ಬ್ರೇಕಿಂಗ್ ನ್ಯೂಸ್
02-07-21 08:57 pm Mangaluru Correspondent ಕರಾವಳಿ
ಮಂಗಳೂರು, ಜುಲೈ 2: ಬೀದಿ ನಾಯಿಯನ್ನು ಗುಂಡು ಹಾರಿಸಿ ಕೊಲೆಗೈದಿರುವ ಘಟನೆ ಮಂಗಳೂರು ನಗರದಲ್ಲಿ ಬೆಳಕಿಗೆ ಬಂದಿದ್ದು, ಸಾರ್ವಜನಿಕ ವಲಯದಲ್ಲಿ ಆಕ್ರೋಶ ಕೇಳಿಬಂದಿದೆ.
ಗುರುವಾರ ಸಂಜೆ ನಗರದ ಶಿವಭಾಗ್ ಆಭರಣ ಜುವೆಲ್ಲರಿ ಬಳಿಯಲ್ಲಿ ನಾಯಿಯ ಶವ ಕಂಡುಬಂದಿತ್ತು. ಇದನ್ನು ಯಾರೋ ಸ್ಥಳೀಯರು ಗಮನಿಸಿ ಅನಿಮಲ್ ಕೇರ್ ಟ್ರಸ್ಟ್ ನವರಿಗೆ ಮಾಹಿತಿ ನೀಡಿದ್ದಾರೆ. ಮೇಲ್ನೋಟಕ್ಕೆ ಗುಂಡು ಹೊಡೆದು ಸಾಯಿಸಿದ ರೀತಿ ಕಂಡುಬಂದಿದ್ದರಿಂದ ಅನಿಮಲ್ ಕೇರ್ ಟ್ರಸ್ಟಿನ ಸುಮಾ ನಾಯಕ್ ಈ ಬಗ್ಗೆ ಕದ್ರಿ ಠಾಣೆಗೆ ದೂರು ನೀಡಿದ್ದಾರೆ.
ದೂರಿನ ಹಿನ್ನೆಲೆಯಲ್ಲಿ ಪೊಲೀಸರು ನಾಯಿಯನ್ನು ಪೋಸ್ಟ್ ಮಾರ್ಟಂ ನಡೆಸಲು ಸೂಚಿಸಿದ್ದಾರೆ. ಇದರಂತೆ, ಇಂದು ಪಶು ವೈದ್ಯರು ನಾಯಿಯನ್ನು ಪೋಸ್ಟ್ ಮಾರ್ಟಂ ನಡೆಸಿದ್ದು, ದೇಹದ ಒಳಹೊಕ್ಕಿದ್ದ ಗುಂಡನ್ನು ಹೊರತೆಗೆದಿದ್ದಾರೆ. ಈ ಬಗ್ಗೆ ಮಂಗಳೂರು ನಗರ ಡಿಸಿಪಿ ಹರಿರಾಮ್ ಶಂಕರ್ ಬಳಿ ಕೇಳಿದರೆ, ವೈದ್ಯರ ಪರಿಶೀಲನೆಯಲ್ಲಿ ಏರ್ ಗನ್ ಬಳಸಿ ನಾಯಿಯನ್ನು ಕೊಂದಿರುವ ರೀತಿ ಕಂಡುಬಂದಿದೆ. ಬುಲೆಟ್ ಪೀಸ್ ದೇಹದಲ್ಲಿ ಒಳಗಿದ್ದುದನ್ನು ತೆಗೆದು ವಶಕ್ಕೆ ಪಡೆಯಲಾಗಿದೆ. ಕದ್ರಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸ್ಥಳದಲ್ಲಿ ಸಿಸಿಟಿವಿ ಇದೆಯೇ ಎನ್ನುವ ಬಗ್ಗೆ ಪರಿಶೀಲನೆ ನಡೆಸಿ ತನಿಖೆ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಸಾರ್ವಜನಿಕ ಜಾಗದಲ್ಲಿ ಬೀದಿ ನಾಯಿಯನ್ನು ಈ ರೀತಿ ಅಮಾನುಷವಾಗಿ ಗುಂಡು ಹೊಡೆದು ಸಾಯಿಸಿರುವುದು ಮಂಗಳೂರಿನಲ್ಲಿ ಹೊಸ ಬೆಳವಣಿಗೆ. ಇತ್ತೀಚೆಗೆ ನಾಯಿಯನ್ನು ಬೈಕಿಗೆ ಕಟ್ಟಿ ಎಳೆದುಕೊಂಡು ಹೋಗಿರುವುದು, ಆನಂತರ ಮತ್ತೊಂದು ಪ್ರಕರಣದಲ್ಲಿ ಸತ್ತ ನಾಯಿಯನ್ನು ಎಳ್ಕೊಂಡು ಹೋಗಿದ್ದ ಬಗ್ಗೆ ಪ್ರಕರಣ ದಾಖಲಾಗಿತ್ತು. ಎರಡೂ ಪ್ರಕರಣಗಳಲ್ಲಿ ಉತ್ತರ ಕರ್ನಾಟಕ ಮೂಲದ ನಾಲ್ವರನ್ನು ಬಂಧಿಸಲಾಗಿತ್ತು.
ಇದೀಗ ನಾಯಿಗೆ ಗುಂಡು ಹಾರಿಸಿ ಕೊಲೆ ಮಾಡಿರುವುದು ಕಂಡುಬಂದಿದ್ದು, ಮಾನವೀಯತೆ ಮರೆತು ವರ್ತಿಸಿರುವುದರ ಸಂಕೇತ ಎನ್ನುವ ಆಕ್ರೋಶ ಕೇಳಿಬಂದಿದೆ.
In another inhuman act reported against animals, a stray dog was found shot dead in Mangalore at Shivbagh. The incident took place on Friday July. An air gun pellet was found in the body of the dog during post-mortem.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm