ಬ್ರೇಕಿಂಗ್ ನ್ಯೂಸ್
20-06-21 10:43 pm Mangaluru Correspondent ಕರಾವಳಿ
ಮಂಗಳೂರು, ಜೂನ್ 20: ತಡೆಗೋಡೆ ಕಾಮಗಾರಿ ನಡೆಸುತ್ತಿದ್ದಾಗ ಗುಡ್ಡ ಕುಸಿದು ಕಾರ್ಮಿಕನೊಬ್ಬ ಮಣ್ಣಿನಡಿಗೆ ಬಿದ್ದರೂ ಎರಡು ಗಂಟೆಗಳ ಕಾರ್ಯಾಚರಣೆ ಬಳಿಕ ಅಪಾಯದಿಂದ ಪಾರಾಗಿ ಬಂದ ಘಟನೆ ಕುಪ್ಪೆಪದವು ಬಳಿಯ ಮಾರ್ಗದಂಗಡಿ ಬಳಿ ನಡೆದಿದೆ.
ಮಣ್ಣಿನಡಿ ಸಿಲುಕಿದ್ದ ವ್ಯಕ್ತಿಯನ್ನು ರಾಜೇಶ್ ಪೂಜಾರಿ (28) ಎಂದು ಗುರುತಿಸಲಾಗಿದೆ. ಮಾರ್ಗದಂಗಡಿ ಬಳಿಯ ನೊನಾಲು- ಕುಕ್ಕಟ್ಟೆ ರಸ್ತೆಯಲ್ಲಿ ಗುಡ್ಡ ಕುಸಿಯದಂತೆ ತಡೆಗೋಡೆ ನಿರ್ಮಾಣ ಕಾಮಗಾರಿ ನಡೆಸುತ್ತಿದ್ದಾಗ, ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ ಮಣ್ಣು ಕುಸಿದು ಬಿದ್ದಿದೆ. ಏಕಾಏಕಿ ಮೇಲಿಂದ ಮಣ್ಣು ಕುಸಿದು ಕಾರ್ಮಿಕರ ಮೇಲೆ ಬಿದ್ದಿತ್ತು.
ಈ ವೇಳೆ ತಡೆಗೋಡೆ ಮತ್ತು ಗುಡ್ಡದ ನಡುವೆ ಆಳ ಹೊಂಡದಲ್ಲಿ ರಾಜೇಶ್ ಸಿಲುಕಿದ್ದು ತಲೆಯ ಭಾಗ ಮಾತ್ರ ಹೊರಗೆ ಉಳಿದುಕೊಂಡಿತ್ತು. ಘಟನೆಯ ಬಗ್ಗೆ ತಿಳಿದು ಸ್ಥಳೀಯರು ರಕ್ಷಣಾ ಕಾರ್ಯ ನಡೆಸಿದ್ದಾರೆ. ಬಳಿಕ ಜೆಸಿಬಿ ತಂದು ನಿಧಾನಕ್ಕೆ ಮಣ್ಣು ತೆರವು ಮಾಡುವ ಕಾರ್ಯ ನಡೆಸಿದ್ದು ಸತತ ಎರಡು ಗಂಟೆಗಳ ಕಾರ್ಯಾಚರಣೆ ಬಳಿಕ ರಾಜೇಶ್ ನನ್ನು ಮೇಲಕ್ಕೆತ್ತಲಾಗಿದೆ. ಬಳಿಕ ಕುಪ್ಪೆಪದವಿನ ಖಾಸಗಿ ಆಸ್ಪತೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ರಾಜೇಶ್ ಬಂಟ್ವಾಳ ತಾಲೂಕಿನ ಅರಳ ಗ್ರಾಮದ ನಿವಾಸಿಯಾಗಿದ್ದು ಕೆಲಸಕ್ಕಾಗಿ ಕುಕ್ಕಟ್ಟೆಗೆ ಬಂದಿದ್ದರು. ಮಳೆ ಇದ್ದುದರಿಂದ ಇಕ್ಕಟ್ಟಾದ ಸ್ಥಳದಲ್ಲಿ ರಕ್ಷಣಾ ಕೆಲಸ ಕಷ್ಟವಾಗಿತ್ತು. ಸ್ಥಳೀಯರ ಸಕಾಲಿಕ ಪ್ರಯತ್ನದಿಂದ ಕಾರ್ಮಿಕ ಬಚಾವ್ ಆಗಿದ್ದಾನೆ.
A labourer was buried after a landslide during the demolition of a compound in Kuppepadav, rescued.
08-08-25 06:23 pm
HK News Desk
Bigg Boss Rajath, Death Threats, Soujanya: ಯೂ...
08-08-25 11:20 am
ಸರ್ಕಾರಿ ಕೆಲಸ ಕೊಡಿಸೋದಾಗಿ 25 ಲಕ್ಷ ಪಡೆದು ವಂಚನೆ ;...
07-08-25 10:18 pm
ಧರ್ಮಸ್ಥಳ ಘರ್ಷಣೆ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ, ಎ...
07-08-25 05:50 pm
Dharmasthala burial case, Gag Order: ಮಾಧ್ಯಮ ನ...
06-08-25 10:51 pm
07-08-25 10:02 pm
HK News Desk
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
08-08-25 11:10 pm
Mangalore Correspondent
SIT, Kalleri, Buried Schoolgirl, Dharmasthala...
08-08-25 09:25 pm
ಧರ್ಮಸ್ಥಳ ಸುದ್ದಿ ಪ್ರಸಾರ ನಿರ್ಬಂಧಕ್ಕೆ ಸುಪ್ರೀಂ ನಿ...
08-08-25 08:26 pm
Bjp, Mangalore: ಎಡಪಂಥೀಯರು ಧರ್ಮಸ್ಥಳ ಕ್ಷೇತ್ರಕ್ಕ...
08-08-25 08:05 pm
Mangalore Safest City; ಕಡಿಮೆ ಕ್ರೈಮ್ ರೇಟ್, ಮಹಿ...
08-08-25 05:54 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm