ಬ್ರೇಕಿಂಗ್ ನ್ಯೂಸ್
23-06-21 04:06 pm Mangalore Correspondent ಕರಾವಳಿ
ಉಳ್ಳಾಲ, ಜೂ.23: ವಿದ್ಯಾರ್ಥಿಗಳು ಬಲಿಷ್ಠರಾದರೆ ಮಾತ್ರ ಈ ದೇಶ ಬಲಿಷ್ಠವಾಗುತ್ತದೆ ಹೊರತು ಮಂತ್ರಿಗಳು, ಸಂಸದರು, ಶಾಸಕರಿಂದ ಸಾಧ್ಯವಿಲ್ಲ. ಹಾಗಾಗಿ ಶಿಕ್ಷಣದಲ್ಲಿ ಸ್ಪರ್ಧೆಗೆ ಸರಕಾರ ಎಲ್ಲ ರೀತಿಯ ವ್ಯವಸ್ಥೆ ಮಾಡುತ್ತಿದ್ದು ಶಿಕ್ಷಣಕ್ಕೆ ಆದ್ಯತೆ ನೀಡುವುದೇ ಮುಖ್ಯ ಗುರಿ ಎಂದು ಶಾಸಕ ಯು.ಟಿ. ಖಾದರ್ ಹೇಳಿದರು.
ಅವರು ಇಂದು ಕುರ್ನಾಡು ಮುಡಿಪುವಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ಮಾರ್ಟ್ ಕ್ಲಾಸ್ ಹಾಗೂ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ ಗಳನ್ನು ವಿತರಿಸಿ ಮಾತನಾಡಿದರು.
ಯಾವುದೇ ಅಭಿವೃದ್ಧಿಯಲ್ಲಿ ಕನಿಷ್ಟ ಮುಂದಿನ ಮೂವತ್ತು ವರ್ಷಗಳ ದೂರದೃಷ್ಟಿ ಇರಬೇಕು. ಇಲ್ಲಿ ಸುಂದರ ಪರಿಸರ, ಸುಂದರ ಕಟ್ಟಡ, ನುರಿತ ಉಪನ್ಯಾಸಕರು, ಸಿಬ್ಬಂದಿ ಎಲ್ಲ ಸೌಲಭ್ಯಗಳಿಂದ ಸುಸಜ್ಜಿತವಾಗಿದ್ದು ಈಗ ಕಲಿಯುತ್ತಿರುವ ವಿದ್ಯಾರ್ಥಿಗಳ ಸಾಧನೆ ಮುಂದೆ ಕಲಿಯಲು ಬರುವ ವಿದ್ಯಾರ್ಥಿಗಳಿಗೆ ಪೂರಕವಾಗಬೇಕು ಎಂದರು.
ಕಾಲೇಜಿನ ಪ್ರಾಂಶುಪಾಲರಾದ ಗಿರಿಧರ್ ರಾವ್ ಪ್ರಾಸ್ತಾವಿಕ ಮಾತುಗಳನ್ನಾಡಿ ಮುಡಿಪು ಪ್ರಥಮ ದರ್ಜೆ ಕಾಲೇಜಿಗೆ ಹೊಸ ಕಟ್ಟಡದ ಜೊತೆಗೆ ಸ್ಮಾರ್ಟ್ ಕ್ಲಾಸ್ ಯೋಜನೆಯಡಿ ಮೂರು ತರಗತಿ ನಡೆಸಿಕೊಡಲು ಹಾಗೂ ಪ್ರಥಮ ಪದವಿಯ 93 ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ ದೊರಕಿಸಿಕೊಟ್ಟಿರುವುದು ಶ್ಲಾಘನೀಯ. ವರ್ಷದ ಹಿಂದೆ ಒಂದು ತರಗತಿಯಲ್ಲಿದ್ದ ಕೆಲವು ವರ್ಗದ ವಿದ್ಯಾರ್ಥಿಗಳಿಗೆ ಮಾತ್ರ ಟ್ಯಾಬ್ ಸಿಗುತ್ತಿದ್ದು , ಈಗ ತರಗತಿಯ ಎಲ್ಲ ವಿದ್ಯಾರ್ಥಿಗಳಿಗೆ ದೊರಕಿರುವುದು ತುಂಬ ಖುಷಿ ಕೊಟ್ಟಿದೆ ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಸದಸ್ಯೆ ಮಮತಾ ಡಿ.ಎಸ್. ಗಟ್ಟಿ, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರಶಾಂತ ಕಾಜವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಚಂದ್ರಹಾಸ್ ಕರ್ಕೇರ, ಕಾಲೇಜಿನ ಐಟಿ ಸಂಚಾಲಕ ಅಜಯ್, ಅಬ್ದುಲ್ ಜಲೀಲ್ ಮೋಂಟುಗೋಳಿ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು, ಪದವಿಪೂರ್ವ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
Mudupi government school inaugurates Smart Class with tabs.
08-08-25 06:23 pm
HK News Desk
Bigg Boss Rajath, Death Threats, Soujanya: ಯೂ...
08-08-25 11:20 am
ಸರ್ಕಾರಿ ಕೆಲಸ ಕೊಡಿಸೋದಾಗಿ 25 ಲಕ್ಷ ಪಡೆದು ವಂಚನೆ ;...
07-08-25 10:18 pm
ಧರ್ಮಸ್ಥಳ ಘರ್ಷಣೆ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ, ಎ...
07-08-25 05:50 pm
Dharmasthala burial case, Gag Order: ಮಾಧ್ಯಮ ನ...
06-08-25 10:51 pm
07-08-25 10:02 pm
HK News Desk
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
08-08-25 11:10 pm
Mangalore Correspondent
SIT, Kalleri, Buried Schoolgirl, Dharmasthala...
08-08-25 09:25 pm
ಧರ್ಮಸ್ಥಳ ಸುದ್ದಿ ಪ್ರಸಾರ ನಿರ್ಬಂಧಕ್ಕೆ ಸುಪ್ರೀಂ ನಿ...
08-08-25 08:26 pm
Bjp, Mangalore: ಎಡಪಂಥೀಯರು ಧರ್ಮಸ್ಥಳ ಕ್ಷೇತ್ರಕ್ಕ...
08-08-25 08:05 pm
Mangalore Safest City; ಕಡಿಮೆ ಕ್ರೈಮ್ ರೇಟ್, ಮಹಿ...
08-08-25 05:54 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm