ಬ್ರೇಕಿಂಗ್ ನ್ಯೂಸ್
17-07-21 10:29 pm Mangaluru Correspondent ಕರಾವಳಿ
ಮಂಗಳೂರು, ಜುಲೈ 17: ಯುವಕನೊಬ್ಬ ಆಟೋ ರಿಕ್ಷಾದಲ್ಲಿ 42 ಕೆಜಿ ಗಾಂಜಾ ಇಟ್ಟು ಮಾರಾಟಕ್ಕೆ ಯತ್ನಿಸುತ್ತಿದ್ದ ಪ್ರಕರಣದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆರೋಪಿಗೆ 10 ವರ್ಷ ಕಠಿಣ ಸಜೆ ಹಾಗೂ 1 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಬಂಟ್ವಾಳ ತಾಲೂಕಿನ ಕಾರ್ಯಾಡಿ ಕುಳ ಗ್ರಾಮದ ನಿವಾಸಿ ಅಬ್ದುಲ್ ರಹೀಂ (29) ಶಿಕ್ಷೆಗೊಳಗಾದ ಯುವಕ.
ಮಂಗಳೂರಿನ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ನಾಲ್ಕನೇ ಮೈಲು ರಸ್ತೆಯ ಎ.ಜೆ.ಶೆಟ್ಟಿ ಇಂಜಿನಿಯರಿಂಗ್ ಕಾಲೇಜಿಗೆ ತೆರಳುವ ಜಾಗದಲ್ಲಿ 2018 ಸೆ.8ರಂದು ಮಧ್ಯಾಹ್ನ 1.45 ಸುಮಾರಿಗೆ ಆರೋಪಿಗಳಾದ ಅಬ್ದುಲ್ ರಹೀಂ, ರಾಜೀವ್ ಎ.ಪಿ. ಹಾಗೂ ಕಲಂದರ್ ಶಾಫಿ ಆಟೋ ರಿಕ್ಷಾ ಹಾಗೂ ಬೈಕ್ನಲ್ಲಿ ಅನುಮಾನಾಸ್ಪದವಾಗಿ ನಿಂತಿದ್ದರು. ಈ ವೇಳೆ ಕರ್ತವ್ಯದಲ್ಲಿದ್ದ ಕಾವೂರು ಠಾಣೆಯ ಪೊಲೀಸ್ ನಿರೀಕ್ಷಕ ಕೆ.ಆರ್.ನಾಯ್ಕ್ ಹಾಗೂ ಸಿಬ್ಬಂದಿ ಅನುಮಾನಗೊಂಡು ಪರಿಶೀಲಿಸಿದ್ದು ರಿಕ್ಷಾದಲ್ಲಿ 42.230 ಕೆಜಿಯ 20 ಪ್ಯಾಕೇಟ್ ಗಾಂಜಾ ಪತ್ತೆಯಾಗಿತ್ತು. ತಕ್ಷಣ ಅಬ್ದುಲ್ ರಹೀಂ ಹಾಗೂ ರಾಜೀವ್ ಎ.ಪಿ.ಯನ್ನು ಬಂಧಿಸಿದ ಪೊಲೀಸರು ಗಾಂಜಾ ಸಹಿತ ರಿಕ್ಷಾ ಹಾಗೂ ಬೈಕ್ ಗಳನ್ನು ವಶಕ್ಕೆ ಪಡೆದಿದ್ದರು. ಬೈಕ್ ನಲ್ಲಿದ್ದ ಆರೋಪಿ ಕಲಂದರ್ ಶಾಫಿ ತಪ್ಪಿಸಿಕೊಂಡಿದ್ದ.

ಕಾವೂರು ಪೊಲೀಸ್ ಠಾಣೆಯಲ್ಲಿ ಅಬ್ದುಲ್ ರಹೀಂ, ರಾಜೀವ್ ಎ.ಪಿ., ಕಲಂದರ್ ಶಾಫಿ ಸಹಿತ ಬೈಕ್ ಮಾಲೀಕ ರಫೀಕ್ ಮಂಡ್ಕೂರು ಮೇಲೆ ಪ್ರಕರಣ ದಾಖಲಾಗಿತ್ತು. ಕಾವೂರು ಠಾಣೆಯ ನಿರೀಕ್ಷಕ ರಫೀಕ್ ಕೆ.ಎಂ. ಅವರು ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಪ್ರಧಾನ ಜಿಲ್ಲಾ ಹಾಗೂ ಸತ್ರ ಮತ್ತು ವಿಶೇಷ ನ್ಯಾಯಾಲಯ ವಿಚಾರಣೆ ನಡೆಸಿ ಆರೋಪಿಗಳ ಮೇಲಿನ ಆರೋಪ ಸಾಬೀತಾಗಿದೆ ಎಂದು ಘೋಷಿಸಿದೆ.
ಈ ನಡುವೆ ಆರೋಪಿ ರಾಜೀವ್ ಎ.ಪಿ. ಮೃತಪಟ್ಟಿದ್ದು, ರಫೀಕ್ ಮಂಡ್ಯೂರು ಹಾಗೂ ಕಲಂದರ್ ಶಾಫಿ ತಲೆ ಮರೆಸಿಕೊಂಡಿದ್ದರು. ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ಮತ್ತು ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಮುರಳೀಧರ ಪೈ ಬಿ. ಅವರು ಸೆಕ್ಷನ್ 8C 20(B) (ll) (C) ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಅಬ್ದುಲ್ ರಹೀಂಗೆ 10 ವರ್ಷಗಳ ಕಾಲ ಕಠಿಣ ಸಜೆ, 1 ಲಕ್ಷ ರೂ. ದಂಡ ವಿಧಿಸಿ ಆದೇಶಿಸಿದೆ. ದಂಡ ತೆರಲು ತಪ್ಪಿದ್ದಲ್ಲಿ 1 ವರ್ಷ ಸಾದಾ ಸಜೆ ಅನುಭವಿಸಬೇಕು. ತಲೆಮರೆಸಿಕೊಂಡ ಆರೋಪಿಗಳ ಪ್ರಕರಣ ವಿಭಜಿಸಿ ಮುಂದುವರಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಸರ್ಕಾರಿ ಅಭಿಯೋಜಕರಾದ ರಾಜು ಪೂಜಾರಿ ಬನ್ನಾಡಿ ಹಾಗೂ ಬಿ.ಶೇಖರ್ ಶೆಟ್ಟಿ ಸರ್ಕಾರದ ಪರವಾಗಿ ವಾದಿಸಿದ್ದಾರೆ.
The Mangalore court has sentenced the accused to 10 years of rigorous imprisonment and 1 lakh fine for selling drugs near private college. for a term not exceeding ten years, and shall also be liable to fine. Punishment—Imprison
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 03:28 pm
HK News Desk
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm