ಬ್ರೇಕಿಂಗ್ ನ್ಯೂಸ್
21-06-21 05:21 pm Satish, Bengaluru Correspondent ಕರಾವಳಿ
ಉಡುಪಿ, ಜೂ. 21: ಉಡುಪಿ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ ಸೇರಿ ಆರು ಜಿಲ್ಲೆಗಳನ್ನು ಮತ್ತೆ ಅನ್ ಲಾಕ್ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ನಿನ್ನೆಯಷ್ಟೇ ರಾಜ್ಯದ 16 ಜಿಲ್ಲೆಗಳನ್ನು ಪಟ್ಟಿ ಮಾಡಿ ಎರಡನೇ ಹಂತದ ಅನ್ ಲಾಕ್ ಆದೇಶ ಹೊರಡಿಸಿತ್ತು. ಆ ಭಾಗದಲ್ಲಿ ಸಾರಿಗೆ ಸೇರಿದಂತೆ ಬಹುತೇಕ ಚಟುವಟಿಕೆಗಳಿಗೆ ಬೆಳಗ್ಗಿನಿಂದ ಸಂಜೆ 5 ಗಂಟೆ ವರೆಗೆ ಅವಕಾಶ ನೀಡಲಾಗಿತ್ತು. ಆದರೆ ಈ ಪಟ್ಟಿಯಲ್ಲಿ ಉಡುಪಿ, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿತ್ರದುರ್ಗ, ವಿಜಯಪುರ ಜಿಲ್ಲೆಗಳು ಇರಲಿಲ್ಲ.
ರಾಜ್ಯ ಸರಕಾರ ಶೇ.5ಕ್ಕಿಂತ ಕಡಿಮೆ ಕೋವಿಡ್ ಪಾಸಿಟಿವಿಟ ಇರುವ 16 ಜಿಲ್ಲೆಗಳಲ್ಲಿ ಎರಡನೇ ಹಂತದ ಅನ್ ಲಾಕ್ ಪ್ರಕ್ರಿಯೆಗೆ ಪರಿಗಣಿಸಿತ್ತು. ಶೇ.5ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಇರುವ ಕಾರಣಕ್ಕೆ ಉಡುಪಿ ಜಿಲ್ಲೆಯನ್ನು ಆ ಪಟ್ಟಿಯಿಂದ ಕೈಬಿಡಲಾಗಿತ್ತು.

ಆದರೆ, ಶೇ.5.02 ಪಾಸಿಟಿವ್ ದರ ಉಡುಪಿ ಜಿಲ್ಲೆಯಲ್ಲಿತ್ತು. ಕೇವಲ ಪಾಯಿಂಟ್ ಅಂತರದ ಕಾರಣಕ್ಕೆ ಜನರನ್ನು ಕಷ್ಟಕ್ಕೆ ದೂಡಬಾರದು ಎಂದು ಶಾಸಕ ರಘುಪತಿ ಭಟ್ ಮುಖ್ಯಮಂತ್ರಿ ಅವರನ್ನು ಒತ್ತಾಯಿಸಿದ್ದರು. ಉಡುಪಿಯನ್ನು ಅನ್ ಲಾಕ್ ಮಾಡುವಂತೆ ಒತ್ತಾಯವನ್ನೂ ಮಾಡಿದ್ದರು. ಇದೇ ವೇಳೆ, ಪಾಯಿಂಟ್ ಅಂತರದಲ್ಲಿ ಅನ್ ಲಾಕ್ ಪ್ರಕ್ರಿಯೆಯಿಂದ ಹೊರಗುಳಿದಿದ್ದ ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ವಿಜಯಪುರ ಜಿಲ್ಲೆಗಳಿಂದಲೂ ಇದೇ ರೀತಿಯ ಬೇಡಿಕೆ ಬಂದಿತ್ತು.
ಶಾಸಕರು, ಸಂಸದರ ಒತ್ತಾಯದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಮರು ಆದೇಶ ಮಾಡಿದ್ದು, ಉಡುಪಿ ಸೇರಿ ಆರು ಜಿಲ್ಲೆಗಳನ್ನು ಎರಡನೇ ಹಂತದ ಅನ್ ಲಾಕ್ ಪ್ರಕ್ರಿಯೆಗೆ ಒಳಪಡಿಸಿ ಆದೇಶಿಸಿದ್ದಾರೆ. ಅದರಂತೆ ಬೆಳಗ್ಗೆ ಆರು ಗಂಟೆಯಿಂದ ಸಂಜೆ 5 ಗಂಟೆ ವರೆಗೆ ಬಹುತೇಕ ಸರಕಾರಿ ಮತ್ತು ಖಾಸಗಿ ಕಚೇರಿ, ಅಂಗಡಿಗಳನ್ನು ತೆರೆಯಲು ಅನುವು ಮಾಡಲಾಗಿದೆ. ಅಲ್ಲದೆ, ಖಾಸಗಿ ಮತ್ತು ಕೆಎಸ್ಸಾರ್ಟಿಸಿ ಬಸ್ ಓಡಾಟಕ್ಕೂ ಅವಕಾಶ ನೀಡಲಾಗಿದೆ.
ದಕ್ಷಿಣ ಕನ್ನಡ ಪ್ರವೇಶ ಹೊರತುಪಡಿಸಿ ಸಾರಿಗೆ ಬಸ್ ಇನ್ನಿತರ ವಾಹನಗಳು ಉಡುಪಿ, ಶಿವಮೊಗ್ಗ, ಕಾರವಾರ ಭಾಗದಲ್ಲಿ ಓಡಾಡಬಹುದಾಗಿದ್ದು ಎರಡು ತಿಂಗಳ ಲಾಕ್ಡೌನ್ ಬಳಿಕ ಜನರಿಗೆ ಮತ್ತೆ ನಿಟ್ಟುಸಿರು ಬಿಡುವಂತಾಗಿದೆ.
After considering the weekly moving average positivity rate as on June 20, lockdown restrictions have been relaxed in Udupi district from Monday June 21. After the Unlock 2.0 regulations and districts were announced by chief minister (CM) B S Yediyurappa, many had urged for the inclusion of Udupi in the list. Udupi MLA Raghupati Bhat and Udupi-Chikkamagaluru MP Shobha Karandlaje had also urged the CM to relax lockdown restrictions in Udupi earlier.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
11-10-26 10:28 pm
HK News Desk
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
12-10-26 11:30 am
HK News Staffer
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
12-10-26 10:06 am
HK News Staffer
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm