ಬ್ರೇಕಿಂಗ್ ನ್ಯೂಸ್
21-06-21 03:35 pm Mangaluru Correspondent ಕರಾವಳಿ
ಉಳ್ಳಾಲ, ಜೂ.21: ಕೋವಿಡ್ ನಿಂದ ಮೃತಪಟ್ಟ 12 ಮಂದಿ ಅನಾಥರ ಸದ್ಗತಿಗೆ ಪ್ರಾರ್ಥಿಸಿ ಇತಿಹಾಸ ಪ್ರಸಿದ್ಧ ಸೋಮೇಶ್ವರ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಹಿಂಭಾಗದ ಕಡಲ ತೀರದಲ್ಲಿ ಜಿಲ್ಲಾಡಳಿತದ ವತಿಯಿಂದ ತಿಲಹೋಮ, ಪಿಂಡ ಪ್ರದಾನ ಮಾಡಲಾಯಿತು.
ಜಿಲ್ಲೆಯಲ್ಲಿ ಕೋವಿಡ್ ನಿಂದ ಮೃತಪಟ್ಟ 12 ಮಂದಿಯ ಮೃತದೇಹದ ಸಂಸ್ಕಾರ ಮಾಡಿದ್ದು, ಮೃತದೇಹಗಳ ಅಸ್ಥಿಯನ್ನು ಶೇಖರಿಸಿ ಸೋಮೇಶ್ವರ ಕಡಲ ಕಿನಾರೆಯಲ್ಲಿ ಉಳ್ಳಾಲ ವೀರಭದ್ರ ದೇವಸ್ಥಾನದ ಪುರೋಹಿತರಾದ ಶಂಕರ ಕೃಷ್ಣ ಅಡಿಗ ಮಾರ್ಗದರ್ಶನದಲ್ಲಿ ತಿಲಹೋಮ ನಡೆಸಿ ಪಿಂಡ ಪ್ರದಾನ ಮಾಡಲಾಯಿತು. ಮೃತರ ಪರವಾಗಿ ತಾಲೂಕು ಪಂಚಾಯತ್ ಮಾಜಿ ಸದಸ್ಯ ರವಿಶಂಕರ್ ಸೋಮೇಶ್ವರ ಅವರು ವಿಧಿ ವಿಧಾನಗಳನ್ನು ನೆರವೇರಿಸಿದರು. ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ಸೋಮೇಶ್ವರ ಸಮುದ್ರಕ್ಕೆ ಪಿಂಡ ಪ್ರದಾನ ಮಾಡಿದರು.
ಕೋವಿಡ್ ನಿಂದ ಜಿಲ್ಲೆಯಲ್ಲಿ ಮೃತಪಟ್ಟ 12 ಮಂದಿ ಅನಾಥರ ಮೃತದೇಹಗಳನ್ನ ಶಾಸ್ತ್ರೋಕ್ತವಾಗಿ ಅಂತ್ಯ ಸಂಸ್ಕಾರ ನಡೆಸಿದ್ದಲ್ಲದೆ, ಅವರೆಲ್ಲರ ಆತ್ಮಕ್ಕೆ ಸದ್ಗತಿ ದೊರೆಯಬೇಕೆಂಬ ಉದ್ದೇಶದಿಂದ ಜಿಲ್ಲಾಡಳಿತದ ವತಿಯಿಂದಲೇ ಪಿಂಡ ಪ್ರದಾನ ಮಾಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದರು.







ಸಹಾಯಕ ಆಯಕ್ತ ಮದನ್ ಮೋಹನ್, ತಹಶೀಲ್ದಾರ್ ಗುರುಪ್ರಸಾದ್, ದ.ಕ. ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಕಸ್ತೂರಿ ಪಂಜ, ದಿ.ಮೈಸೂರ್ ಇಲೆಕ್ಟ್ರಿಕಲ್ಸ್ ಲಿ. ಅಧ್ಯಕ್ಷ ಸಂತೋಷ್ ಕುಮಾರ್ ಬೋಳಿಯಾರು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಈಶ್ವರ ಕಟೀಲು, ಕಾರ್ಯದರ್ಶಿ ಸತೀಶ್ ಕುಂಪಲ, ಕ್ಷೇತ್ರಾಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್, ಮುಖಂಡರಾದ ಚಂದ್ರಹಾಸ್ ಉಳ್ಳಾಲ್, ಚಂದ್ರಶೇಖರ ಉಚ್ಚಿಲ್, ಜಿಪಂ ಸದಸ್ಯೆ ಧನಲಕ್ಷ್ಮಿ ಗಟ್ಟಿ, ಪ್ರಮುಖರಾದ ಯಶವಂತ ಅಮೀನ್, ಹೇಮಂತ್ ಶೆಟ್ಟಿ, ಪುರುಷೋತ್ತಮ ಕಲ್ಲಾಪು, ಸುರೇಶ್ ಭಟ್ನಗರ, ದೀಪಕ್ ಪಿಲಾರು ಮೊದಲಾದವರು ಉಪಸ್ಥಿತರಿದ್ದರು.
State BJP President Naleen Kumar Kateel performs Pind Daan of 12 unknown persons who died of Covid at Someshwara temple in Ullal.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm