಲ್ ಹಮೀದ್ ಕಾಶಿಪಟ್ಣ, ಫಾರೂಕು ಆತೂರು, ಸೌದಿ ಘಟಕದ ಇರ್ಷಾದ್ ಉಚ್ಚಿಲ ಹಾಗೂ ದಮಾಮ್ ಘಟಕದ ಪರ್ಝಾನ್ ಸಿದ್ಧಕಟ್ಟೆ ಮೊದಲಾದವರು ಉಪಸ್ಥಿತರಿದ್ದರು.
Ullal, Mudupi Youth Congress hold blood donation camp in Balepuni, Mangalore.
08-08-25 06:23 pm
HK News Desk
Bigg Boss Rajath, Death Threats, Soujanya: ಯೂ...
08-08-25 11:20 am
ಸರ್ಕಾರಿ ಕೆಲಸ ಕೊಡಿಸೋದಾಗಿ 25 ಲಕ್ಷ ಪಡೆದು ವಂಚನೆ ;...
07-08-25 10:18 pm
ಧರ್ಮಸ್ಥಳ ಘರ್ಷಣೆ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ, ಎ...
07-08-25 05:50 pm
Dharmasthala burial case, Gag Order: ಮಾಧ್ಯಮ ನ...
06-08-25 10:51 pm
07-08-25 10:02 pm
HK News Desk
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
08-08-25 11:10 pm
Mangalore Correspondent
SIT, Kalleri, Buried Schoolgirl, Dharmasthala...
08-08-25 09:25 pm
ಧರ್ಮಸ್ಥಳ ಸುದ್ದಿ ಪ್ರಸಾರ ನಿರ್ಬಂಧಕ್ಕೆ ಸುಪ್ರೀಂ ನಿ...
08-08-25 08:26 pm
Bjp, Mangalore: ಎಡಪಂಥೀಯರು ಧರ್ಮಸ್ಥಳ ಕ್ಷೇತ್ರಕ್ಕ...
08-08-25 08:05 pm
Mangalore Safest City; ಕಡಿಮೆ ಕ್ರೈಮ್ ರೇಟ್, ಮಹಿ...
08-08-25 05:54 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm